ಕರ್ನಾಟಕ; ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ

ಬೆಂಗಳೂರು, ನವೆಂಬರ್ 11; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಗುರುವಾರ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿ ಕಡೆ ಬರಲಿದೆ. ಇದರಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದರಿಂದಾಗಿ ನವೆಂಬರ್ 11ರಂದು ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಬೆಂಗಳೂರು ನಗರದಲ್ಲಿ ಶೀತಗಾಳಿ ವಾತಾವರಣ ಮುಂದುವರೆದಿದೆ. ಗುರುವಾರ ಮುಂಜಾನೆ 2 ಗಂಟೆ ವೇಳೆಗೆ ವಿವಿಧ ಪ್ರದೇಶಗಳಲ್ಲಿ ತುಂತುರು ಮಳೆಯಾಗಿದೆ. ನಗರದಲ್ಲಿ ಮಳೆ ಮುಂದುವರೆಯಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಎರಡು ದಿನಗಳ ಬಳಿಕ ಮಳೆ ತಗ್ಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ತನಕ ಭಾರೀ ಮಳೆಯ ಸೂಚನೆ ಇಲ್ಲ. ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು.

6 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌

6 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌

ಭಾರತೀಯ ಹವಾಮಾನ ಇಲಾಖೆ ನವೆಂಬರ್ 11ರ ಗುರುವಾರ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ವಾಯುಭಾರ ಕುಸಿತದ ಪರಿಣಾಮದಿಂದಾಗಿ ಕಳೆದ ಒಂದು ವಾರದಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ, ಮೋಡ ಕವಿದ ವಾತಾವರಣವಿದೆ. ಮಳೆಯಿಂದಾಗಿ ಕೃಷಿಕರು ಕಂಗೆಟ್ಟಿದ್ದು, ಮಳೆ ಬಿಟ್ಟರೆ ಸಾಕು ಎಂದು ಹೇಳುತ್ತಿದ್ದಾರೆ.

ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ

ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ

ನವೆಂಬರ್ 11ರ ಗುರುವಾರ ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 0.04 ಮಿ. ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯ ತನಕ 2859.89 ಮಿ. ಮೀ. ಮಳೆಯಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಬುಧವಾರದ ನೀರಿನ ಮಟ್ಟ 2857.78 ಅಡಿಗಳು. ಡ್ಯಾಂಗೆ ನೀರಿನ ಒಳಹರಿವು 113 ಕ್ಯುಸೆಕ್, ಹೊರ ಹರಿವು ನದಿಗೆ 350 ಕ್ಯುಸೆಕ್, ನಾಲೆಗೆ 450 ಕ್ಯುಸೆಕ್ ಆಗಿದೆ.

ಬೆಂಗಳೂರಿನಲ್ಲಿ ಮಳೆ

ಬೆಂಗಳೂರಿನಲ್ಲಿ ಮಳೆ

ಬೆಂಗಳೂರು ನಗರದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಕಳೆದ ನಾಲ್ಕು ದಿನಗಳಿಂದ ಇರುವ ಶೀತಗಾಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ನಗರದ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಆಗಿದೆ. ಶೀತಗಾಳಿಯಿಂದಾಗಿ ನೆಗಡಿ, ಕೆಮ್ಮು ಹೆಚ್ಚಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡುವವರ ಸಂಖ್ಯೆಯೂ ಅಧಿಕವಾಗುತ್ತಿದೆ.

ನಗರದಲ್ಲಿ ಗುರುವಾರ ಮುಂಜಾನೆ 2 ಗಂಟೆ ಸಮಯದಲ್ಲು ತುಂತುರು ಮಳೆಯಾಗಿದೆ. ಇಂದು ನಗರದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮುಂದಿನ 24 ಗಂಟೆಗಳ ಕಾಲ ನಗರದಲ್ಲಿ ಇದೇ ವಾತಾವರಣ ಮುಂದುವರೆಯಲಿದೆ. ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ನವೆಂಬರ್ 13ರ ಬಳಿಕ ಮಳೆ ಕಡಿಮೆ

ನವೆಂಬರ್ 13ರ ಬಳಿಕ ಮಳೆ ಕಡಿಮೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಗುರುವಾರ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿ ಭಾಗಕ್ಕೆ ಬರಲಿದೆ. ಎರಡು ದಿನಗಳ ನಂತರ ಇದರ ಪ್ರಭಾವ ಕುಗ್ಗಲಿದ್ದು, ಕರ್ನಾಟಕದಲ್ಲಿ ಮಳೆಯ ಅಬ್ಬರ ಕಡಿಮೆಯಾಗಲಿದೆ.

ಬುಧವಾರ ಸಹ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆಯಾಗಿದೆ. ಬೀದರ್, ಕಲಬುರಗಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಗದಗ ಮುಂತಾದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+