Karnataka rain alert: ಡಿಸೆಂಬರ್ 1ರವರೆಗೆ ರಾಜ್ಯದ ಈ ಜಿಲ್ಲೆಗಳಗೆ ಭಾರಿ ಮಳೆ, ಹವಾಮಾನ ವರದಿ

ಬೆಂಗಳೂರು, ನವೆಂಬರ್ 23: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸಲು ಶುರುವಿಟ್ಟುಕೊಂಡಿದೆ. ಕಳೆದೊಂದು ವಾರದಿಂದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಧಾರಾಕಾರವಾಗಿ ಮಳೆ ಆಗಿದೆ. ಈ ಮಳೆ ಮುಂದಿನ ಎರಡು ವಾರಗಳ ಕಾಲ ಮುಂದುವರಿಯಲಿದೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ತಿಂಗಳು ಡಿಸೆಂಬರ್ 1ರವರೆಗೆ ವ್ಯಾಪಕವಾಗಿ ಮಳೆ ಆಗಲಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಅಬ್ಬರಿಸಲಿದೆ. ಕರಾವಳಿಯ ಮೂರು ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗೆ ಮಳೆ ಬಿರುಸಾಗಿರಲಿದೆ.

IMD Heavy Rain Issued for Several Interior Districts of Karnataka, Two Week Rain Continue Expect

ಮುಂದಿನ ಮೂರು ದಿನಗಳ ಮಳೆ ಮುನ್ಸೂಚನೆ ನೋಡುವುದಾದರೆ ದಕ್ಷಿಣ ಒಳನಾಡಿನ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗೆ ಶುಕ್ರವಾರ ಒಂದು ಭಾರಿ ಮಳೆ ಸಂಬಂಧ 'ಯೆಲ್ಲೋ ಅಲರ್ಟ್' ಘೋಷಣೆ ಮಾಡಿದೆ.

ಉಳಿದಂತೆ ಇದೇ ಒಳನಾಡು ಭಾಗದ ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿಮವೊಗ್ಗ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಜೋರು ಮಳೆ ಬರುವ ನಿರೀಕ್ಷೆಗಳು ಇವೆ.

IMD Heavy Rain Issued for Several Interior Districts of Karnataka, Two Week Rain Continue Expect

ಕರಾವಳಿಯಲ್ಲೂ ಅಬ್ಬರಿಸಲಿದೆ ವರುಣ

ಇನ್ನೂ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಹ ಶುಕ್ರವಾರದಿಂದ ಮೂರು ದಿನ ಮಳೆ ಅಬ್ಬರಿಲಿದೆ. ಮೂರು ದಿನಗಳ ನಂತರವು ಈ ಮಳೆ ತುಸು ದುರ್ಬಲಗೊಂಡರು ಸಹಿತ ಮತ್ತೆ ಡಿಸೆಂಬರ 1ರವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಒಳನಾಡಿನಲ್ಲಿ ಯಾವುದೇ ಮಳೆ ಮುನ್ಸೂಚನೆಗಳು ಇಲ್ಲ. ಆಗಾಗ ಬಿಸಿಲು ಕಡಿಮೆಯಾಗಿ ಮೋಡ ಕವಿದ ವಾತಾವರಣ ಅಲ್ಲಲ್ಲಿ ಕಂಡು ಬಂದರೂ ಸಹಿತ ತುಂತುರು ಮಳೆ ನಿರೀಕ್ಷೆ ಇದೆ ಹೊರತು ಜೋರು ಮಳೆ ಸಂಭವ ಇಲ್ಲ. ಅಲ್ಲದೇ ಇಲ್ಲಿನ ಹವಾಮಾನದಲ್ಲಿ ಯಾವುದೇ ಗಂಭೀರ ಸ್ವರೂಪದ ಲಕ್ಷಣಗಳು ಇಲ್ಲ ಎಂದು ತಿಳಿಸಲಾಗಿದೆ.

ಎರಡು ವಾರಗಳ ಕಾಲ ಮಳೆ ಬರುವ ನಿರೀಕ್ಷೆ

ಸಮುದ್ರ ಮಟ್ಟದಲ್ಲಿ ನಿರಂತರವಾಗಿ ಹವಾಮಾನ ಬದಲಾವಣೆಗಳು ಆಗುತ್ತಿವೆ ಈ ಸಂಬಂಧ ಒಂದು ದಿನ ಮೋಡ ಕವಿದು ಮಳೆ ಬಂದರೆ, ಮಾರನೇ ದಿನ ಬಿಸಿಲಿನ ವಾತಾವರಣ ಕಂಡು ಬರುತ್ತಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಹವಾಮಾನ ಇಲಾಖೆಯು ಮುಂದಿನ ಎರಡು ವಾರಗಳ ಕಾಲ ಮಳೆ ಬರುವ ಬಗ್ಗೆ ಕುರಿತು ಮಾಹಿತಿ ಕಲೆ ಹಾಕಿದೆ. ಈ ಪೈಕಿ ಮೂರರಿಂದ ಐದು ದಿನಗಳ ಬದಲಾವಣೆಗಳ ಬಗ್ಗೆ ಪ್ರತಿನಿತ್ಯ ಮಾಹಿತಿ ಒದಗಿಸುತ್ತಿದೆ.

ಕರ್ನಾಟಕ ರಾಜ್ಯ ಗರಿಷ್ಠ ತಾಪಮಾನ ನೋಡುವುದಾರೆ, ಹೊನ್ನಾವರ ಮತ್ತು ಕಾರವಾಗ ಭಾಗದಲ್ಲಿ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಉಳಿದಂತೆ ಪೆಣಂಬೂರು, ಶಿರಾಲಿ ಮತ್ತು ಕಲಬುರಗಿಯಲ್ಲಿ ಗರಿಷ್ಠ ತಲಾ 33 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶಾ ದಾಖಲಾಗಿದೆ. ಇನ್ನೂ ಕನಿಷ್ಠ ತಾಪಮಾನವು ಚಿಕ್ಕಮಗಳೂರಿನಲ್ಲಿ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಬೆಂಗಳೂರಿನ ಹವಾಮಾನ ವರದಿ

ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಿಂದ ಜೋರು ಮಳೆ ಆಗುತ್ತಿದೆ. ಬುಧವಾರ ನಗರ ವ್ಯಾಪ್ತಿಯಲ್ಲಿ ಜೋರು ಮಳೆ ಸುರಿದ ಸಂಚಾರ, ಕೆಲವೆಡೆ ಜನಜೀವನ ಅಸ್ತವೆಸ್ತವಾಗಿದೆ. ಮುಂದಿನ ಎರಡು ದಿನ ಇದೇ ರೀತಿಯ ತಂಪು ಮತ್ತು ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+