ಏಪ್ರಿಲ್ 21ರಂದು ರಾಜ್ಯಾದ್ಯಂತ ಮಳೆ ಸಾಧ್ಯತೆ
Recommended Video

ಬೆಂಗಳೂರು, ಏಪ್ರಿಲ್ 19: ರಾಜ್ಯದಲ್ಲಿ ದಟ್ಟ ಮೋಡಗಳ ಸಾಲು ಟ್ರಫ್ ಮುಂದುವರಿದಿದ್ದು, ಏ.21ರಂದು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಟ್ರಫ್ ಪರಿಣಾಮದಿಂದಾಗಿ ಏಪ್ರಿಲ್ ಆರಂಭದಿಂದಲೇ ಅಲ್ಲಲ್ಲಿ ಮಳೆಯಾಗುತ್ತಿದೆ. ಉತ್ತರ ಒಳನಾಡು ಹಾಗೂ ಕರಾವಳಿಗೂ ಮಳೆ ವ್ಯಾಪಿಸಿದ್ದು, ಕಳೆದ ಒಂದು ದಿನದಿಂದ ಮಳೆ ಕಡಿಮೆಯಾಗಿದೆ. ಟ್ರಫ್ ತೀವ್ರತೆ ಇನ್ನೂ ಇರುವುದರಿಂದ ಏ.21ರಂದು ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಉತ್ತರ ಒಳನಾಡಿನ ಕೆಲವೆಡೆ ಹಾಗೂ ಕರಾವಳಿಯಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬುಧವಾರ ಜಮಖಂಡಿಯಲ್ಲಿ 4 ಸೆಂ.ಮೀ., ಅಥಣಿ, ಖಜೂರಿ, ಅಫಜಲಪುರ, ಕಲಬುರ್ಗಿಯಲ್ಲಿ 2 ಸೆಂ.ಮೀ., ಹುಬ್ಬಳ್ಳಿ, ಕುಂದರಗಿ, ಇಂಡಿ, ಭಾಗಮಂಡಲ, ನಾಪೋಕ್ಲು, ಶೃಂಗೇರಿ, ಲೋಕಾಪುರದಲ್ಲಿ 1 ಸೆಂ.ಮೀ. ಮಳೆಯಾಗಿದೆ. ಮಳೆ ಕಡಿಮೆಯಾಗಿರುವುದರಿಂದ ಕೆಲ ಜಿಲ್ಲೆಗಳಲ್ಲಿ ತಾಪಮಾನ ಸ್ವಲ್ಪ ಏರಿಕೆಯಾಗಿದೆ.

ಕಲಬುರಗಿಯಲ್ಲಿ ಗರಿಷ್ಠ 41.4 ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣವಿರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಗರಿಷ್ಠ 34.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23.5 ಡಿಗ್ರಿ ಸೆಲ್ಸಿಯಸ್, ಕೆಐಎಎಲ್ ನಲ್ಲಿ ಗರಿಷ್ಠ 35.8ಡಿಗ್ರಿ ಸೆಲ್ಸಿಯಸ್ ಕನಿಷ್ಠ 22.2 ಡಿಗ್ರಿ ಸೆಲ್ಸಿಯಸ್, ಎಚ್ ಎಎಲ್ ನಲ್ಲಿ ಗರಿಷ್ಠ 35.1ಡಿಗ್ರಿ ಸೆಲ್ಸಿಯಸ್, ಕನಿಷ್ಠ 23.4ಡಿಗ್ರಿ ಸಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.












Click it and Unblock the Notifications