karnataka Rain: ಕರ್ನಾಟಕದಲ್ಲಿ ಮುಂದಿನ ಮೂರು ದಿನ ದಾರಕಾರ ಮಳೆ: ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಅರ್ಭಟ!

ರಾಜ್ಯದಲ್ಲಿ ಕಳೆದ ದಿನ ಅಲ್ಲಲ್ಲಿ ಭಾರೀ ಮಳೆಯಾಗಿದೆ. ಆದರೆ ಅದ್ಯಾಕೋ ಬೆಂಗಳೂರಿನತ್ತ ಮಳೆರಾಯ ಮುಖ ಮಾಡುತ್ತಿಲ್ಲ. ಇಂದು ನಾಳೆ ಮಳೆ ಬರುತ್ತೆ ಅನ್ನೋ ಆಸೆಯಲ್ಲಿ ಜನ ಕಾದು ಕುಳಿತಿದ್ದಾರೆ. ಇದೇ ವೇಳೆ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಐಎಂಡಿ ನೀಡಿದೆ.

ಮಳೆಗಾಗಿ ಜನ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಕಾಶವನ್ನು ನೋಡುತ್ತಾ ಕೂರುವ ಪರಿಸ್ಥಿತಿ ಎದುರಾಗಿದೆ. ಆದರೆ ಆಕಾಶದಲ್ಲಿ ಮಳೆ ಮೋಡವೇ ಕಾಣಿಸುತ್ತಿಲ್ಲ. ಸೂರ್ಯನ ಬೆಳಕು ಕಣ್ಣು ತೆರೆಯಲು ಬಿಡುತ್ತಿಲ್ಲ. ಬಿಸಿಲಿನ ಝಳಕ್ಕೆ ಜನ ಹೈರಾಣಾಗಿ ಹೋಗಿದ್ದಾರೆ. ಈ ನಡುವೆ ರಾಜ್ಯದಲ್ಲಿ ಬಿಸಿಲಿನಿಂದಾಗಿ ಕಂಗೆಟ್ಟಿರುವ ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿಯನ್ನು ನೀಡಿದೆ.

IMD has predicted heavy rains in Karnataka for the next three days

ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸೂಚನೆಯನ್ನು ಐಎಂಡಿ ನೀಡಿದೆ. ಅಲ್ಲದೆ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಧಾರವಾಡದ ಮಂದಿಗೆ ಪೇಡಾ ಕೊಟ್ಟ ಮಳೆರಾಯ...

ಕಳೆದ ದಿನ ಧಾರವಾಡದ ಮಂದಿಗೆ ಪೇಡಾವನ್ನು ಮಳೆರಾಯ ಕೊಟ್ಟಿದ್ದಾನೆ. ಗುರುವಾರ ಧಾರವಾಡದಲ್ಲಿ ಆಲಿಕಲ್ ಸಮೇತ ಮಳೆ ಸುರಿದಿದೆ. ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು ಅಲ್ಲಲ್ಲಿ ಮರಗಳು ಉರುಳಿವೆ. ಮಾತ್ರವಲ್ಲದೆ ವಿಜಯನಗರದ ಹೊಸಪೇಟೆಯಲ್ಲೂ ಭಾರೀ ಮಳೆಯಾಗಿದ್ದು ಮಳೆರಾಯ ಬಿಸಿಲಿನಂದ ಕೊಂಚ ರಿಲೀಫ್ ನೀಡಿದ್ದಾರೆ. ಕಳೆದ ದಿನ ದೇವಲಾಪುರ, ಮರಿಯಮ್ಮನಹಳ್ಳಿ ಸೇರಿದಂತೆ ನಾನಾ ಕಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಎಲ್ಲೆಲ್ಲಿ ಮಳೆಯಾಗಲಿದೆ....?

ಐಎಂಡಿ ಮಾಹಿತಿ ಪ್ರಕಾರ ರಾಯಚೂರು, ವಿಜಯನಗರ, ದಾರವಣಗೆರೆ, ಹುಬ್ಬಳ್ಳಿ, ಧಾರವಾಡ, ಹಾವೇರಿ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಭಾರತೀಯ ಹವಾಮನ ಇಲಾಖೆಯ ಪ್ರಕಾರ ಗಂಟೆಗೆ 30ರಿಂದ 40 ಕಿಲೋ ಮೀಟರ್ ಗಾಳಿ ಬೀಸಲಿದ್ದು ಜನ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಕಳೆದ ದಿನ ಎಲ್ಲೆಲ್ಲಿ ಮಳೆ?
ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ಕೊಪ್ಪಳ, ವಿಜಯನಗರ, ಚಿಕ್ಕಮಗಳೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ವಿಜಯಪುರದಲ್ಲಿ ಕೆಲಕಾಲ ಗಾಳಿ, ಸಿಡಿಲು-ಗುಡುಗು ಸಹಿತ ಉತ್ತಮ ಮಳೆಯಾಗಿದೆ. ವಿಜಯನಗರದಲ್ಲಿ ಕೆಲವೆಡೆ ಆಲಿಕಲ್ಲು ಬಿದ್ದ ವರದಿಯಾಗಿದೆ.

ಮೈಸೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪಾಲಿಗೆ ಇದು ವರ್ಷದ ಮೊದಲ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಕೊಮಚ ತಂಪಿನ ಅನುಭವವಾದಂತಾಗಿದೆ. ಇನ್ನು ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು, ದಾವಣಗೆರೆ, ಉತ್ತರ ಕನ್ನಡದಲ್ಲಿ ಭಾರೀ ಗಾಳಿ ಸಹಿತ ಕೆಲಕಾಲ ಸಿಡಿಲಬ್ಬರದ ಮಳೆಯಾಗಿರುವ ಹಿನ್ನೆಲೆಯಲ್ಲಿ ಜನ ಜೀವನ ಕೊಂಚ ಅಸ್ತವ್ಯಸ್ತಗೊಂಡಿದೆ.

ವಿಜಯಪುರ ನಗರದ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಆದಿಲ್ ಶಾಹಿ ಕಾಲದ ಐತಿಹಾಸಿಕ ಮೆಹತರ್‌ಮಹಲ್‌ನ ಮಿನಾರ್ ಗೋಪುರ ಸಿಡಿಲ ಹೊಡೆತಕ್ಕೆ ಕುಸಿದು ಬಿದ್ದಿದೆ. ಮಿನಾರ್‌ನ ಮೇಲ್ಬಾಗದಲ್ಲಿದ್ದ ಒಂದು ಬದಿಯ ಗೋಪುರದ ಕಲ್ಲುಗಳು ಬಿದ್ದ ಪರಿಣಾಮ ಕೆಳಗಡೆ ನಿಂತಿದ್ದ ಕಾರಿಗೂ ಹಾನಿಯಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಇಂದು ಭಾರಿ ಮಳೆಯ ನಿರೀಕ್ಷೆ
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಇಂದು ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ ಎರಡು ದಿನಗಳ ಕಾಲ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಉಳಿದೆಡೆ ಒಣಹವೆ ಮುಂದುವರೆಯಲಿದೆ.

IMD has predicted heavy rains in Karnataka for the next three days

ಪಂಜಾಬ್‌ನಲ್ಲಿ ಮಳೆ ಎಚ್ಚರಿಕೆ..

ಹವಾಮಾನ ಇಲಾಖೆ ಪಂಜಾಬ್-ಹರಿಯಾಣದಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಎಚ್ಚರಿಕೆಯನ್ನು ನೀಡಿದೆ. ಏಪ್ರಿಲ್ 18 ಮತ್ತು 21 ರ ನಡುವೆ ಬಲವಾದ ಚಂಡಮಾರುತದೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಹವಾಮಾನದಲ್ಲಿ ಬದಲಾವಣೆಗಳು ಕಂಡುಬರುತ್ತವೆ. ಅನೇಕ ಸ್ಥಳಗಳಲ್ಲಿ ತಂಪಾದ ಗಾಳಿಯು ಕಂಡುಬರುತ್ತದೆ.

ಏಪ್ರಿಲ್ 19ರಂದು ಮಳೆಯಾಗಿದ್ದು ಎಲ್ಲಿ?
ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರು ಮಂದಿಗೆ ಮಳೆರಾಯ ತಂಪೆರೆದಿದ್ದಾನೆ. ಕಳೆದ ದಿನ (ಏಪ್ರಿಲ್ 19) ನಗರದ ಯಲಹಂಕ, ಕೆಂಗೇರಿ ಸೇರಿದಂತೆ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ ಎಂದು ವರದಿಯಾಗಿದೆ. ಈ ಮೂಲಕ ಬೆಂಗಳೂರು ಕೊಂಚ ತಂಪಾಗಿದೆ. ಇನ್ನು ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗಬಹುದೆಂಬ ನಿರೀಕ್ಷೆಯಲ್ಲಿ ಜನರು ಇದ್ದಾರೆ. ಇಂದಿನಿಂದ ಮೂರು ದಿನ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದು (ಏಪ್ರಿಲ್ 20) ಮಳೆಯಾಗುವ ಸೂಚನೆ
ಇನ್ನೂ ನಿರೀಕ್ಷೆಯಂತೆ ಬೆಳಗಾವಿಯಲ್ಲಿ ಮಳೆಯಾಗಿದೆ. ಈ ಮೂಲಕ ವರುಣ ಬೆಳಗಾವಿ ಜನತೆಗೆ ವರುಣ ದೇವ ಕುಂದಾ ನೀಡಿದ್ದಾನೆ. ಇನ್ನೂ ಇಂದು (ಏಪ್ರಿಲ್ 20) ಧಾರವಾಡದಲ್ಲಿ ಮಳೆಯಾಗುವ ಸೂಚನೆಯಿದ್ದು, ಇದರೊಂದಿಗೆ, ಬೀದರ್, ಧಾರವಾಡ, ಗದಗ, ಕಲಬುರಗಿಯಲ್ಲೂ ಇಂದು ಮಳೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+