ಸೆ.8ರ ತನಕ 23 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

ಬೆಂಗಳೂರು, ಸೆಪ್ಟೆಂಬರ್ 06 : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6 ರಿಂದ 8ರ ತನಕ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 23 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಆಗಸ್ಟ್ ಕೊನೆಯ ವಾರದಿಂದಲೇ ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಿದೆ. ವಿವಿಧ ಜಿಲ್ಲೆಗಳಲ್ಲಿ ಆಗಾಗ ಭಾರಿ ಮಳೆಯಾಗುತ್ತಿದೆ. ಕರಾಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8ರ ತನಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದೆ. ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಹೇಳಿದೆ.

IMD

ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ 6 ಸೆಂ. ಮೀ. ಮಳೆಯಾಗಿದೆ. ಹಾಸನದಲ್ಲಿ 5, ಹೊಸನಗರ ಮತ್ತು ಚಾಮರಾಜನಗರದಲ್ಲಿ 4 ಸೆಂ. ಮೀ. ಮಳೆಯಾಗಿದೆ.

ಕಾರವಾರ, ಭಾಗಮಂಡಲ, ಶಿಕಾರಿಪುರದಲ್ಲಿ 2 ಸೆಂ. ಮೀ., ಬೆಳ್ತಂಗಡಿ, ಸುಳ್ಯ, ಧಾರವಾಡ, ತೀರ್ಥಹಳ್ಳಿಯಲ್ಲಿ 1 ಸೆಂ. ಮೀ. ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+