Breaking; ಚಂಡಮಾರುತ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು, ಮೇ 10; 'ಅಸನಿ' ಚಂಡಮಾರುತದ ಪರಿಣಾಮ ಒಡಿಶಾ, ಆಂಧ್ರ ಪ್ರದೇಶ, ತೆಲಂಗಾಣ ಮುಂತಾದ ರಾಜ್ಯಗಳಲ್ಲಿ ಮಂಗಳವಾರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಹ ಮಳೆಯಾಗಬಹುದು ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರದಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮಂಗಳವಾರ ವಿವಿಧ ಜಿಲ್ಲೆಗಳಲ್ಲೆ ಯೊಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಸನಿ ಚಂಡಮಾರುತ ಆಂಧ್ರ ಪ್ರದೇಶದ ವಿಶಾಖಪಟ್ಟಣ, ಒಡಿಶಾದ ಪುರಿಯತ್ತ ಚಲಿಸುತ್ತಿದೆ. ಇದರ ಪರಿಣಾಮ ಮೇ 10 ರಿಂದ 12ರ ತನಕ ವಿವಿಧ ರಾಜ್ಯಗಳಲ್ಲಿ ಮಳೆಯಾಗಲಿದೆ.

ಉಳಿದಂತೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.
ಬೆಂಗಳೂರು ನಗರದಲ್ಲಿ ಕಳೆದ ವಾರದಿಂದ ಪ್ರತಿದಿನ ಸಂಜೆ ಮಳೆಯಾಗುತ್ತಿದೆ. ಸೋಮವಾರ ರಾತ್ರಿ 9 ಗಂಟೆ ಬಳಿಕ ನಗರದ ವಿವಿಧ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.












Click it and Unblock the Notifications