Rain Alert: ಈ ನಾಲ್ಕು ಜಿಲ್ಲೆಗಳಿಗೆ ಗುಡುಗು, ಸಿಡಿಲು ಸಹಿತ ಮಳೆ ಎಚ್ಚರಿಕೆ!

ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ದಿನೇ ದಿನೇ ತಾಪಮಾನ ಹೆಚ್ಚಾಗುತ್ತಿದ್ದು ಈ ಬಾರಿ ಬೇಸಿಗೆಯಲ್ಲಿ ತೀವ್ರ ತಾಪಮಾನ ಇರುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ. ಆದರೆ ಈ ನಡುವೆಯೇ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಗುರುವಾರ ಮಳೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮಾಹಿತಿ ನೀಡಿದೆ.

ಎಕ್ಸ್ ಖಾತೆಯಲ್ಲಿ ಮಳೆ ಬಗ್ಗೆ ಅಪ್‌ಡೇಟ್ ಕೊಟ್ಟಿರುವ ಕೆಎಸ್‌ಎನ್‌ಡಿಎಂಸಿ, ಗುರುವಾರ ಸಂಜೆ ಬಳ್ಳಾರಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಬೇಸಿಗೆ ಕಾಲ ಆರಂಭವಾಗುವ ಸಮಯದಲ್ಲೇ ಅಕಾಲಿಕ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

Imd gives heavy rain alert to dharwad bllari and these dirstricts

2024ರ ಮಳೆಗಾಲದಲ್ಲಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗಿತ್ತು, ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು. ಈ ಬಾರಿ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇಲ್ಲ ಎಂದು ನಿರೀಕ್ಷೆ ಮಾಡಲಾಗಿದೆ. ಈ ಬಾರಿ ಬೇಸಿಗೆಯಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.

ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆ

ಫೆಬ್ರವರಿಯಲ್ಲಿ ವಾಡಿಕೆಗಿಂತ ತಾಪಮಾನ ಹೆಚ್ಚಾಗಿದೆ. 2.5 ಡಿಗ್ರಿ ಸೆಲ್ಸಿಯಸ್ ಬಿಸಿಲು ಅಧಿಕವಾಗಿದ್ದರೆ, ಈ ಬಾರಿ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗುರುವಾರ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಪಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ
ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಈ ಬಾರಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಫೆಬ್ರವರಿ - ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಮಳೆ ಬೀಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ. ಮುಂಗಾರಿನಲ್ಲಿ ಹೆಚ್ಚಿನ ಮಳೆಯಾದರೂ, ಹಿಂಗಾರಿನಲ್ಲಿ ವಾಡಿಕೆಗಿಂದ ಕಡಿಮೆ ಮಳೆಯಾಗಲುದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳಿನಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಸಭೆಯಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+