ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; 9 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಜುಲೈ 20 : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಬಿರುಸುಗೊಂಡಿದ್ದು ಭಾರಿ ಮಳೆಯಾಗುತ್ತಿದೆ. ಜುಲೈ 20 ಮತ್ತು 21ರಂದು ರಾಜ್ಯದ 9 ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

Leopard enters home and takes away pet dog | Oneindia kannada

ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಎರಡು ದಿನ ಗುಡುಗು ಸಹಿತ ಧಾರಕಾರ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೋಮವಾರ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು 'ಅರೆಂಜ್ ಅಲರ್ಟ್' ಘೋಷಣೆ ಮಾಡಲಾಗಿದೆ.

ಅಸ್ಸಾಂನಲ್ಲಿ ಮಳೆ, ಪ್ರವಾಹ; ಮೃಗಾಲಯದ 108 ಪ್ರಾಣಿಗಳು ಸಾವುಅಸ್ಸಾಂನಲ್ಲಿ ಮಳೆ, ಪ್ರವಾಹ; ಮೃಗಾಲಯದ 108 ಪ್ರಾಣಿಗಳು ಸಾವು

ಕರಾವಳಿಯಲ್ಲಿ ಜೋರಾಗಿ ಗಾಳಿ ಬೀಸುತ್ತಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಕಾರವಾರ ಮತ್ತು ಕುಂದಾಪುರದಲ್ಲಿ ಭಾನುವಾರ 13 ಸೆಂ. ಮೀ.ನಷ್ಟು ಮಳೆಯಾಗಿದೆ. ಕಾರ್ಕಳ, ಗೋಕರ್ಣ ಮತ್ತು ಆಗುಂಬೆಯಲ್ಲಿ 7 ಸೆಂ. ಮೀ. ಮಳೆ ಸುರಿದಿದೆ.

 ಕೊಡಗಿನಲ್ಲಿ ಭಾರೀ ಮಳೆ; ಹಾರಂಗಿಯಿಂದ 5,000 ಕ್ಯೂಸೆಕ್​ ನೀರು ಬಿಡುಗಡೆ ಕೊಡಗಿನಲ್ಲಿ ಭಾರೀ ಮಳೆ; ಹಾರಂಗಿಯಿಂದ 5,000 ಕ್ಯೂಸೆಕ್​ ನೀರು ಬಿಡುಗಡೆ

 IMD Issues Heavy Rainfall Warning For 9 Districts

ಬೆಂಗಳೂರು ನಗರದ ವಿವಿಧ ಬಡಾವಣೆಗಳಲ್ಲಿ ಭಾನುವಾರ ಸಂಜೆಯಿಂದ ತುಂತುರು ಮಳೆಯಾಗುತ್ತಿದೆ. ರಾತ್ರಿಯೂ ಹಲವು ಭಾರಿ ಮಳೆಯಾಗಿದ್ದು, ಉಷ್ಣಾಂಶದಲ್ಲಿ ಇಳಿಕೆಯಾಗಿದೆ. ಸೋಮವಾರ ಮುಂಜಾನೆಯೂ ಅಲ್ಲಲ್ಲಿ ಮಳೆಯಾಗಿದ್ದು, ನಗರದಲ್ಲಿ ಮೋಡ ಕವಿದ ವಾತಾವರಣವಿದೆ.

ಮುಂಬೈ ಮಳೆ; 5 ಅಂತಸ್ತಿನ ವಸತಿ ಕಟ್ಟಡ ಕುಸಿತ ಮುಂಬೈ ಮಳೆ; 5 ಅಂತಸ್ತಿನ ವಸತಿ ಕಟ್ಟಡ ಕುಸಿತ

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಮತ್ತು ಶಿವಮೊಗ್ಗದಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ. ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಣೆ ಮಾಡಿದೆ.

ಹೊಸಪೇಟೆ ಬಳಿಯ ತುಂಗಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದೆ. ಆಲಮಟ್ಟಿ ಜಲಾಶಯಕ್ಕೆ ಭಾನುವಾರ ಒಂದೇ ದಿನ 4 ಟಿಎಂಸಿ ಅಡಿ ನೀರು ಹರಿದು ಬಂದಿದೆ. ವಿಜಯಪುರ, ಧಾರವಾಡ, ಗದಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಚಳ್ಳಕೆರೆ ತಾಲೂಕಿನಲ್ಲಿ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಧಾರಕಾರ ಮಳೆಯಾಗಿದ್ದು, ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.

English summary
The India Meteorological Department (IMD) issued heavy rain fall warning in 9 districts of Karnataka. Orange alert in Udupi and Dakshina Kannada on July 20.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X