ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಯುಭಾರ ಕುಸಿತ; ಕರಾವಳಿ, ಮಲೆನಾಡಲ್ಲಿ ಯೆಲ್ಲೊ ಅಲರ್ಟ್

|
Google Oneindia Kannada News

ಬೆಂಗಳೂರು, ಅಕ್ಟೋಬರ್ 18 : ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಅಕ್ಟೋಬರ್ 19ರ ತನಕ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.

ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮದಿಂದಾಗಿ ಕರ್ನಾಟಕದ ಕರಾವಳಿ, ಮಲೆನಾಡು ಪ್ರದೇಶ ಮತ್ತು ಕೇರಳದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಚಿತ್ರಗಳು : ಉಡುಪಿಯಲ್ಲಿ ದಿಢೀರ್ ಮಳೆ; ಕೊಚ್ಚಿ ಹೋದ ರಸ್ತೆಚಿತ್ರಗಳು : ಉಡುಪಿಯಲ್ಲಿ ದಿಢೀರ್ ಮಳೆ; ಕೊಚ್ಚಿ ಹೋದ ರಸ್ತೆ

ಕರ್ನಾಟಕದ ಕೊಡಗು ಜಿಲ್ಲೆಯಲ್ಲಿಯೂ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು ಅಕ್ಟೋಬರ್ 17 ರಿಂದ 19ರ ತನಕ 64.5 ಮಿ. ಮೀ. ನಿಂದ 115.50 ಮಿ. ಮೀ. ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಲಾಗಿದೆ.

ಮುಂಗಾರು ಅಂತ್ಯ; ಕರ್ನಾಟಕದಲ್ಲಿ ಶೇ 23ರಷ್ಟು ಅಧಿಕ ಮಳೆ ಮುಂಗಾರು ಅಂತ್ಯ; ಕರ್ನಾಟಕದಲ್ಲಿ ಶೇ 23ರಷ್ಟು ಅಧಿಕ ಮಳೆ

rain

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಚಾಮರಾಜನಗರದ ಹನೂರು ಸಮೀಪದ ಮಂಗಲ ಗ್ರಾಮದಲ್ಲಿ ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ಸಿದ್ದಮ್ಮ ಎಂಬುವವರ ಮನೆ ಗೋಡೆ ಕುಸಿದಿದೆ.

ಹವಾಮಾನ ವೈಪರಿತ್ಯ : ಭವಿಷ್ಯದಲ್ಲಿ ಹನಿ ನೀರಿಗೂ ಸಂಕಷ್ಟ ಹವಾಮಾನ ವೈಪರಿತ್ಯ : ಭವಿಷ್ಯದಲ್ಲಿ ಹನಿ ನೀರಿಗೂ ಸಂಕಷ್ಟ

ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಬಿದ್ದ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ಭೂ ಕುಸಿತವಾಗಿದೆ, ರಸ್ತೆ ಸಂಪರ್ಕ ಕಡಿತಗೊಂಡಿದೆ. ಆದ್ದರಿಂದ, ಮಳೆಯ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಗೆ ಕರೆ ಮಾಡಲು 08272-221077 ಸಹಾಯವಾಣಿಗೆ ಕರೆ ಮಾಡಬಹುದು ಎಂದು ಹೇಳಿದೆ.

ಬೆಂಗಳೂರು ನಗರದಲ್ಲಿ ಗುರುವಾರ ಸಂಜೆ ಸುಮಾರು ಅರ್ಧಗಂಟೆಗಳ ಕಾಲ ಮಳೆಯಾಗಿದೆ. ಶುಕ್ರವಾರವೂ ಮಳೆಯಾಗುವ ಸಾಧ್ಯತೆ ಇದೆ.

English summary
The India Meteorological Department (IMD) issued a yellow alert for Karnataka Karavali and Malnad region district forecasting heavy rain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X