ನವೆಂಬರ್ 13ರ ತನಕ ಕರ್ನಾಟಕದಲ್ಲಿ ಮಳೆಯ ಆರ್ಭಟ

ಬೆಂಗಳೂರು, ನವೆಂಬರ್ 10; ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ನವೆಂಬರ್ 13ರ ತನಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಬುಧವಾರ ಮಳೆ ಎಚ್ಚರಿಕೆ ನೀಡಲಾಗಿದೆ.

ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರು ಕಂಗಾಲಾಗಿದ್ದು, ಬೆಳೆ ನಷ್ಟದ ಭೀತಿಯನ್ನು ಎದುರಿಸುತ್ತಿದ್ದಾರೆ.

ಬುಧವಾರ ಬೆಂಗಳೂರು ನಗರ, ದಾವಣಗೆರೆ, ಮೈಸೂರು, ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಚಂಡಮಾರುತದ ಪ್ರಭಾವದ ಜೊತೆ ಹಿಂಗಾರು ತುಸು ಚುರುಕಾಗಲಿದ್ದು, ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.

ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಯೆಲ್ಲೂ ಅಲರ್ಟ್ ಘೋಷಣೆ

ಯೆಲ್ಲೂ ಅಲರ್ಟ್ ಘೋಷಣೆ

ಬುಧವಾರ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ನವೆಂಬರ್ 11ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದ್ದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಮೈಸೂರು, ಮಂಡ್ಯ, ಹಾಸನ, ಚಾಮರಾಜನರ, ರಾಮನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ.

ಬೆಂಗಳೂರು ನಗರದಲ್ಲಿ ಮಳೆ

ಬೆಂಗಳೂರು ನಗರದಲ್ಲಿ ಮಳೆ

ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದ ಹವಾಮಾನ ಒಂದೇ ರೀತಿಯಲ್ಲಿದೆ. ತಾಪಮಾನ ಕುಸಿತವಾಗಿದ್ದು, ಚಳಿಯ ಅನುಭವವಾಗುತ್ತಿದೆ. ಮೋಡ ಕವಿದ ವಾತಾವರಣ ಇದ್ದು, ಆಗಾಗ ತುಂತುರು ಮಳೆಯಾಗುತ್ತಿದೆ. ನಗರದಲ್ಲಿ ಇನ್ನೂ ಎರಡು ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನವೆಂಬರ್ 11ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗಬಹುದು. ನವೆಂಬರ್ 10 ಮತ್ತು 11ರಂದು ಹಾವೇರಿ, ಕೊಪ್ಪಳ, ರಾಯಚೂರು, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನವೆಂಬರ್ 12 ಮತ್ತು 13ರಂದು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗಲಿದೆ. ಸೋಮವಾರದಿಂದ ಮಂಗಳವಾರ ಬೆಳಗ್ಗೆ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15.1 ಮಿ. ಮೀ. ಮಳೆಯಾಗಿದೆ. ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವ ಸಂಜೆ ಮಳೆಯಾಗುತ್ತಿದೆ.

ವಿವಿಧ ರಾಜ್ಯಗಳಲ್ಲಿ ಮಳೆ

ವಿವಿಧ ರಾಜ್ಯಗಳಲ್ಲಿ ಮಳೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡು ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ವಾಯುಭಾರ ಕುಸಿತದ ಪರಿಣಾಮ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಮೇಲೆಯೂ ಆಗಿದೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರದಿಂದ ಒಡಿಶಾ, ಛತ್ತೀಸ್‌ಗಢ್‌, ತೆಲಂಗಾಣಲ್ಲಿ ಮಳೆಯಾಗಲಿದೆ.

ತಮಿಳುನಾಡು, ಕರಾವಳಿ ಕರ್ನಾಟಕ, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಆಂಧ್ರ ಪ್ರದೇಶ ಮತ್ತು ಲಕ್ಷದ್ವೀಪದ ಅಲ್ಲಲ್ಲಿ ತುಂತುರು ಮಳೆಯಾಗಲಿದ್ದು, ಗುಡುಗಿನ ಆರ್ಭಟ ಇರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+