Heavy Rain Alert: ಕೆಲವೇ ಕ್ಷಣಗಳಲ್ಲಿ ಮಿಂಚು ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ
ಜೂನ್ ತಿಂಗಳ ಮೊದಲ ದಿನವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಗುಡುಗು-ಮಿಂಚು ಸಹಿತ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಜೂನ್ 8ರವರೆಗೂ ವ್ಯಾಪಕ ಮಳೆಯಾಗುವ ಮುನ್ಸೂಚನೆ ಕೊಟ್ಟಿದೆ.
ಶನಿವಾರ ಸಂಜೆ ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಇಡೀ ರಾತ್ರಿ ಹಲವು ರಾಜ್ಯದ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ.

ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಾತ್ರವಲ್ಲದೆ ಬೀದರ್, ಕಲಬುರಗಿ, ಹಾಸನ, ಕೋಲಾರ, ಮಂಡ್ಯ, ತುಮಕೂರು, ಯಾದಗಿರಿಯ ಒಂದು ಅಥವಾ ಎರಡು ಕಡೆ ಮಿಂಚು, ಸಿಡಿಲು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಿರುಗಾಳಿ ಮಳೆ ಎಚ್ಚರಿಕೆ
ಚಂಡಮಾರುತದ ಪರಿಚಲನೆಯು ದಕ್ಷಿಣ ಕೇರಳದ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಮಧ್ಯಮ ವಾಯುಮಂಡಲದ ಮಟ್ಟದಲ್ಲಿದ್ದು, ಇನ್ನೊಂದು ಚಂಡಮಾರುತದ ಪರಿಚಲನೆಯು ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಕರಾವಳಿ ಆಂಧ್ರಪ್ರದೇಶದ ಮೇಲೆ ಇದೆ. ಕೇರಳ ಕರಾವಳಿಯುದ್ದಕ್ಕೂ ಪಶ್ಚಿಮ ದಿಕ್ಕಿನ ಜೋರಾದ ಗಾಳಿ ಬೀಸುತ್ತಿರುವ ಕಾರಣ ಮುಂದಿನ 7 ದಿನ ರಾಜ್ಯದಲ್ಲಿ ಬಿರುಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜೂನ್ 1 ಮತ್ತು 2 ರಂದು ದಕ್ಷಿಣಒಳನಾಡು ಜಿಲ್ಲೆಗಳಲ್ಲಿಅಲ್ಲಲ್ಲಿ ಭಾರಿಮಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ; ಜೂನ್ 2 ಮತ್ತು 3 ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದೆ.
ಜೂನ್ 1 ರಿಂದ ಜೂನ್ 9 ರವರೆಗೆ ರಾಜ್ಯದ ದಕ್ಷಿಣ ಒಳನಾಡು ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಹೊಂದಿಕೊಂಡಂತ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹೇಳಿದೆ.












Click it and Unblock the Notifications