ಮಳೆ ಮುನ್ಸೂಚನೆ; ಕರಾವಳಿಯ 3 ಜಿಲ್ಲೆಗಳಲ್ಲಿ Yellow Alert

ಬೆಂಗಳೂರು, ಅಕ್ಟೋಬರ್ 15 : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ 48 ಗಂಟೆಗಳ ಕಾಲ Yellow Alert ಘೋಷಣೆ ಮಾಡಲಾಗಿದೆ. ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ನೈಋತ್ಯ ಮುಂಗಾರು ವೇಗವಾಗಿ ಬೀಸುತ್ತಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ದಕ್ಷಿಣ ಒಳನಾಡಿನಲ್ಲಿ ಮಂಗಳವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗದಗ, ಹಾವೇರಿ, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬುಧವಾರ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Recommended Video

      DK Shivakumar's Bail Plea Hearing Today | Oneindia Kannada
      rain

      ನೈಋತ್ಯ ಮುಂಗಾರು ವೇಗವಾಗಿ ಬೀಸುತ್ತಿದೆ. ಆದ್ದರಿಂದ, ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ. ಶನಿವಾರ, ಭಾನುವಾರ ಮತ್ತು ಸೋಮವಾರವೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.

      ಸೋಮವಾರ ಹಾಸನದಲ್ಲಿ 8, ಸಾಗರದಲ್ಲಿ 7, ಚಿಂಚೋಳಿಯಲ್ಲಿ 6, ಧರ್ಮಸ್ಥಳದಲ್ಲಿ 5, ತಾಳಗುಪ್ಪ ಮತ್ತು ಕೆ. ಆರ್. ಪೇಟೆಯಲ್ಲಿ 3 ಸೆಂ. ಮೀ. ಮಳೆಯಾಗಿದೆ.

      ಜೂನ್ 1 ರಿಂದ ಸೆಪ್ಟೆಂಬರ್ 30ರ ತನಕ ದೇಶದಲ್ಲಿ ಮುಂಗಾರು ಚಾಲ್ತಿಯಲ್ಲಿ ಇರುತ್ತದೆ. ಈ ವರ್ಷದ ಮುಂಗಾರು ಋತುವಿನಲ್ಲಿ ಕರ್ನಾಟಕದಲ್ಲಿ ಶೇ 23ರಷ್ಟು ಹೆಚ್ಚು ಮಳೆಯಾಗಿದೆ.

      ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇದ್ದು ಜನರು ಆತಂಕಗೊಂಡಿದ್ದಾರೆ. ಈಗಾಗಲೇ ಮಳೆ, ಪ್ರವಾಹದಿಂದ ಹಲವು ಜಿಲ್ಲೆಗಳಲ್ಲಿ ರೈತರಿಗೆ ಬೆಳೆ ನಷ್ಟವಾಗಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಮುಂದುವರೆದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+