ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮಳೆ; ರೆಡ್‌ ಅಲರ್ಟ್ ಘೋಷಣೆ

|
Google Oneindia Kannada News

ಬೆಂಗಳೂರು, ಜೂನ್ 18: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ಸೂಚನೆಯಿದ್ದು, ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿದ್ದು, ನದಿ ತೊರೆಗಳು ಉಕ್ಕಿ ಹರಿಯುತ್ತಿವೆ. ಜೂನ್ 3ರ ನಂತರ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದ್ದು, ಈಗ ಮುಂಗಾರು ಅಬ್ಬರ ಹೆಚ್ಚಾಗಿದೆ. ಕಳೆದ ಬಾರಿಗೆ ಹೋಲಿಸಿದರೆ, ಈ ಬಾರಿ ಜೂನ್ ಎರಡನೇ ಮತ್ತು ಮೂರನೇ ವಾರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇನ್ನೂ ಕೆಲವು ದಿನ ಮಳೆ ಮುಂದುವರೆಯುವ ಸೂಚನೆ ನೀಡಲಾಗಿದೆ. ಮುಂದೆ ಓದಿ...

 ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಮಟ್ಟದಲ್ಲಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಶುಕ್ರವಾರ ಹಾಗೂ ಶನಿವಾರ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ.

ಜೂನ್ 21ರವರೆಗೂ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯ ಮುನ್ಸೂಚನೆಜೂನ್ 21ರವರೆಗೂ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯ ಮುನ್ಸೂಚನೆ

 ಮಲೆನಾಡು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಮಲೆನಾಡು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿಯೂ ಅಧಿಕ ಮಳೆಯಾಗುವ ಸೂಚನೆ ನೀಡಲಾಗಿದ್ದು, ಈ ರಾಜ್ಯಗಳಲ್ಲಿ ಇಂದು ಹಾಗೂ ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕಳೆದ ಮೂರು ದಿನಗಳಿಂದಲೂ ಧಾರಾಕಾರ ಮಳೆ ಸುರಿಯುತ್ತಿದೆ.

 ಗುರುವಾರ ಮಳೆಯಾಗಿರುವ ಭಾಗಗಳು

ಗುರುವಾರ ಮಳೆಯಾಗಿರುವ ಭಾಗಗಳು

ಕೊಟ್ಟಿಗೆಹಾರ, ಆಗುಂಬೆ, ನಿಪ್ಪಾಣಿ, ಸಿದ್ದಾಪುರ, ಶೃಂಗೇರಿ, ಕಳಸ, ಭಾಗಮಂಡಲ, ಮಂಚಿಕೆರೆ, ಕೊಲ್ಲೂರು, ಬೆಳಗಾವಿ, ಮಂಕಿ, ಸಂಕೇಶ್ವರ, ತಾಳಗುಪ್ಪ, ಮುಂಡಗೋಡು, ಬೆಳ್ತಂಗಡಿ, ಜಯಪುರ, ಬೆಳಗಾವಿ, ಧರ್ಮಸ್ಥಳ, ಕದ್ರ, ವಿರಾಜಪೇಟೆ, ಮೂಡುಬಿದಿರೆ, ಅಥಣಿ, ಸಿದ್ದಾಪುರ, ಕಿರವತ್ತಿ, ಹಾವೇರಿ, ಹುಂಚದಕಟ್ಟೆ, ತ್ಯಾಗರ್ತಿ, ಬಾಳೆಹೊನ್ನೂರು, ಮಂಗಳೂರು, ಪಣಂಬೂರು, ಕುಷ್ಟಗಿ, ಕೆರೂರು, ನರಗುಂದ, ಸಂಡೂರಿನಲ್ಲಿ ಮಳೆಯಾಗಿದೆ.

ಕೊಡಗಿನಲ್ಲಿ ವಾರದಿಂದ ಭಾರಿ ಮಳೆ, ಹಾರಂಗಿ ನೀರಿನ ಮಟ್ಟ ಎಷ್ಟು?ಕೊಡಗಿನಲ್ಲಿ ವಾರದಿಂದ ಭಾರಿ ಮಳೆ, ಹಾರಂಗಿ ನೀರಿನ ಮಟ್ಟ ಎಷ್ಟು?

 ಜೂನ್ 21ರವರೆಗೂ ಈ ಜಿಲ್ಲೆಗಳಲ್ಲಿ ಮಳೆ

ಜೂನ್ 21ರವರೆಗೂ ಈ ಜಿಲ್ಲೆಗಳಲ್ಲಿ ಮಳೆ

ಜೂನ್ 21ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Recommended Video

ಮಳೆಯಿಂದ ಚಾರ್ಮಾಡಿ ಘಾಟ್ ನಲ್ಲಿ ಸೃಷ್ಟಿಯಾಗಿದೆ ಸುಂದರ ಜಲಪಾತಗಳು | Oneindia Kannada

English summary
Red alert for heavy to very heavy rainfall issued in Dakshin Kannada, Udupi and Uttara Kannada districts for june 18 and 19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X