Karnataka rains: ಇಂದಿನಿಂದ ರಾಜ್ಯದಲ್ಲಿ 5 ದಿನ ಜೋರು ಮಳೆ: ಕರಾವಳಿಗೆ ಅಲರ್ಟ್

ಬೆಂಗಳೂರು, ಜುಲೈ 18: ಕರ್ನಾಟಕದಲ್ಲಿ ಇಂದು ಮಂಗಳಾವಾರದಿಂದ ಐದು ದಿನಗಳವರೆಗೆ ಹಗುರದಿಂದ ಸಾಧಾರಣ ಮಳೆ ಹಾಗೂ ಕೆಲವು ಜಿಲ್ಲೆಗಳಿಲ್ಲಿ ಅತ್ಯಧಿಕ ಮಳೆ ಸುರಿಯಲಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೆಲವು ವಾರಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಮತ್ತದೇ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಬರಲಿದ್ದು, 'ಯೆಲ್ಲೋ ಅಲರ್ಟ್' ಘೋಷಿಲಾಗಿದೆ. ನಂತರ ಜುಲೈ 21 ಮತ್ತು 22ರಂದು ಅತ್ಯಧಿಕ ಮಳೆ ನಿರೀಕ್ಷೆ ಪ್ರಯುಕ್ತ ಅಂದು 'ಆರೆಂಜ್ ಅಲರ್ಟ್' ನೀಡಲಾಗಿದೆ.

IMD Heavy Rain Forecast Issued Next 4 Days For Coastal and Interior Districts of karnataka

ಕರಾವಳಿ ತೀರ ಪ್ರದೇಶಗಳಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-45 ಕಿಲೋ ಮೀಟರ್ ವೇಗದಲ್ಲಿ ರಭಸದಿಂದ ಬೀಸಲಿದೆ. ಈ ಕಾರಣದಿಂದ ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಬೆಳಗ್ಗೆಯಿಂದ ಜಿಟಿ ಜಿಟಿ ಮಳೆ

ರಾಜ್ಯದ ಒಳನಾಡಿನ ವಿವಿಧ ಜಿಲ್ಲೆಗಳಲ್ಲೂ ಸಹ ಮುಂಗಾರು ಮತ್ತಷ್ಟು ಚುರುಕು ಪಡೆದುಕೊಂಡಿದೆ. ಈ ಕಾರಣದಿಂದಲೇ ಮಂಗಳವಾರ ಬೆಳಗ್ಗೆಯೇ ದಾವಣಗೆರೆ, ರಾಣೆಬೆನ್ನೂರು, ಹಾವೇರಿ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ವಿವಿದ ಜಿಲ್ಲೆಗಳಲ್ಲಿ ಆಗಾಗ ಜಿಟಿ ಜಿಟಿ ಮಳೆ ಕಂಡು ಬರುತ್ತಿದೆ.

ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಮುಂದಿನ ಐದು ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ. ಜುಲೈ 21ರಿಂದ ಮೂರು ದಿನ ಬೆಳಗಾವಿ, ಎರಡು ದಿನ ಬೀದರ್‌ ಜಿಲ್ಲೆ ಒಂದು ದಿನ ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಪ್ರಯುಕ್ತ ಯೆಲ್ಲೋ ಅಲರ್ಟ್ ನೀಡಲಾಗಿದೆ.

IMD Heavy Rain Forecast Issued Next 4 Days For Coastal and Interior Districts of karnataka

ಅದೇ ರೀತಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ನಾಳೆಯಿಂದ ನಾಲ್ಕು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಬಳ್ಳಾರಿ, ಚಿತ್ರದುರ್ಗ, ದಾವರಣಗೆರೆ, ವಿಜಯನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ಹಾಸನ, ತಮಕೂರು ಜಿಲ್ಲೆಗಳಲ್ಲಿ ಕೆಲವೊಮ್ಮೆ ಹಗುರ ಮಳೆಯಾದರೆ, ಇನ್ನೂ ಕೆಲವೊಮ್ಮೆ ಸಾಧಾರಣವಾಗಿ ಮಳೆ ಆಗುವ ಲಕ್ಷಣಗಳು ಇವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಸಮುದ್ರ ತೀರ ದ ಜಿಲ್ಲೆಗಳಲ್ಲಿ ಅಧಿಕ ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ ಬಿದ್ದಿದೆ. ರಾಜ್ಯದ ಗರಿಷ್ಠ ತಾಪಮಾನ ರಾಯಚೂರು, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ 32 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹಾಸನದಲ್ಲಿ 15 ಮತ್ತು ಚಿಕ್ಕಮಗಳೂರಿನಲ್ಲಿ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+