Karnataka Rain: ಕರ್ನಾಟಕದಾದ್ಯಂತ ಇಂದು ಈ ಪ್ರದೇಶಗಳಲ್ಲಿ ಮಳೆ ಅರ್ಭಟ ಜೋರು...

ಬೆಂಗಳೂರು ಸೆಪ್ಟೆಂಬರ್ 16: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಸಾಧಾರಣ ಮಳೆಯಾಗುತ್ತಿದೆ. ರಾಜದಾದ್ಯಂತ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದು ಮಳೆಯ ಪ್ರಮಾಣ ತೀರಾ ಕಡಿಮೆಯಾಗಿದೆ. ಇಂದು ಕೂಡ ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಸೂಚನೆ ನೀಡಿದೆ.

ಇಂದು (ಸೆ.16) ದಕ್ಷಿಣ ಕನ್ನ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳಲಿದೆ. ಕೊಡಗು, ಹಾಸನ, ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗಳಲ್ಲೂ ಮಳೆ ಪ್ರಮಾಣ ಕಡಿಮೆ ಇರಲಿದೆ. ಮಲೆನಾಡಿನಲ್ಲಿ ಕಳೆದ ಕೆಲ ದಿನಗಳಿಂದ ವರಣುನ ಅರ್ಭಟ ಕಡಿಮೆಯಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ.

IMD has given information about the rain forecast on September 16 across Karnataka

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಇನ್ನೂ ಬೆಂಗಳೂರಿನಲ್ಲಿ ಕಳೆದ ದಿನ ಸಂಜೆಯ ವಾತಾವರಣ ಸಂಪೂರ್ಣವಾಗಿ ಬದಲಾಗಿತ್ತು. ಮೋಡ ಕವಿದ ವಾತಾವರಣ ಆವರಿಸಿತ್ತು. ಆದರೆ ಮಳೆಯಾಗಲಿಲ್ಲ. ಮುಂದಿನ 24 ಗಂಟೆವರೆಗೂ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ದಿನ ಕರಾವಳಿ ಮತ್ತು ಒಳನಾಡಿನ ಒಂದೆರೆಡು ಸ್ಥಳಗಳಲ್ಲಿ ಮಾತ್ರ ಮಳೆಯಾಗಿದೆ. ಹೊನ್ನಾವರ, ಶಿರಡಿ, ಸಿದ್ದಾಪುರದಲ್ಲಿ ಎರಡು ಸೆ.ಮೀ ಮಳೆಯಾಗಿದೆ. ಉಡುಪಿಯಲ್ಲಿ ಮೂರು ಸೆಂ.ಮೀ, ಕುಂದಾಪುರ, ಉಪ್ಪಿನಂಗಡಿ, ಕಾರ್ಕಳ, ಕುಮಟಾ ಹಾಗೂ ಕಮ್ಮರಡಿ, ಹಾಸನದಲ್ಲಿ ಒಂದು ಸೆ.ಮೀ ಮಳೆ ಬಿದ್ದಿದೆ.

ಇತರೆ ರಾಜ್ಯಗಳಿಗೆ ಮಳೆ ಎಚ್ಚರಿಕೆ

ಛತ್ತೀಸ್‌ಗಢ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ಸೆಪ್ಟೆಂಬರ್ 17 ರವರೆಗೆ ಅತಿ ಹೆಚ್ಚು ಮಳೆಯನ್ನು ನಿರೀಕ್ಷಿಸಬಹುದು ಎಂದು ಐಎಂಡಿ ಸೂಚನೆ ನೀಡಿದೆ. ಪಶ್ಚಿಮ ಮಧ್ಯಪ್ರದೇಶ ಕೂಡ ಸೆಪ್ಟೆಂಬರ್ 17 ರಿಂದ 18 ರವರೆಗೆ ಮಳೆಯನ್ನು ಕಾಣಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪೂರ್ವ ಮಧ್ಯಪ್ರದೇಶದಲ್ಲಿ ಸೆಪ್ಟೆಂಬರ್ 17 ರಂದು ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಛತ್ತೀಸ್‌ಗಢದಲ್ಲಿ ಸೆಪ್ಟೆಂಬರ್ 17 ರವರೆಗೆ ಭಾರೀ ಮಳೆ ಬೀಳಲಿದೆ. ಪಶ್ಚಿಮ ಮಧ್ಯಪ್ರದೇಶವು ಸೆಪ್ಟೆಂಬರ್ 18 ಮತ್ತು 19 ರಂದು ಇದೇ ರೀತಿಯ ಪರಿಸ್ಥಿತಿಗಳನ್ನು ಎದುರಿಸಲಿದೆ ಎಂದು ಊಹಿಸಲಾಗಿದೆ.

ದೆಹಲಿಯಲ್ಲಿ ಹಳದಿ ಎಚ್ಚರಿಕೆ

ದೆಹಲಿಯ ಪ್ರಾದೇಶಿಕ ಹವಾಮಾನ ಕೇಂದ್ರ ಹಳದಿ ಎಚ್ಚರಿಕೆಯನ್ನು ನೀಡಿದೆ. ಮೋಡ ಕವಿದ ವಾತಾವರಣ ದೆಹಲಿಯಲ್ಲಿ ಮುಂದುವರೆಯಲಿದ್ದು ಸೆಪ್ಟೆಂಬರ್ 18ರವರೆಗೆ ಗುಡುಗು ಸಹಿತ ಲಘು ಮಳೆಯಾಗಲಿದೆ. ರಾಷ್ಟ್ರೀಯ ರಾಜಧಾನಿಯಲ್ಲಿ ತಾಪಮಾನ ಸುಮಾರು 32 ° C ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+