Karnataka Rain: ರಾಜ್ಯದ ಈ ಜಿಲ್ಲೆಗಳಿಗೆ ಮುಂದಿನ 5 ದಿನವೂ ಆರೆಂಜ್ ಅಲರ್ಟ್

ಬೆಂಗಳೂರು, ಜಲೈ 02: ಕರ್ನಾಟಕದ ಅರ್ಧ ಭಾಗಕ್ಕೆ ಮುಂಗಾರು ಮಳೆ ಸಕ್ರಿಯಗೊಂಡಿದೆ. ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆ ಇನ್ನಷ್ಟು ತೀವ್ರಗೊಂಡಿದೆ. ಉತ್ತರ ಒಳನಾಡಿಗೆ ಮಳೆ ಬಾರದೆ ರೈತರು ಕಂಗಾಲಾಗಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಅತ್ಯಧಿಕ ಮಳೆಯ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಬೀಳಲಿದೆ. ಹೀಗಾಗಿ ಈ ಮೂರು ಜಿಲ್ಲೆಗಳಿಗೆ ಮುಂದಿನ ಐದು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ.

IMD Issues Orange Alert For Coastal And South Interior Karnataka next 5 days

ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ಮಳೆ ತೀವ್ರಗೊಂಡಿದೆ. ಅರಬ್ಬಿ ಸಮುದ್ರದಲ್ಲಿನ ಹವಾಮಾನ ಬದಲಾವಣೆಗಳಿಂದಾಗಿ ಈ ಭಾಗದಲ್ಲಿ ಮುಂಗಾರು ಸುರಿಸುವ ಮೋಡಗಳ ಸಕ್ರಿಯಗೊಂಡಿವೆ. ನಿತ್ಯ ಕರಾವಳಿ ಮೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ದಾಖಲಾಗುತ್ತಿದೆ. ಇದು ಮುಂದಿನ ಒಂದು ವಾರ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಕರಾವಳಿ ತೀರದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ ಸುಮಾರು 50 ಕಿಲೋ ಮೀಟರ್‌ ವೇಗದಲ್ಲಿ ಬೀಸಲಿದೆ. ಆದ್ದರಿಂದ ಮುಂದಿನ ಸೂಚನೆವರೆಗೆ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡಿಗೂ ಭಾರಿ ಮಳೆ

ಇನ್ನೂ ದಕ್ಷಿಣ ಒಳನಾಡಿನ ಭಾಗದ ಜಿಲ್ಲೆಗಳಲ್ಲೂ ಸಹ ಧಾರಾಕಾರ ಮಳೆ ಮುನ್ಸೂಚನೆ ಆಗಲಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಹಲವೆಡೆ ಭಾರೀ ಮಳೆ ಸಂಭವವಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಎಚ್ಚರಿಕೆ ಕೊಡಲಾಗಿದೆ.

IMD Issues Orange Alert For Coastal And South Interior Karnataka next 5 days

ಇದೇ ಭಾಗದ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಆಗಾಗ ಹಗುರದಿಂದ ಸಾಧಾರಣ ಮಳೆ, ಇನ್ನೂ ಕೆಲವೆಡೆ ತುಂತುರು ಮಳೆ ಬರುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆ ಬರುವ ಮುನ್ಸೂಚನೆ ಇದೆ. ಮೂರು ದಿನಗಳ ನಂತರ ಅಂದರೆ ಜುಲೈ 5 ಮತ್ತು 6ರಂದು ಬೆಳಗಾವಿ ಧಾರವಾಢ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಭಾರಿ ಮಳೆ ಬರಲಿದ್ದು, ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಾಖಲಾದ ಮಳೆ ಎಷ್ಟು

ಭಾನುವಾರ ಬೆಳಗ್ಗೆ ಕೊನೆಗೊಂಡಂತೆ ಹಿಂದಿನ ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಕದ್ರಾ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಬೆಳಗಾವಿ, ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಕನಿಷ್ಠ 2 ಸೆಂಟೀ ಮೀಟರ್‌ಗಳಿಂದ ಗರಿಷ್ಠ 07 ಸೆಂಟಿ ಮೀಟರ್ ಮಳೆ ದಾಖಲಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇಂದು ಜುಲೈ 2 ರಂದು ಭಾನುವಾರ ರಾತ್ರಿ ಮಳೆ ಸುರಿಯುವ ಲಕ್ಷಣಗಳು ಇವೆ. ಮುಂದಿನ ನಾಲ್ಕು ದಿನ ಹಗುರದಿಂದ ಸಾಧಾರಣವಾಗಿ, ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಆಗಲಿದೆ. ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+