Karnataka Rains: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾರಾಂತ್ಯಕ್ಕೆ ಭಾರೀ ಮಳೆ

ಬೆಂಗಳೂರು ಜನವರಿ 30: ರಾಜ್ಯದಲ್ಲಿ ದಿನ ಕಳೆದಂತೆ ಚಳಿ ಪ್ರಮಾಣ ಕಡಿಮೆಯಾಗುತ್ತಿದೆ. ಈ ನಡುವೆ ಫೆಬ್ರವರಿ ಆರಂಭದಲ್ಲಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಫೆಬ್ರವರಿ 1 ಮತ್ತು 2ನೇ ತಾರೀಖು ಮಳೆ ಬೀಳಲಿದೆ ಎಂದು ಐಎಂಡಿ ಭವಿಷ್ಯ ನುಡಿದಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಕರ್ನಾಟಕದ ಹಲವೆಡೆ ಫೆಬ್ರವರಿ 1ರಂದು ಭಾರೀ ಮಳೆ ಬೀಳುವ ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಭಾರೀ ಮಳೆ ಬೀಳಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಮಳೆಯಾಗುವ ಸಾಧ್ಯತೆ ಇದೆ.

Imd has forecast heavy rains in many parts of karnataka including bengaluru from february 1

ಇನ್ನೂ ಚಿಕ್ಕಮಗಳೂರು, ಹಾಸನ, ಕೊಡಗುವಿನ ಸುತ್ತಮುತ್ತ ಭಾಗಗಳಲ್ಲಿ ಮಳೆ ಜೋರಾಗಿರಲಿದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ ಭಾಗಗಳಲ್ಲಿ ಮಳೆ ಹೆಚ್ಚಾಗಿರಲಿದೆ. ಫೆಬ್ರವರಿ 2ರಿಂದ ರಾಜ್ಯದಾದ್ಯಂತ ಮತ್ತೆ ಎಂದಿನಂತೆ ಒಣ ಹವೆ ಮುಂದುವರೆಯಲಿದೆ.

ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ,ರಾಮನಗರ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೆರೆದಂತೆ ಹಲವೆಡೆ ಒಣ ಹವೆ ಮುಂದುವರೆಯಲಿದೆ.

ರಾಯಚೂರಿನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪಣಂಬೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 33.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ನಗರದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದರೆ, ಕೆಐಎಲ್‌ನಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಾವಣಗೆರೆಯಲ್ಲಿ 11.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+