ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅ.24ರ ತನಕ ಮಳೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 20 : ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಅಕ್ಟೋಬರ್ 24ರ ತನಕ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಭಾರತೀಯ ಹವಾಮಾನ ಇಲಾಖೆ ಭಾರಿ ಮಳೆಯಾಗುವ ಕುರಿತು ಮುನ್ಸೂಚನೆ ನೀಡಿದೆ. ಅರಬ್ಬೀ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದಾಗಿ ಕೇರಳ, ಕರ್ನಾಟಕ ಕರಾವಳಿ, ಮಲೆನಾಡು ಪ್ರದೇಶದ ಅಲ್ಲಲ್ಲಿ ಮಳೆಯಾಗಲಿದೆ.

ಚಿತ್ರಗಳು : ಉಡುಪಿಯಲ್ಲಿ ದಿಢೀರ್ ಮಳೆ; ಕೊಚ್ಚಿ ಹೋದ ರಸ್ತೆಚಿತ್ರಗಳು : ಉಡುಪಿಯಲ್ಲಿ ದಿಢೀರ್ ಮಳೆ; ಕೊಚ್ಚಿ ಹೋದ ರಸ್ತೆ

ಅಕ್ಟೋಬರ್ 20 ರಿಂದ 24ರ ತನಕ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಕರಾವಳಿ ಮತ್ತು ಮಲೆನಾಡಿನ ಪ್ರದೇಶಗಳಲ್ಲಿ ಪ್ರತಿದಿನ ಮಳೆಯಾಗುತ್ತಲೇ ಇದೆ. ಗುಡುಗು ಸಹಿತ ಸುರಿಯುತ್ತಿರುವ ಮಳೆ ಜನರಿಗೆ ಆತಂಕ ತಂದಿದೆ.

ಮತ್ತೆ ಜೋರಾಯ್ತು ಮಳೆ: ಕೊಡಗು, ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರಮತ್ತೆ ಜೋರಾಯ್ತು ಮಳೆ: ಕೊಡಗು, ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ

rain

ಹವಾಮಾನ ಇಲಾಖೆ ಕೊಡಗು ಜಿಲ್ಲೆಯಲ್ಲಿ ಅಕ್ಟೋಬರ್ 20 ರಿಂದ 23ರ ತನಕ ಆರೆಂಜ್ ಅಲರ್ಟ್, ಅಕ್ಟೋಬರ್ 23 ರಿಂದ 24ರ ಬೆಳಗ್ಗೆ ತನಕ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಈ ಕುರಿತು ಜಿಲ್ಲಾಡಳಿತ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಗಾಳಿ ಇಲ್ಲ ಮಳೆ ಇಲ್ಲ, ನೋಡುತ್ತಿದ್ದಂತೆ ಶಾಲಾ ಬಸ್‌ ಮೇಲೆ ಉರುಳಿದ ಮರ ಗಾಳಿ ಇಲ್ಲ ಮಳೆ ಇಲ್ಲ, ನೋಡುತ್ತಿದ್ದಂತೆ ಶಾಲಾ ಬಸ್‌ ಮೇಲೆ ಉರುಳಿದ ಮರ

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಶುಕ್ರವಾರದಿಂದ ಜೋರು ಮಳೆಯಾಗುತ್ತಲೇ ಇದೆ. ಉಡುಪಿ ನಗರ, ಬ್ರಹ್ಮಾವರ, ಮಲ್ಪೆಯಲ್ಲಿ ಮಳೆಯಾಗಿದೆ.

ಕಾರವಾರ, ಭಟ್ಕಳ, ಹೊನ್ನಾವರ, ಕುಟುಮಾ, ಶಿರಸಿಯ ಹಲವು ಪ್ರದೇಶಗಳಲ್ಲಿ ಶುಕ್ರವಾರ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸುಮಾರು ಒಂದು ಗಂಟೆ ಭಾರಿ ಮಳೆ ಸುರಿದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ, ಶಿಕಾರಿಪುರ, ಭದ್ರಾವತಿ, ಹೊಸನಗರ, ರಿಪ್ಪನ್ ಪೇಟೆಯಲ್ಲಿಯೂ ಶುಕ್ರವಾರ ಮತ್ತು ಶನಿವಾರ ಮಳೆಯಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಶುಕ್ರವಾರ ಸುರಿದ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಈರುಳ್ಳಿ ಬೆಳೆಗೆ ಹಾನಿಯಾಗಿದೆ.

English summary
The India Meteorological Department (IMD) issued a orange alert for Karnataka Karavali and Malnad region districts till October 24, 2019 forecasting heavy rain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X