Breaking:ರಾಜ್ಯದಲ್ಲಿ ನಾಳೆ ಭಾನುವಾರ ಭಾರಿ ಮಳೆ: ರೆಡ್ ಅಲರ್ಟ್
ಬೆಂಗಳೂರು ಆಗಸ್ಟ್ 06: ಕರ್ನಾಟಕದ ಎಲ್ಲ ಜಿಲ್ಲೆಗಳು ಸುರಿಯುತ್ತಿರುವ ಮಳೆ ನಾಳೆ ಭಾನುವಾರ ಕರಾವಳಿ ಸೇರಿ ರಾಜ್ಯ ಆರು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಅಬ್ಬರಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾನುವಾರ ಇಡೀ ದಿನ ಗುಡುಗ ಸಹಿತ ಭಾರಿ ಮಳೆ ಅಬ್ಬರಿಸಲಿದೆ. ಈ ಪ್ರಯುಕ್ತ ಈ ಆರು ಜಿಲ್ಲೆಗಳಿಗೆ ಒಂದು ದಿನ 'ರೆಡ್ ಅಲರ್ಟ್' ಎಚ್ಚರಿಕೆ ನೀಡಲಾಗಿದೆ.
ಒಟ್ಟು ಮುಂದಿನ ಐದು ದಿನಗಳ ಪೈಕಿ ಭಾನುವಾರ ಒಂದು ದಿನ ಅತ್ಯಧಿಕ ಭಾರಿ ಅಂದರೆ ಶೇ.20ಸೆಂ.ಮೀ.ನಷ್ಟು ಮಳೆ ಸರಿಯಲಿದೆ. ಉಳಿದ ನಾಲ್ಕು ದಿನ ಕರಾವಳಿಯ ಮೂರು ಜಿಲ್ಲೆಗಳು ಉತ್ತರ ಒಳನಾಡಿನ ಯಾದಗಿರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರಗಿ, ಬೆಳಗಾವಿ ಬೀದರ್ ಗಳಲ್ಲಿ ಭಾರಿಯಿಂದ ಅತೀ ಭಾರಿ ಮಳೆ ಆಗಲಿದೆ. ಜತೆಗೆ ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಮಡಿಕೇರಿ, ಕೊಡಗು, ದಾವಣಗೆರೆ ಜಿಲ್ಲೆಗಳ ಹಲವೆಡೆ ಅತೀ ಭಾರಿ ಮಳೆ ಆಗಲಿದ್ದು, ಈ ಎಲ್ಲ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಕೊಡಲಾಗಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಇನ್ನು ಕರಾವಳಿ ತೀರ ಪ್ರದೇಶದಲ್ಲಿ ಸಮುದ್ರದಲ್ಲಿ ದೈತ್ಯ ಅಲೆಗಳು ಏಳಲಿದ್ದು, ಆಗಾಗ ತೀರಕ್ಕೆ ಬಂದು ಅಪ್ಪಳಿಸಲಿವೆ. ಈ ವೇಳೆ ಗಾಳಿಯ ವೇಗ ಪ್ರತಿ ಗಂಟೆಗೆ 50ಕಿ.ಮೀ. ಅಧಿಕ ವೇಗದಲ್ಲಿ ಬೀಸಲಿದೆ. ಈ ಹಿನ್ನೆಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ, ಉಡುಪಿ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಧಿಕ ಮಳೆ ದಾಖಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ವರದಿ ಮಾಡಿದೆ.












Click it and Unblock the Notifications