ಅಕಾಲಿಕ ಮಳೆ, ವಿವಿಧ ಜಿಲ್ಲೆಗಳಲ್ಲಿ Orange alert

ಬೆಂಗಳೂರು, ಡಿಸೆಂಬರ್ 02 : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಜನರಿಗೆ ಸಂಕಷ್ಟ ತಂದಿದೆ. ಹವಾಮಾನ ಇಲಾಖೆ ಸೋಮವಾರ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ತುಮಕೂರು, ಚಿತ್ರದುರ್ಗ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ಮಳೆಯಾಗಿದೆ. ಡಿಸೆಂಬರ್ 3ರ ತನಕ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹವಾಮಾನ ಇಲಾಖೆ ಡಿಸೆಂಬರ್ 2ರ ಸೋಮವಾರ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹೇಳಿದೆ. Orange alert ಘೋಷಣೆ ಮಾಡಿದೆ.

IMD Issues Orange Alert In Many District Of Karnataka

ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದ್ದು, 'ಯೊಲ್ಲೊ ಅಲರ್ಟ್' ಘೋಷಣೆ ಮಾಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ತುಮಕೂರು ಮುಂತಾದ ಕಡೆ ಭಾನುವಾರ ಸುರಿದ ಮಳೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಕಡೆ ಭತ್ತದ ಬೆಳೆ ಕಟಾವಿಗೆ ಬಂದು ನಿಂತಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಅಡಿಕೆ ಬೆಳೆಗಾರರಿಗೂ ಮಳೆ ತೊಂದರೆ ಉಂಟು ಮಾಡಿದೆ.

ಚಿಕ್ಕಮಗಳೂರಿನಲ್ಲಿ ಸುರಿದ ಮಳೆಯಿಂದಾಗಿ ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ಅರೇಬಿಕಾ ಕಾಫಿ ಹಣ್ಣಾಗಿದ್ದು, ಮಳೆ ಸುರಿಯುತ್ತಲೇ ಇದ್ದರೆ ಉದುರಿ ಹೋಗಲಿದೆ. ಜಿಲ್ಲೆಯ ಕಳಸದಲ್ಲಿ ಭಾನುವಾರ ಹೆಚ್ಚು ಮಳೆಯಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ರಿಪ್ಪನ್‌ಪೇಟೆ, ಭದ್ರಾವತಿಯಲ್ಲಿ ಭಾನುವಾರ ಸಾಧಾರಣ ಮಳೆಯಾಗಿದೆ. ಚಿತ್ರದುರ್ಗ, ಬಳ್ಳಾರಿ ನಗರ, ತುಮಕೂರು, ಕುಣಿಗಲ್, ಮಧುಗಿರಿ ವ್ಯಾಪ್ತಿಯಲ್ಲಿ ತುಂತುರು ಮಳೆಯಾಗಿದೆ.

ಅರಬ್ಬೀ ಸಮುದ್ರ ಮತ್ತು ಹಿಂದೂ ಮಹಾಸಾಗರದ ಮಧ್ಯೆ ವಾಯುಭಾರ ಕುಸಿತ ಉಂಟಾಗಿದೆ. ಆದ್ದರಿಂದ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ನಗರದಲ್ಲಿ ಶನಿವಾರ ಸಂಜೆಯಿಂದ ತುಂತುರು ಮಳೆಯಾಗುತ್ತಿದ್ದು ಮೋಡ ಕವಿದ ವಾತಾವರಣವಿದೆ. ನಗರದಲ್ಲಿ ಶೀತಗಾಳಿ ಹೆಚ್ಚಾಗಿದ್ದು, ಸೋಮವಾರ ಮುಂಜಾನೆಯೂ ತುಂತುರು ಮಳೆಯಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+