ಕರ್ನಾಟಕದಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು, ಜುಲೈ 03: ಮಳೆ ಕೊರತೆಯಿಂದ ಆಗಸ ನೋಡುವಂತಾಗಿದ್ದ ಕರ್ನಾಟಕದ ಜನರಿಗೆ ಸಿಹಿಸುದ್ದಿ ಇದೆ. ಜುಲೈ ಮೊದಲ ವಾರದಲ್ಲಿಯೇ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಇನ್ನೂ 5 ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದು, ಆರೆಂಜ್ ಅಲರ್ಟ್‌ ಘೋಷಣೆ ಮಾಡಿದೆ. ಭಾನುವಾರ ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.

IMD Issued Heavy Rain Alert For Karnataka For Five Days

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ 5 ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೇ ಗಂಟೆಗೆ 40 ರಿಂದ 55 ಕಿ. ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ 115 ಮಿ. ಮೀ. ನಿಂದ 204 ಮಿ. ಮೀ. ತನಕ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನಲ್ಲಿ ಮಳೆ; ದಕ್ಷಿಣ ಒಳನಾಡಿನಲ್ಲಿ ಮಳೆ; ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಸೋಮವಾರ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜುಲೈ 4ರಿಂದ ನಾಲ್ಕು ದಿನಗಳ ಕಾಲ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜುಲೈ 6ರಂದು ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ 204 ಮಿ. ಮೀ. ಗಿಂತ ಹೆಚ್ಚಿನ ಮಳೆ ನಿರೀಕ್ಷೆ ಮಾಡಲಾಗಿದೆ.

ಜುಲೈ 2 ರಿಂದ 6ರ ನಡುವೆ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ನಿರೀಕ್ಷೆ ಮಾಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಾವಣಗೆರೆ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಸಂಜೆ ಉತ್ತಮ ಮಳೆಯಾಗಿದೆ.

ಬೆಂಗಳೂರು ನಗರದಲ್ಲಿ ಭಾನುವಾರ ಸಂಜೆ ಸುಮಾರು 45 ನಿಮಿಷಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಿದೆ. ನಗರಕ್ಕೆ ಹವಾಮಾನ ಇಲಾಖೆ ಯಾವುದೇ ಅಲರ್ಟ್‌ ಘೋಷಣೆ ಮಾಡಿಲ್ಲ. ಆದರೆ ಮೋಡ ಕವಿದ ವಾತಾವರಣ, ತಣ್ಣನೆಯ ಗಾಳಿ ಬೀಸಲಿದ್ದು, ಸಂಜೆಯ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ನಗರದಲ್ಲಿ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್, ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ.

ಕಳೆದ 10 ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಈ ಹಿನ್ನಲೆಯಲ್ಲಿ ಒಟ್ಟಾರೆ ಮಳೆಯ ಕೊರತೆ ಶೇ 51ಕ್ಕೆ ಇಳಿಕೆಯಾಗಿದೆ. ಜೂನ್ 21ರಂದು ರಾಜ್ಯದಲ್ಲಿ ಶೇ 74ರಷ್ಟು ಮಳೆ ಕೊರತೆ ದಾಖಲಾಗಿತ್ತು. ಜೂನ್ 1 ರಿಂದ ಭಾನುವಾರದ ತನಕ ಒಟ್ಟು 21.7 ಸೆಂ. ಮೀ. ಮಳೆಯಾಗಬೇಕಿತ್ತು. ಆದರೆ 10.6 ಸೆಂ. ಮೀ. ಮಳೆಯಾಗಿದೆ.

ರಾಜ್ಯದಲ್ಲಿ ಶುಕ್ರವಾರ ಬೆಳಗ್ಗೆ 8.30 ರಿಂದ ಶನಿವಾರ ಬೆಳಗ್ಗೆ 8.30ರ ನಡುವೆ ಕಾರವಾರದಲ್ಲಿ 71.6 ಮಿ. ಮೀ. ಅಧಿಕ ಮಳೆಯಾಗಿದೆ. ಮಂಗಳೂರಿನಲ್ಲಿ 46.1 ಮಿ. ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಭಾಗದಲ್ಲಿ ಮುಂಗಾರು ಬಿರುಸಾಗಿದ್ದು, ಜುಲೈ 15ರ ತನಕವೂ ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದೆ.

ಕರ್ನಾಟಕದಲ್ಲಿ ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ದಾವಣಗೆರೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+