ಕರ್ನಾಟಕ; ನವೆಂಬರ್ 16ರ ತನಕ ವಿವಿಧ ಜಿಲ್ಲೆಯಲ್ಲಿ ಮಳೆ, ಚಳಿ

ಬೆಂಗಳೂರು, ನವೆಂಬರ್ 14; ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಶೀತ ವಾತಾವರಣ, ತುಂತುರು ಮಳೆ ಮುಂದುವರೆಯಲಿದೆ.

ಅಕ್ಕ-ಪಕ್ಕದ ರಾಜ್ಯಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ತಾಪಮಾನ ಕುಸಿದಿದ್ದು, ಶೀತ ವಾತಾವರಣವಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ನವೆಂಬರ್ 15ರ ತನಕ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹವಾಮಾನ ವೈಪರೀತ್ಯದಿಂದಾಗಿ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಭಾರೀ ಕುಸಿತವಾಗಿದೆ. ಬೆಂಗಳೂರು, ಬೀದರ್, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಡಿಮೆ ತಾಪಮಾನ ದಾಖಲಾಗಿದೆ. ಶನಿವಾರ ತಡರಾತ್ರಿ ತನಕ ಬೆಂಗಳೂರು ನಗರದ ವಿವಿಧ ಬಡಾವಣೆಗಳಲ್ಲಿ ತುಂತುರು ಮಳೆಯಾಗಿದೆ.

ಯಾವ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್?

ಯಾವ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್?

ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ನವೆಂಬರ್ 16ರ ತನಕ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆಗೆ ರೈತರು ಹೈರಾಣಾಗಿದ್ದಾರೆ. ಮಲೆನಾಡು ಭಾಗದಲ್ಲಿ ಅಡಕೆ ಕಟಾವು ನಡೆಯುತ್ತಿದ್ದು, ಬಿಸಿಲು ಅಗ್ಯತಗ್ಯವಾಗಿ ಬೇಕಾಗಿದೆ. ಆದರೆ ಅಡಕೆ ಒಣಗಿಸಲು ಬಿಸಿಲು ಇಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಂಗಳೂರಿನಲ್ಲಿಯೂ ಮಳೆ

ಬೆಂಗಳೂರಿನಲ್ಲಿಯೂ ಮಳೆ

ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ತುಂತುರು ಮಳೆ, ಶೀತ ವಾತಾವರಣ ಮುಂದುವರೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ಇಲ್ಲ. ಆದರೆ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 16ರ ಬಳಿಕ ವಿವಿಧ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ನಿರೀಕ್ಷೆ ಇದೆ.

ಮೂರು ದಿನ ಗುಡುಗು ಸಹಿತ ಮಳೆ

ಮೂರು ದಿನ ಗುಡುಗು ಸಹಿತ ಮಳೆ

ಭಾನುವಾರದಿಂದ ಮೂರು ದಿನಗಳ ಕಾಲ ತಮಿಳುನಾಡು, ಒಡಿಶಾ, ಆಂಧ್ರ ಪ್ರದೇಶದ ಕರಾವಳಿ, ಕಾರೈಕಲ್, ಪುದುಚೇರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮಹಾರಾಷ್ಟ್ರದ ದಕ್ಷಿಣ ಭಾಗ, ಗೋವಾ, ಛತ್ತೀಸ್‌ಗಢ, ಜಾರ್ಖಂಡ್, ಪಶ್ಚಿಮ ಬಂಗಾಳದಲ್ಲಿ ಚದುರಿದಂತೆ ಗುಡುಗು ಸಹಿತ ಮಳೆಯಾಗಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ವಿಜೋರಾಂ, ತ್ರಿಪುರ ರಾಜ್ಯಗಳಲ್ಲಿ ಸಹ ಮಳೆ ಮುನ್ಸೂಚನೆ ನೀಡಲಾಗಿದೆ.

ತಗ್ಗುತ್ತಿರುವ ವಾಯುಭಾರ ಕುಸಿತದ ತೀವ್ರತೆ

ತಗ್ಗುತ್ತಿರುವ ವಾಯುಭಾರ ಕುಸಿತದ ತೀವ್ರತೆ

ತಮಿಳುನಾಡು ಮತ್ತು ಆಂಧ್ರ ಪ್ರದೇಶ ಕರಾವಳಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ತೀವ್ರೆ ತಗ್ಗುತ್ತಿದೆ. ಇದರಿಂದಾಗಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುತ್ತಿದೆ. ನವೆಂಬರ್ 16ರ ಬಳಿಕ ವಿವಿಧ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಲಿದೆ.

ಬೆಂಗಳೂರು ನಗರದಲ್ಲಿ ಶನಿವಾರ ಸಂಜೆಯ ಬಳಿಕ ವಿವಿಧ ಬಡಾವಣೆಗಳಲ್ಲಿ ಮಳೆಯಾಗಿದೆ. ಸಂಜೆ 7 ಗಂಟೆಯ ಬಳಿಕ ಆರಂಭವಾದ ಮಳೆ ಮಧ್ಯರಾತ್ರಿ ತನಕ ಸುರಿದಿದೆ. ಇದರಿಂದಾಗಿ ನಗರದಲ್ಲಿ ಚಳಿಯ ವಾತಾವರಣವೂ ಮುಂದುವರೆಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+