ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 24; ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ರಾತ್ರಿ 10 ಗಂಟೆ ವೇಳೆಗೆ ಮಳೆ ಆರಂಭವಾಗಿದ್ದು, ಗುಡುಗಿನ ಆರ್ಭಟಕ್ಕೆ ಜನರು ಬೆಚ್ಚಿ ಬಿದ್ದರು.

ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರ ಸಹ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುಗಳ ಪ್ರಭಾವ ತಗ್ಗಲಿದೆ. ಅಕ್ಟೋಬರ್ 26ರಂದು ಹಿಂಗಾರು ಪವೇಶಿಸಲಿದೆ.

ಅ.27ರವರೆಗೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆಅ.27ರವರೆಗೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಮೈಸೂರು, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು-ಮೈಸೂರು ರಸ್ತೆ ಕಾಮಗಾರಿ; ರೈತರ ಬೆಳೆ ನಾಶ ಬೆಂಗಳೂರು-ಮೈಸೂರು ರಸ್ತೆ ಕಾಮಗಾರಿ; ರೈತರ ಬೆಳೆ ನಾಶ

rain

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನ ಅಬ್ಬರ ಹೆಚ್ಚಿರಲಿದ್ದು ಮಳೆಯಾಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಕ್ಟೋಬರ್ 26ರ ತನಕ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ದೇಶದಲ್ಲಿ ಶೇ. 41 ರಷ್ಟು ಮಳೆ ಅಧಿಕ: ಉತ್ತರಾಖಂಡದಲ್ಲಿ ಐದು ಪಟ್ಟು ಹೆಚ್ಚಳ ದೇಶದಲ್ಲಿ ಶೇ. 41 ರಷ್ಟು ಮಳೆ ಅಧಿಕ: ಉತ್ತರಾಖಂಡದಲ್ಲಿ ಐದು ಪಟ್ಟು ಹೆಚ್ಚಳ

ಶನಿವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕುರುವಂಗಿ ಕೆರೆ ತುಂಬಿ ರಸ್ತೆಯಲ್ಲಿ ನೀರು ಹರಿಯುತ್ತಿತ್ತು. ಯಲ್ಲಾಪುರದಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಿರವತ್ತಿ ಖಾರೆವಾಡದ ಮಹಿಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಗದಗ ಮತ್ತು ಕೊಪ್ಪಳ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದೆ. ಕುಷ್ಟಗಿ, ತಾವರೆಕೆರೆ, ಗಜೇಂದ್ರಗಢ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದೆ. ಸುಮಾರು ಎರಡು ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರದ ತಾಲೂಕಿನ ಯತ್ತಿಹಳ್ಳಿಯಲ್ಲಿ ಸುರಿದ ಮಳೆಯಿಂದಾಗಿ ಸುಮಾರು 80 ಮನೆಗಳಿಗೆ ನೀರು ನುಗ್ಗಿತು. ಗ್ರಾಮದ ಹೊರವಲಯದಲ್ಲಿದ್ದ ಹಳ್ಳ ಕಟ್ಟಿಕೊಂಡ ಪರಿಣಾಮ ನೀರು ಹೋಗಲು ಜಾಗವಿಲ್ಲದೇ ಮನೆಗಳಿಗೆ ನೀರು ನುಗ್ಗಿದೆ.

ಕರ್ನಾಟಕದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ 154.4 ಮಿ. ಮೀ. ಮಳೆಯಾಗಿದೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ಪ್ರಭಾವ ಕಡಿಮೆಯಾಗಿದ್ದು, ಅಕ್ಟೋಬರ್ 25ರ ಬಳಿಕ ರಾಜ್ಯಕ್ಕೆ ಹಿಂಗಾರು ಪ್ರವೇಶವಾಗಲಿದೆ.

ಬೆಂಗಳೂರು ನಗರದಲ್ಲಿ ಶನಿವಾರ ರಾತ್ರಿ ಭಾರೀ ಮಳೆಯಾಗಿದೆ. ರಾತ್ರಿ 10 ಗಂಟೆ ಸುಮಾರಿಗೆ ಆರಂಭವಾದ ಮಳೆ ಸುಮಾರು 3 ಗಂಟೆಗಳ ಕಾಲ ಸುರಿಸಿದೆ. ಗುಡುಗಿನ ಆರ್ಭಟ ಹೆಚ್ಚಾಗಿದ್ದು, ಜನರು ಬೆಚ್ಚಿ ಬೀಳುವಂತೆ ಮಾಡಿತು.

ವಿವಿಧ ರಾಜ್ಯಗಳಲ್ಲಿ ಮಳೆ; ಭಾನುವಾರ ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶದಲ್ಲಿ ಮಳೆಯಾಗಲಿದೆ.

ತಮಿಳುನಾಡು, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ. ದೆಹಲಿ, ಪಂಜಾಬ್, ಹರ್ಯಾಣ, ಆಂಧ್ರ ಪ್ರದೇಶದಲ್ಲಿ ಸಹ ಗುಡುಗು ಸಹಿತ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕೊಡಗು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಮಳೆ 2702.71 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 2612.12 ಮಿ. ಮೀ. ಮಳೆಯಾಗಿತ್ತು ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

Recommended Video

Virat Kohli ಪಾಕಿಸ್ತಾನದ ಪಂದ್ಯ ಮುಗಿದಾದ ನಂತರ Rohit ಬಗ್ಗೆ ಹೇಳಿದ್ದೇನು | Oneindia Kannada

ಕೇರಳದಲ್ಲಿ ಯೆಲ್ಲೊ ಅಲರ್ಟ್; ಕೇರಳದಲ್ಲಿ ಅಕ್ಟೋಬರ್ 25ರ ಸೋಮವಾರ ಆರೆಂಜ್ ಮತ್ತು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರ, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ತ್ರಿಶೂರ್, ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

English summary
The India Meteorological Department (IMD) has predicted heavy rain along with lightning and thunder in many districts of Karnataka on October 24 and Yellow alert has also been issued for 13 districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X