• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕ; ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಆಗಸ್ಟ್ 29; ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದೆ. ಆದರೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಸೋಮವಾರದ ತನಕ ಗುಡುಗು ಸಹಿತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕಳೆದ ಮೂರು ದಿನಗಳಿಂದ ಕರಾವಳಿ, ಮಲೆನಾಡು ಭಾಗದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸಹ ಆಗಾಗ ತುಂತುರು ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿದೆ. ನಗರದಲ್ಲಿ ತಾಪಮಾನ ಸಹ ಕುಸಿತ ಕಂಡಿದೆ.

 ಉತ್ತರಾಖಂಡದಲ್ಲಿ ಭಾರಿ ಮಳೆ, ಹಲವೆಡೆ ಭೂಕುಸಿತ, ಜನಜೀವನ ಅಸ್ತವ್ಯಸ್ಥ ಉತ್ತರಾಖಂಡದಲ್ಲಿ ಭಾರಿ ಮಳೆ, ಹಲವೆಡೆ ಭೂಕುಸಿತ, ಜನಜೀವನ ಅಸ್ತವ್ಯಸ್ಥ

ಸೋಮವಾರದ ತನಕ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ರಾಜ್ಯದ 16 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಸಹ ಸಂಜೆಯ ವೇಳೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

 ರಾಜ್ಯದಲ್ಲಿ ಆಗಸ್ಟ್ 29, 30ರಂದು ಭಾರಿ ಮಳೆ, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ರಾಜ್ಯದಲ್ಲಿ ಆಗಸ್ಟ್ 29, 30ರಂದು ಭಾರಿ ಮಳೆ, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಶನಿವಾರ ಮಳೆಯಾಗಿದೆ. ಶಿವಮೊಗ್ಗ ನಗರದಲ್ಲಿ ಸುಮಾರು 2 ತಾಸು ಮಳೆ ಸುರಿದಿದೆ. ರಾತ್ರಿ 8.50ರ ಸುಮಾರಿಗೆ ಆರಂಭವಾದ ಮಳೆ ನಗರಕ್ಕೆ ತಂಪೆರದಿದೆ. ಆಗಸ್ಟ್ 30ರ ತನಕ ರಾಜ್ಯದ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಲಕ್ಷದ್ವೀಪ ಕರಾವಳಿ ಭಾಗದಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಳೆಯ ಜೊತೆ ಜೋರಾಗಿ ಗಾಳಿ ಸಹ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

 ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನ ಭಾರಿ ಮಳೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನ ಭಾರಿ ಮಳೆ

ಯಾವ-ಯಾವ ಜಿಲ್ಲೆಯಲ್ಲಿ ಮಳೆ

ಯಾವ-ಯಾವ ಜಿಲ್ಲೆಯಲ್ಲಿ ಮಳೆ

ಭಾರತೀಯ ಹವಾಮಾನ ಇಲಾಖೆ ಆಗಸ್ಟ್ 30ರ ಸೋಮವಾರದ ತನಕ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಆಗಸ್ಟ್ 31ರಂದು ಸಹ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಮಳೆ ಹೆಚ್ಚಾಗಲಿದೆ ಎಂದು ಮುನ್ಸೂಚನೆ

ಮಳೆ ಹೆಚ್ಚಾಗಲಿದೆ ಎಂದು ಮುನ್ಸೂಚನೆ

ಭಾನುವಾರ ಮತ್ತು ಸೋಮವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಎರಡು ದಿನ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ವಿವಿಧ ರಾಜ್ಯಗಳಲ್ಲಿಯೂ ಮಳೆ

ವಿವಿಧ ರಾಜ್ಯಗಳಲ್ಲಿಯೂ ಮಳೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯಭಾರ ಕುಸಿತದ ಪರಿಣಾಮ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ತಮಿಳುನಾಡು, ಆಂಧ್ರ ಪ್ರದೇಶ, ಕೇರಳ, ಲಕ್ಷದ್ವೀಪ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಜಾರ್ಖಂಡ್, ಮೇಘಾಲಯ, ಮಣಿಪುರ, ಗೋವಾ, ವಿಜೋರಾಂ ಮತ್ತು ಓಡಿಶಾ ರಾಜ್ಯಗಳಲ್ಲಿ ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಲವು ರಾಜ್ಯಗಳ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ತಾಪಮಾನ ಕುಸಿತ

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ತಾಪಮಾನ ಕುಸಿತವಾಗಿದೆ. ಗರಿಷ್ಠ 27 ಡಿಗ್ರಿ, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಭಾನುವಾರ ಬೆಳಗ್ಗೆ ನಗರದ ವಿವಿಧ ಬಡಾವಣೆಗಳಲ್ಲಿ ತುಂತುರು ಮಳೆಯಾಗಿದೆ. ಆಗಸ್ಟ್ 30ರ ಮುಂಜಾನೆ ತನಕ ಇದೇ ವಾತಾವರಣ ಮುಂದುವರೆಯಲಿದೆ ಎಂದು ಮುನ್ಸೂಚನೆ ಹೇಳಿದೆ.

   ಶ್ರೀಲಂಕಾ ಕ್ರಿಕೆಟ್ ಮಂಡಳಿಯಿಂದ RCB ಗೆ ಸಿಹಿ ಸುದ್ದಿ!! | Oneindia Kannada
   English summary
   The India Meteorological Department (IMD) issued a warning of heavy rainfall across Karnataka Karavali and Malenadu on August 29 and 30, 2021.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X