ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಕರ್ನಾಟಕದಲ್ಲಿ 3 ದಿನ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

|
Google Oneindia Kannada News

ಬೆಂಗಳೂರು, ಆಗಸ್ಟ್ 07; ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲೂ ಭಾನುವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ಭಾನುವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಳೆ ಅಬ್ಬರಕ್ಕೆ ಹೊಗೆನಕಲ್ ಜಲಪಾತವೇ ಮುಳುಗಡೆ!! ಮಳೆ ಅಬ್ಬರಕ್ಕೆ ಹೊಗೆನಕಲ್ ಜಲಪಾತವೇ ಮುಳುಗಡೆ!!

ಕರ್ನಾಟಕದ ಕರಾವಳಿ, ಮಳೆನಾಡು ಭಾಗದಲ್ಲಿ ಭಾನುವಾರದಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ಶಿವಮೊಗ್ಗದಲ್ಲಿ ಮುಂದುವರಿದ ಮಳೆ, ರಸ್ತೆ ಜಲಾವೃತ, ಬೆಳೆ, ಮನೆಗಳಿಗೆ ಹಾನಿ ಶಿವಮೊಗ್ಗದಲ್ಲಿ ಮುಂದುವರಿದ ಮಳೆ, ರಸ್ತೆ ಜಲಾವೃತ, ಬೆಳೆ, ಮನೆಗಳಿಗೆ ಹಾನಿ

Yellow Alert

ಕಳೆದ ಒಂದು ವಾರದಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಭಾಗ ಮಾತ್ರವಲ್ಲ ಉತ್ತರ ಕರ್ನಾಟಕದ ವಿವಿಧ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿಯೂ ಮಳೆ ಅಬ್ಬರಿಸುತ್ತಿದೆ.

 ಮಳೆ ಹಾನಿಯ ತುರ್ತು ಪರಿಹಾರಕ್ಕಾಗಿ 500 ಕೋಟಿ ರೂ. ಬಿಡುಗಡೆ: ಸಿಎಂ ಬಸವರಾಜ ಬೊಮ್ಮಾಯಿ ಮಳೆ ಹಾನಿಯ ತುರ್ತು ಪರಿಹಾರಕ್ಕಾಗಿ 500 ಕೋಟಿ ರೂ. ಬಿಡುಗಡೆ: ಸಿಎಂ ಬಸವರಾಜ ಬೊಮ್ಮಾಯಿ

ಕಳೆದ ಒಂದು ವಾರದಲ್ಲಿ ಕರಾವಳಿ, ಮಲೆನಾಡು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ನದಿ, ಕೆರೆಗಳು ತುಂಬಿದ್ದು, ಮಳೆ ನೀರು ಜಮೀನುಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಹಲವು ಜಿಲ್ಲೆಗಳಲ್ಲಿ ಭೂ ಕುಸಿತವಾಗಿದ್ದು, ವಿದ್ಯುತ್ ಕಂಬಗಳು ಧರೆಗುರುಳಿವೆ.

ಮುಖ್ಯಮಂತ್ರಿಗಳ ಸಭೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಮಳೆಯಿಂದ ಹಾನಿಗೊಳಗಾದ ಮಳೆಯಿಂದ ಹಾನಿಗೊಳಗಾಗಿರುವ 16 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್‌ಪಿ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಜೊತೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿದರು.

ಜಿಲ್ಲೆಯಲ್ಲಿ ಮಳೆಯಿಂದಾದ ಹಾನಿ ಬಗ್ಗೆ ಮಾಹಿತಿ ಪಡೆದರು. ತೆಗೆದುಕೊಳ್ಳಬೇಕಾದ ಕ್ರಮಗಳು ಕುರಿತು ಸೂಚನೆ ನೀಡಿದರು. "ಮಳೆ ಪ್ರವಾಹದಿಂದ ಜನರಿಗೆ ಸಂರಕ್ಷಿಸುವುದಲ್ಲದೆ ಅವರಿಗೆ ಕಾಳಜಿ ಕೇಂದ್ರದಲ್ಲಿ ಗುಣಮಟ್ಟದ ಅಹಾರ‌ ನೀಡಬೇಕು. ಸಂತ್ರಸ್ತರು ಕಾಳಜಿ ಕೇಂದ್ರಕ್ಕೆ ಬರದೆ ಸಂಬಂಧಿಕರ ಮನೆಗೆ ಹೋದಲ್ಲಿ ಅವರಿಗೆ ಡ್ರೈ ರೇಷನ್ ಕಿಟ್ ನೀಡಬೇಕು" ಎಂದು ಸೂಚಿಸಿದರು.

"ಮಳೆಯಿಂದ ಹಾನಿಯಾದ ರಸ್ತೆ, ಸೇತುವೆ ದುರಸ್ತಿಗೆ ಲೊಕೋಪಯೋಗಿ ಇಲಾಖೆಗೆ 500 ಕೋಟಿ ರೂ. ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 200 ಕೋಟಿ ರೂ. ಬಿಡುಗಡೆ ಮಾಡಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಂಡು ರಸ್ತೆ ಸಂಪರ್ಕ ಕಲ್ಪಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಪರ್ಕ‌ ಕಡಿತಗೊಂಡಲ್ಲಿ ಎನ್‌ಹೆಚ್ಎಐ ನತ್ತ ನೋಡದೆ ಕೂಡಲೇ ದುರಸ್ತಿಗೊಳಿಸಿ ಜನರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು" ಎಂದು ಹೇಳಿದರು.

English summary
The India Meteorological Department (IMD) has predicted rain and Yellow alert has also been issued for Malenadu and Karavali region for 3 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X