Karnataka Rain:ಕರ್ನಾಟಕದಲ್ಲಿ ಭರ್ಜರಿ ಮಳೆ ಮುನ್ಸೂಚನೆ: ಮುಂದಿನ 7 ದಿನ ವರುಣನ ಅರ್ಭಟ- ಎಲ್ಲಿ? ಯಾವಾಗ?

ರಾಜ್ಯದಲ್ಲಿ ಅಕ್ಷಯ ತೃತೀಯ ಹಬ್ಬದ ಸಂತಸವನ್ನು ಮಳೆರಾಯ ಹೆಚ್ಚಿಸಿದ್ದಾನೆ. ಅಕ್ಷಯ ತೃತೀಯ ಹಬ್ಬವನ್ನು ಆಚರಿಸುವ ಜನರಿಗೆ ಇಂದು ವಾತಾವರಣ ತಂಪಾಗಿದ್ದು ಹಬ್ಬದ ಮೆರಗು ಹೆಚ್ಚಿಸಿದೆ. ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು ಹವಾಮಾನವೇ ಬದಲಾಗಿದೆ. ಬಿಸಿ ಝಳದಿಂದ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಅಲ್ಲದೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ 7 ದಿನ 40-50 ಕಿಮೀ ವೇಗದಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ರಾಜ್ಯದಲ್ಲಿ ಸಾಧಾರಣದಿಂದ ಅಧಿಕ ಮಳೆ ಮುಂದುವರೆಯಲಿದೆ ಎಂದು ಐಎಂಡಿ ಭವಿಷ್ಯ ನುಡಿದಿದೆ. ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ. ಹಾಗಾದರೆ ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಯೋಣ.

IMD has predicted that there will be rain in Karnataka for the next 7 days

ಮೇ 10ರಂದು ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೊಡಗು, ಕೋಲಾರ ಮತ್ತು ವಿಜಯನಗರದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಮೇ 11ರಂದು ಜಿಲ್ಲೆಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗುಡುಗು, ಮಿಂಚು, ಗಾಳಿಯೊಂದಿಗೆ (40-50 ಕಿಮೀ) ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಬೆಂಗಳೂರು ನಗರ ಪ್ರದೇಶದ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

IMD has predicted that there will be rain in Karnataka for the next 7 days

ಇನ್ನೂ ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 ಕಿಮೀ) ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಯಾದಗಿರಿ, ರಾಯಚೂರು, ಬಳ್ಳಾರಿ, ಕೋಲಾರದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (40-50 ಕಿಮೀ) ಸಾಧಾರಣ ಮಳೆ / ಗುಡುಗು ಸಹಿತ ಮೇ 12ರಂದು ಅಂದರೆ ಭಾನುವಾರ ಮಳೆಯಾಗುವ ಸಾಧ್ಯತೆಯಿದೆ.

ಜೊತೆಗೆ ಬಾಗಲಕೋಟೆ, ಗದಗ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಬೆಳಗಾವಿ, ಧಾರವಾಡ, ರಾಯಚೂರು, ವಿಜಯಪುರ, ದಾವಣಗೆರೆ, ಚಿತ್ರದುರ್ಗದ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಬೀದರ್, ಹಾವೇರಿ, ಕಲಬುರ್ಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಲಘುವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮೇ 13ರಂದು ಅಂದರೆ ಮುಂದಿನ ಸೋಮವಾರ ಮಳೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+