Rain Alert: ಕರ್ನಾಟಕದಾದ್ಯಂತ ಆಗಸ್ಟ್ 07ರವರೆಗೆ ವ್ಯಾಪಕ ಮಳೆ: ಹವಾಮಾನ ವರದಿ

ಬೆಂಗಳೂರು, ಆಗಸ್ಟ್ 01: ಕರ್ನಾಟಕದಾದ್ಯಂತ ಮುಂಗಾರು ಮಳೆ ಮುಂದುವರಿಯಲಿದೆ. ಇನ್ನು ಒಂದು ವಾರಗಳ ಕಾಲ (ಆಗಸ್ಟ್ 07) ರಾಜ್ಯದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಲೆನಾಡು ಹಾಗೂ ಕರಾವಳಿಯ ಜಿಲ್ಲೆಗಳು ಒಳಗೊಂಡಂತೆ ವಿವಿಧೆಡೆ ಜೋರು ಮಳೆ ಸುರಿಯಲಿದೆ. ಚಳಿ, ಮಬ್ಬು ವಾತಾವರಣ ಮುಂದುವರಿಯಲಿದೆ ಎಂದು ಶುಕ್ರವಾರದ ಮುನ್ಸೂಚನೆಯಲ್ಲಿ ಇಲಾಖೆ ತಿಳಿಸಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ, ತುಮಕೂರು, ಚಾಮರಾಜನಗರ ಸೇರಿದಂತೆ ವಿವಿಧೆಡೆ ವ್ಯಾಪಕ ಮಳೆ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಈವರೆಗೆ ಸುರಿದಿದ್ದ ಭಾರೀ ಮಳೆಗೆ ಗುರುವಾರದಿಂದ ಬ್ರೇಕ್ ಬಿದ್ದಿದೆ. ಇನ್ನು ಮುಂದೆ ಸಾಧಾರಣ, ಆಗಾಗ ಜೋರು ಮಳೆ ಆಗಲಿದೆ. ಇದರೊಂದಿಗೆ ತುಮಕೂರು, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ರಾಮನಗರ, ಮಂಡ್ಯದಲ್ಲಿ ಆಗಾಗ ಮಳೆ ಆಗಲಿದೆ.

IMD Issues Light to Moderate Rain expected across Karnataka State Till August 7th

ಹಾವೇರಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಬಾಗಲಕೋಟೆ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಮಳೆ ಪ್ರಮಾಣ ತಗ್ಗಿದೆ. ಅಲ್ಲಲ್ಲಿ ಹಗುರ ಮಳೆ ನಿರೀಕ್ಷೆ ಇದೆ. ಇದರ ಹೊರತು ಭಾರೀ ಮಳೆಯ ಎಚ್ಚರಿಕೆ ಇಲ್ಲ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ.

ನೆನ್ನೆ ಒಂದೇ ದಿನ ಪಶ್ಚಿಮ ಘಟ್ಟಗಳದ ತಪ್ಪಲಿನಲ್ಲಿ ಧರ್ಮಸ್ಥಳ, ಶೃಂಗೇರಿ, ಚಿಕ್ಕಮಗಳೂರು, ಶಿವಮೊಗ್ಗ, ಮಡಿಕೇರಿ, ಭಾಗಮಂಡಲ, ಸೋಮವಾರಪೇಟೆ, ಅಜ್ಜಂಪುರ, ತೆರಿಕೆರೆ, ಹೊನ್ನಾವರ, ಉಡುಪಿ, ಮಂಗಳೂರು ನಗರ ಸೇರಿದಂತೆ ವಿವಿಧೆಡೆ ಸಾಧಾರಣ ಮಳೆ ದಾಖಲಾಗಿದೆ. ಮಳೆ ಹಿನ್ನೆಲೆಯಲ್ಲಿ ವಾತಾವರಣದಲ್ಲಿ ತಂಪು ಹೆಚ್ಚಾಗಿದ್ದು, ಗರಿಷ್ಠ ತಾಪಮಾನದಲ್ಲಿ ಬದಲಾವಣೆ ಆಗಿತ್ತು.

ಬೆಂಗಳೂರು ಹವಾಮಾನ ಮುನ್ಸೂಚನೆ

ಬೆಂಗಳೂರನಲ್ಲಿ ಸಹ ಮಬ್ಬು ವಾತಾವರಣ ಕಂಡು ಬಂದಿದೆ. ಸಂಜೆ ವಿಜಯನಗರ, ಹಂಪಿನಗರ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ವಿವಿಧೆಡೆ ಸೋನೆ ಮಳೆ ಆಯಿತು. HAL ನಲ್ಲಿ ಗರಿಷ್ಟ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯ ತಾಪಮಾನ ದಾಖಲಾಗಿದೆ. ಅದೇ ರೀತಿ ನಗರದಲ್ಲಿ ಕನಿಷ್ಠ 20.9 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 28.2 ಡಿಗ್ರಿ ಸೆಲ್ಸಿಯಸ್ ತಾಪಮಾನ, KIALನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡು ಬಂದಿದೆ.

ಸಮುದ್ರ ಮೇಲ್ಮೈನಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ, ಸ್ಟ್ರಫ್ ಹಾಗೂ ಚಂಡಮಾರುತ ಪರಿಚಲನೆ ಪ್ರಭಾವ ತಗ್ಗಿದೆ. ಉತ್ತರ ಭಾರತದ ಭಾಗದಲ್ಲಿ ಸೃಷ್ಟಿಯಾಗಿದ್ದ ವೈಪರೀತ್ಯಗಳ ತೀವ್ರತೆ ಆ ಭಾಗದಲ್ಲಿ ಮುಂದುವರಿದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+