ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 12 ರಿಂದ 16ರ ತನಕ ಕರ್ನಾಟಕದಲ್ಲಿ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಜುಲೈ 12 : ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 12 ರಿಂದ 16ರ ತನಕ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. ಭಾನುವಾರದಿಂದ ಮಂಗಳವಾರದ ತನಕ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.

ಮಲೈ ಮಹದೇಶ್ವರ ಬೆಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಮಲೈ ಮಹದೇಶ್ವರ ಬೆಟ್ಟ ಪ್ರದೇಶಗಳಲ್ಲಿ ಭಾರಿ ಮಳೆ

ತುಮಕೂರು, ಶಿವಮೊಗ್ಗ, ರಾಮನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೊಂಕಣ ಪ್ರದೇಶದಲ್ಲಿ ಭಾರಿ ಮಳೆ: ರಾಜ್ಯದ 6 ಸೇತುವೆಗಳು ಜಲಾವೃತಕೊಂಕಣ ಪ್ರದೇಶದಲ್ಲಿ ಭಾರಿ ಮಳೆ: ರಾಜ್ಯದ 6 ಸೇತುವೆಗಳು ಜಲಾವೃತ

rain

ಶನಿವಾರ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಗರಿಷ್ಠ ಎಂದರೆ 11 ಸೆಂ. ಮೀ ಮಳೆಯಾಗಿದೆ. ಕಾರವಾರದಲ್ಲಿ 10, ಭಟ್ಕಳ ಮತ್ತು ಕುಂದಾಪುರದಲ್ಲಿ 4, ನರಗುಂದ, ಕೋಲಾರ, ಹೊಸಕೋಟೆ, ಗೌರಿ ಬಿದನೂರಿನಲ್ಲಿ ತಲಾ 1 ಸೆಂ. ಮೀ. ಮಳೆ ಸುರಿದಿದೆ.

100ರ ಸನಿಹದಲ್ಲಿ ಕೆಆರ್‌ಎಸ್ ನೀರಿನ ಮಟ್ಟ100ರ ಸನಿಹದಲ್ಲಿ ಕೆಆರ್‌ಎಸ್ ನೀರಿನ ಮಟ್ಟ

ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಆಲಮಟ್ಟಿ ಜಲಾಶಯಕ್ಕೆ ಶನಿವಾರ ಒಂದೇ ದಿನ 6.37 ಟಿಎಂಸಿ ಅಡಿ ನೀರು ಹರಿದು ಬಂದಿದೆ. 519.60 ಮೀಟರ್ ಜಲಾಶಯದಲ್ಲಿ 517.36ರಷ್ಟು ನೀರಿನ ಸಂಗ್ರಹವಿದೆ. 89,013 ಕ್ಯುಸೆಕ್ ಒಳಹರಿವು ದಾಖಲಾಗಿದೆ.

English summary
Indian meteorological department issued a yellow alert from July 12 To 16, 2020 at Karavali and various districts of Karnataka, Heavy rainfall is predicted.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X