ಕೊಡಗು ಜಿಲ್ಲೆಯಲ್ಲಿ 2 ದಿನ ಆರೆಂಜ್ ಅಲರ್ಟ್

ಬೆಂಗಳೂರು, ಜೂನ್ 10; ನೈಋತ್ಯ ಮುಂಗಾರು ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಆಗಾಗ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಜೂನ್ 12 ರಿಂದ 14ರ ತನಕ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬುಧವಾರ ಕಾರವಾರದಲ್ಲಿ ಮಧ್ಯಾಹ್ನದ ತನಕ ಮೋಡ ಕವಿದ ವಾತಾವರಣವಿತ್ತು. ಸಂಜೆ ಮಳೆಯಾಗಿದೆ. ಅಂಕೋಲಾ, ಗೋಕರ್ಣ, ಕುಮಟಾ, ಭಟ್ಕಳದಲ್ಲಿಯೂ ಮಳೆಯಾಗಿದೆ. ಶಿರಸಿ, ಸಿದ್ದಾಪುರ, ದಾಂಡೇಲಿಯಲ್ಲಿ ತುಂತುರು ಮಳೆಯಾಗಿದೆ.

ಕೊಡಗು ಜಿಲ್ಲೆಯ ಮಡಿಕೇರಿ, ಕಾಟಕೇರಿ, ಭಾಗಮಂಡಲ, ತಲಕಾವೇರಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಜೂನ್ 12 ರಿಂದ 14ರ ತನಕ ಜಿಲ್ಲೆಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Orange Alert

ಕೊಡಗು ಸೇರಿದಂತೆ ಮಲೆನಾಡು ಭಾಗಗಲ್ಲಿ ಮುಂಗಾರು ಮಳೆ ಹೆಚ್ಚಾಗುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆ ಈ ಕುರಿತು ಮುನ್ಸೂಚನೆ ನೀಡಿದೆ. ಜನರು ಎಚ್ಚರಿಕೆಯಿಂದ ಇರಬೇಕು. ಹವಾಮಾನ ಇಲಾಖೆ ಮುನ್ಸೂಚನೆಗಳನ್ನು ಗಮನಿಸಬೇಕು ಎಂದು ಕೊಡಗು ಜಿಲ್ಲಾಡಳಿತ ಮನವಿ ಮಾಡಿದೆ.

ಬುಧವಾರ ಶಿವಮೊಗ್ಗ ಜಿಲ್ಲೆಯ ಸಾಗರದ ಕಾರ್ಗಲ್ ಜೋಗಾದಲ್ಲಿ ಉತ್ತಮ ಮಳೆಯಾಗಿದೆ. ಸೊರಬ ಮತ್ತು ಶಿಕಾರಿಪುರದಲ್ಲಿಯೂ ಮಳೆಯಾಗಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ, ದಾವಣಗೆರೆ ನಗರ, ವಿಜಯನಗರ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಬೀದರ್ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿಯೂ ಉತ್ತಮ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+