ಜುಲೈ 12 ರಿಂದ 16ರ ತನಕ ಕರ್ನಾಟಕದಲ್ಲಿ ಭಾರಿ ಮಳೆ
ಬೆಂಗಳೂರು, ಜುಲೈ 12 : ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 12 ರಿಂದ 16ರ ತನಕ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. ಭಾನುವಾರದಿಂದ ಮಂಗಳವಾರದ ತನಕ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.
ತುಮಕೂರು, ಶಿವಮೊಗ್ಗ, ರಾಮನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಶನಿವಾರ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಗರಿಷ್ಠ ಎಂದರೆ 11 ಸೆಂ. ಮೀ ಮಳೆಯಾಗಿದೆ. ಕಾರವಾರದಲ್ಲಿ 10, ಭಟ್ಕಳ ಮತ್ತು ಕುಂದಾಪುರದಲ್ಲಿ 4, ನರಗುಂದ, ಕೋಲಾರ, ಹೊಸಕೋಟೆ, ಗೌರಿ ಬಿದನೂರಿನಲ್ಲಿ ತಲಾ 1 ಸೆಂ. ಮೀ. ಮಳೆ ಸುರಿದಿದೆ.
ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಆಲಮಟ್ಟಿ ಜಲಾಶಯಕ್ಕೆ ಶನಿವಾರ ಒಂದೇ ದಿನ 6.37 ಟಿಎಂಸಿ ಅಡಿ ನೀರು ಹರಿದು ಬಂದಿದೆ. 519.60 ಮೀಟರ್ ಜಲಾಶಯದಲ್ಲಿ 517.36ರಷ್ಟು ನೀರಿನ ಸಂಗ್ರಹವಿದೆ. 89,013 ಕ್ಯುಸೆಕ್ ಒಳಹರಿವು ದಾಖಲಾಗಿದೆ.












Click it and Unblock the Notifications