ಸೆಪ್ಟೆಂಬರ್ 10ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು, ಸೆಪ್ಟೆಂಬರ್ 07 : ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8ರ ತನಕ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Recommended Video

      Coronaಗೆ ಜನರು ಹಿಂದೆ ಕೊಡುತ್ತಿದ್ದ ಮರ್ಯಾದೆ ಈಗ ಕೊಡುತ್ತಿಲ್ಲ | Oneindia Kannada

      ಹವಾಮಾನ ಇಲಾಖೆ ಸೆಪ್ಟೆಂಬರ್ 10ರ ತನಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಿದೆ. ಬೆಂಗಳೂರು ನಗರದಲ್ಲಿ ಸೋಮವಾರ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

      ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್ 10ರ ತನಕ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ಹೆಚ್ಚಿನ ಮಳೆಯಾಗಲಿದೆ.

      Rain

      ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 6 ರಿಂದ 8ರ ತನಕ ಚಾಮರಾಜನಗರ, ಮೈಸೂರು, ತುಮಕೂರು, ದಾವಣಗೆರೆ, ಚಿತ್ರದುರ್ಗದಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

      ಶಿವಮೊಗ್ಗ ನಗರದಲ್ಲಿ ಭಾನುವಾರ ರಾತ್ರಿ ಭಾರಿ ಮಳೆಯಾಗಿದೆ. ಹೊಸಮನೆಯ ರಾಜಕಾಲುವೆ ತುಂಬಿ ಹರಿದಿದೆ. ಹಲವು ಪ್ರದೇಶಗಳಲ್ಲಿ ನೀರು ಮನೆಗೆ ನುಗ್ಗುವ ಭೀತಿಯಲ್ಲಿ ಜನರು ರಾತ್ರಿ ಕಳೆದಿದ್ದಾರೆ.

      ಚಿಕ್ಕಮಗಳೂರಿನ ಶೃಂಗೇರಿಯಲ್ಲಿ 8, ಬ್ರಹ್ಮವಾರ ಮತ್ತು ಆಗುಂಬೆಯಲ್ಲಿ 4, ಕಾರ್ಕಳ ಮತ್ತು ಬೆಳ್ತಂಗಡಿಯಲ್ಲಿ 3, ಪುತ್ತೂರು ಮತ್ತು ಸುಳ್ಯ, ಮೂಡುಬಿದಿರೆಯಲ್ಲಿ ತಲಾ 1 ಸೆಂ. ಮೀ. ಮಳೆಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+