ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರಿ ಮಳೆ; ರೆಡ್ ಅಲರ್ಟ್‌

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 20 : ಕರಾವಳಿ, ಮಲೆನಾಡು ಸೇರಿದಂತೆ ಕರ್ನಾಟಕದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆ. 20 ಮತ್ತು 21ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಸೆಪ್ಟೆಂಬರ್ 23ರ ತನಕ ಗುಡುಗು ಸಹಿತ ಮಳೆಯಾಗಲಿದೆ.

ಪೊನ್ನಂಪೇಟೆ, ನಾಪೋಕ್ಲು, ಸಂಪಾಜೆಯಲ್ಲಿ ಸುರಿದ ಮಳೆ ಎಷ್ಟು? ಪೊನ್ನಂಪೇಟೆ, ನಾಪೋಕ್ಲು, ಸಂಪಾಜೆಯಲ್ಲಿ ಸುರಿದ ಮಳೆ ಎಷ್ಟು?

ಬೆಂಗಳೂರು ನಗರದಲ್ಲಿ ಶನಿವಾರ ಮಧ್ಯಾಹ್ನ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದೆ. ರಾತ್ರಿ ಮಳೆ ಬಿಡುವು ನೀಡಿತ್ತು. ಭಾನುವಾರ ಬೆಳಗ್ಗೆಯೇ ದಟ್ಟವಾದ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆ ಆರಂಭವಾಗಿದೆ, ನಗರದಲ್ಲಿ ಉಷ್ಣಾಂಶ ಇಳಿಮುಖವಾಗಿದೆ.

ಶಿವಮೊಗ್ಗ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ ಶಿವಮೊಗ್ಗ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

ಕರಾವಳಿ ಭಾಗದಲ್ಲಿ ಗಂಟೆಗೆ 55 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಶನಿವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ 8 ಸೆಂ. ಮೀ. ಮಳೆಯಾಗಿದೆ.

ಕೊಡಗು ಜಿಲ್ಲೆಯಲ್ಲಿ ಸೆ. 15 ರ ತನಕ ಸುರಿದ ಮಳೆ ವಿವರ ಕೊಡಗು ಜಿಲ್ಲೆಯಲ್ಲಿ ಸೆ. 15 ರ ತನಕ ಸುರಿದ ಮಳೆ ವಿವರ

48 ಗಂಟೆಗಳಲ್ಲಿ ಭಾರಿ ಮಳೆ

48 ಗಂಟೆಗಳಲ್ಲಿ ಭಾರಿ ಮಳೆ

ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.

ತಗ್ಗು ಪ್ರದೇಶಗಳು ಜಲಾವೃತ

ತಗ್ಗು ಪ್ರದೇಶಗಳು ಜಲಾವೃತ

ಶುಕ್ರವಾರ ರಾತ್ರಿ ಶನಿವಾರ ಸುರಿದ ಮಳೆಗೆ ರಾಯಚೂರು ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಸುಮಾರು 48 ಮೀ. ಮೀ. ಮಳೆಯಾಗಿದ್ದು, ರಾಯಚೂರು ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಜಹೀರಾ ಬಾದ್, ಸಿಯಾ ತಲಾಬ್, ಜಲಾಲ ನಗರ, ನೀರಭಾವಿ ಕುಂಟಾ ಬಡಾವಣೆಗಳು ಜಲಾವೃತವಾಗಿದ್ದವು. ಹತ್ತಿ ಮತ್ತು ಮೆಣಸಿನ ಕಾಯಿ ಬೆಳೆಗೆ ಹಾನಿಯಾಗಿದೆ.

ಕಡಿಮೆಯಾದ ಮಳೆ

ಕಡಿಮೆಯಾದ ಮಳೆ

ಬುಧವಾರದಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಕಲಬುರಗಿಯಲ್ಲಿ ಬಿಡುವು ಕೊಟ್ಟಿದೆ. ಚಿತ್ತಾಪುರದ ದಂಡೋತಿ ಬಳಿಯ ಕಾಗಿಣಾ ನದಿ ಸೇತುವೆ ಮೇಲೆ ನೀರು ಇಳಿದಿದ್ದು, ಸಂಚಾರಕ್ಕೆ ಮುಕ್ತವಾಗಿದೆ. ಬೀದರ್ ಜಿಲ್ಲೆಯ ಕಾರಂಜಾ ಜಲಾಶಯಕ್ಕೆ 1,851 ಕ್ಯುಸೆಕ್ ನೀರು ಹರಿದುಬರುತ್ತಿದೆ.

Recommended Video

Corona ಲಸಿಕೆ ಭಾರತದಲ್ಲಿ ಉತ್ಪಾದನೆ ಆದ ಬಳಿಕ ಇರುವ ಸವಾಲುಗಳೇನು ? | Oneindia Kannada
ಕೊಡಗಿನಲ್ಲಿ ಭಾರಿ ಮಳೆ

ಕೊಡಗಿನಲ್ಲಿ ಭಾರಿ ಮಳೆ

ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕೊಡಗಿನಲ್ಲಿ ಭಾರಿ ಮಳೆಯಾಗುತ್ತಿದೆ. ಕಾವೇರಿ, ಲಕ್ಷ್ಮಣತೀರ್ಥ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮಡಿಕೇರಿ, ಭಾಗಮಂಡಲ, ತಲಕಾವೇರಿ, ನಾಪೋಕ್ಲು ಭಾಗದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಹಾರಂಗಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ.

English summary
The India Meteorological Department (IMD) has issued a red category warning for 7 districts of Karnataka on September 20 and 21, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X