ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ 48 ಗಂಟೆಗಳ ಕಾಲ ಭಾರೀ ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ನವೆಂಬರ್ 08; ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.

ಅರಬ್ಬಿ ಸಮುದ್ರದ ಪೂರ್ವ ಮಧ್ಯಭಾಗದಲ್ಲಿ ಪ್ರಬಲ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 8 ಮತ್ತು 9ರಂದು ಗುಡುಗು, ಸಿಡಿಲಿನ ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ; ನವೆಂಬರ್ 7 ರಿಂದ 9ರ ತನಕ ಭಾರೀ ಮಳೆ ಮುನ್ಸೂಚನೆಕರ್ನಾಟಕ; ನವೆಂಬರ್ 7 ರಿಂದ 9ರ ತನಕ ಭಾರೀ ಮಳೆ ಮುನ್ಸೂಚನೆ

ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆಗೆ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯೂ ಕಾರಣವಾಗಿದೆ. ಬೆಂಗಳೂರು ನಗರದಲ್ಲಿ ಸೋಮವಾರ ಮುಂಜಾನೆಯೇ ಜಿಟಿ-ಜಿಟಿ ಮಳೆಯಾಗುತ್ತಿದೆ.

ಮಳೆ ನೀರು ಮನೆಗಳಿಗೆ ನುಗ್ಗದಂತಹ ಕಾಮಗಾರಿಗಳಿಗೆ ಆದ್ಯತೆ: ಸಿಎಂ ಬೊಮ್ಮಾಯಿ ಮಳೆ ನೀರು ಮನೆಗಳಿಗೆ ನುಗ್ಗದಂತಹ ಕಾಮಗಾರಿಗಳಿಗೆ ಆದ್ಯತೆ: ಸಿಎಂ ಬೊಮ್ಮಾಯಿ

ಭಾನುವಾರ ಬೆಳ್ತಂಗಡಿಯಲ್ಲಿ 10 ಸೆಂ. ಮೀ. ಮಳೆಯಾಗಿದೆ. ಸುಳ್ಯ 7, ಪುತ್ತೂರು 5, ಮಂಗಳೂರು 2, ಕುಂದಾಪುರ 2 ಸೇರಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಿದೆ. ಎರಡು ತಿಂಗಳಿನಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಡಕೆ ಮತ್ತು ಭತ್ತದ ಬೆಳೆಗೆ ಹಾನಿಯಾಗುವ ಆತಂಕ ಎದುರಾಗಿದೆ.

 ಬೆಂಗಳೂರಲ್ಲಿ ದೀಪಾವಳಿ ಸಂಭ್ರಮಕ್ಕೆ ಮಳೆ ಅಡ್ಡಿ ಬೆಂಗಳೂರಲ್ಲಿ ದೀಪಾವಳಿ ಸಂಭ್ರಮಕ್ಕೆ ಮಳೆ ಅಡ್ಡಿ

ಯಾವ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

ಯಾವ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

ನವೆಂಬರ್ 8 ಮತ್ತು 9ರಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.

ಉತ್ತರ ಒಳನಾಡಿನಲ್ಲಿ ಮಳೆ ಇಲ್ಲ

ಉತ್ತರ ಒಳನಾಡಿನಲ್ಲಿ ಮಳೆ ಇಲ್ಲ

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನ ಆರ್ಭಟ ಇರಲಿದ್ದು, ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಮಳೆ ತಗ್ಗಿದ್ದು, ಒಣಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ನಗರದಲ್ಲಿಯೂ ಮಳೆ

ಬೆಂಗಳೂರು ನಗರದಲ್ಲಿಯೂ ಮಳೆ

ಬೆಂಗಳೂರು ನಗರದಲ್ಲಿ ಭಾನುವಾರ ತಾಪಮಾನ ಕುಸಿದಿದ್ದು, ಚಳಿಯ ವಾತಾವರಣವಿತ್ತು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿಯೂ ನವೆಂಬರ್ 9ರ ತನಕ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಗುರುವಾರ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿತ್ತು. ಬಳಿಕ ಆಗಾಗ ಸಾಧಾರಣ ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣ ಮುಂದುವರೆದಿದೆ.

ತಮಿಳುನಾಡಿನಲ್ಲಿ ಭಾರೀ ಮಳೆ

ತಮಿಳುನಾಡಿನಲ್ಲಿ ಭಾರೀ ಮಳೆ

ತಮಿಳುನಾಡಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜಧಾನಿ ಚೆನ್ನೈನಲ್ಲಿ ಮಳೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂದಿನ ಎರಡು ದಿನಗಳ ಕಾಲ 4 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗಾಗಿ ಎನ್‌ಡಿಆರ್‌ಎಫ್ ತಂಡವನ್ನು ಕಳಿಸುವಂತೆ ಮನವಿ ಮಾಡಲಾಗಿದೆ.

ಸಂಕಷ್ಟಕ್ಕೆ ಸಿಲುಕಿದ ರೈತರು

ಸಂಕಷ್ಟಕ್ಕೆ ಸಿಲುಕಿದ ರೈತರು

ಜೂನ್‌ನಿಂದ ಸೆಪ್ಟೆಂಬರ್ ತನಕ ನೈಋತ್ಯ ಮುಂಗಾರು ಅವಧಿಯಾಗಿದೆ. ಜೂನ್‌ನಲ್ಲಿ ಮಳೆ ಆರಂಭವಾದರೂ ಜುಲೈನಲ್ಲಿ ಕರ್ನಾಟಕದಲ್ಲಿ ಭಾರೀ ಮಳೆಯಾಗಿತ್ತು. ಆದರೆ ಆಗಸ್ಟ್‌ನಲ್ಲಿ ಮಳೆ ಕಡಿಮೆಯಾಗಿತ್ತು. ಸೆಪ್ಟೆಂಬರ್‌ನಲ್ಲಿ ಮುಂಗಾರು, ವಿವಿಧ ಚಂಡಮಾರುತದ ಪರಿಣಾಮ ವಾಡಿಕೆಗಿಂತ ಹೆಚ್ಚು ಮಳೆಯಾಗಿತ್ತು. ಅಕ್ಟೋಬರ್‌ನಲ್ಲಿಯೂ ಮಳೆ ಹೆಚ್ಚಾಗಿ ರೈತರು ಬೆಳೆದ ತರಕಾರಿ ಬೆಳೆಗಳಿಗೆ ಹಾನಿಯಾಗಿ ಬೆಲೆಗಳು ಏರಿಕೆಯಾಗಿತ್ತು. ನವೆಂಬರ್‌ನಲ್ಲಿಯೂ ಚಂಡಮಾರುತದ ಪರಿಣಾಮ ಮಳೆಯಾಗುತ್ತಲೇ ಇದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೂವು, ತರಕಾರಿ, ಸೊಪ್ಪು, ಅಡಕೆ, ಭತ್ತ ಸೇರಿದಂತೆ ವಿವಿಧ ಬೆಳಗಳಿಗೆ ಹಾನಿಯಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅಡಕೆ ಬೆಳೆಗಾರರು ಮಳೆಗೆ ಹಿಡಿಶಾಪ ಹಾಕುತ್ತಿದ್ದಾರೆ.

English summary
The India Meteorological Department (IMD) has predicted heavy rain and Yellow alert has also been issued in 14 districts of Karnataka for November 8 and 9, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X