ಮಳೆ ಇಳಿಮುಖ; ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಕುಸಿತ, ಚಳಿ
ಬೆಂಗಳೂರು, ಡಿಸೆಂಬರ್ 21; ಹವಾಮಾನ ವೈಪರಿತ್ಯದ ಕಾರಣ ತಾಪಮಾನ ಕುಸಿತವಾಗುತ್ತಿದೆ. ರಾಜ್ಯದಲ್ಲಿ ತಾಪಮಾನ ಕ್ಷೀಣಿಸಿದ್ದು, ಚಳಿಯ ತೀವ್ರತೆಯೂ ಹೆಚ್ಚಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ತನಕ ಒಣಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಕುಸಿತವಾಗಿದೆ. ಬೆಳಗ್ಗೆ ಮತ್ತು ಸಂಜೆ ಶೀತಗಾಳಿ ಜನರನ್ನು ನಡುಗಿಸುತ್ತಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ಚಳಿಯ ಪ್ರಮಾಣ ಏರಿಕೆಯಾಗಲಿದೆ.
ಸೋಮವಾರ ಧಾರವಾಡದಲ್ಲಿ 9.7 ಡಿಗ್ರಿ ಸೆಲ್ಸಿಯಸ್ ಅತಿ ಕಡಿಮೆ ತಾಪಮಾನ ದಾಖಲಾಗಿದೆ. ಸೋಮವಾರದಂತೆ ಮಂಗಳವಾರವೂ ಸಹ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದಟ್ಟ ಮಂಜು ಕವಿದಿದ್ದು, ವಾಹನ ಸಂಚಾರಕ್ಕೆ ಸಹ ಅಡಚಣೆ ಉಂಟಾಗಿದೆ.

ಮಂಗಳವಾರ ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ನಗರದಲ್ಲಿ ಮುಂಜಾನೆ ಶೀತ ವಾತಾವರಣ ಮತ್ತು ದಟ್ಟ ಮಂಜು ಕವಿದಿದ್ದು, ಕೆಲವು ಜನರು ಬೆಳಗ್ಗೆಯ ವಾಕಿಂಗ್‌ಗೆ ಹೋಗದೇ ಮನೆಯಲ್ಲಿಯೇ ಕಾಲ ಕಳೆದರು.
ಕಡಿಮೆ ತಾಪಮಾನ; ಸೋಮವಾರ ಆಗುಂಬೆ ಮತ್ತು ಬಾಗಲಕೋಟೆಯಲ್ಲಿ 10 ಡಿಗ್ರಿ ಸೆಲ್ಸಿಯಸ್. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 11. ಬೀದರ್, ವಿಜಯಪುರ, ಹಾವೇರಿಯಲ್ಲಿ 11 ಡಿಗ್ರಿ ಸೆಲ್ಸಿಯಸ್. ಶಿವಮೊಗ್ಗ, ಚಿಂತಾಮಣಿ, ದಾವಣಗೆರೆ, ಕೊಪ್ಪಳದಲ್ಲಿ 12 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
Himachal Pradesh: Cold weather conditions persist in the state with several areas experiencing sub-zero temperatures.
— ANI (@ANI) December 20, 2021
Icicles form in Lahaul valley of Lahaul-Spiti district due to continuing cold weather conditions in the region. pic.twitter.com/aAGSM8WoKA
ಸೋಮವಾರ ಮೈಸೂರಿನಲ್ಲಿ ಕನಿಷ್ಠ ಉಷ್ಣಾಂಶ 15.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಈ ವರ್ಷ ಚಳಿಗಾಲದಲ್ಲಿ ಇದೇ ಕಡಿಮೆ ಉಷ್ಣಾಂಶವಾಗಿದೆ. ಮಂಗಳವಾರ ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ.
ಉತ್ತರ ಭಾರತದ ರಾಜ್ಯಗಳಲ್ಲಿ ಶೀತಗಾಳಿ ಬೀಸುತ್ತಿದ್ದು, ಜನರು ಹೈರಾಣಾಗಿದ್ದಾರೆ. ವಾಯುವ್ಯ ಭಾರತದಲ್ಲಿಯೂ ಇಂದು ಶೀತ ಮಾರುತಗಳು ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳ ಕಾಲ ಪಂಜಾಬ್, ಹರ್ಯಾಣ, ದೆಹಲಿ, ರಾಜಸ್ಥಾನ ಮತ್ತು ಮಧ್ಯ ಪ್ರದೇಶದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರಾಖಂಡ, ಮಹಾರಾಷ್ಟ್ರ, ಬಿಹಾರ, ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ಬುಧವಾರ ಮಧ್ಯಾಹ್ನದ ತನಕ ಮತ್ತು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಬುಧವಾರದ ತನಕ ಚಳಿಗಾಳಿ ಮುಂದುವರೆಯಲಿದೆ.
ಹಿಮಪಾತದ ಎಚ್ಚರಿಕೆ; ಡಿಸೆಂಬರ್ 23ರಿಂದ 25ರ ತನಕ ಪಂಜಾಬ್ ಮತ್ತು ಹರ್ಯಾಣದ ಕೆಲವು ಭಾಗಗಳು. ಡಿಸೆಂಬರ್ 24 ಮತ್ತು 25ರಂದು ಪಶ್ಚಿಮ ರಾಜಸ್ಥಾನದ ಮೇಲೆ ದಟ್ಟವಾದ ಮಂಜು ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಿಮಾಲಯದ ಪ್ರದೇಶಗಳಲ್ಲಿ ಲಘು ಮತ್ತು ಮಧ್ಯಮ ಪ್ರಮಾಣದಲ್ಲಿ ಹಿಮಪಾತವಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಡಿಸೆಂಬರ್ 22 ಮತ್ತು 23ರಂದು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ.
ಅಕಾಲಿಕ ಮಳೆ ಪರಿಹಾರ; ಅತಿಯಾದ ಮಳೆಯಿಂದಾಗಿ ವಾಸದ ಮನೆಯೊಳಗೆ ಮಳೆನೀರು ಬಂದ ಸುಮಾರು 57 ಪ್ರಕರಣಗಳಿಗೆ ಮಾರ್ಗಸೂಚಿ ಪ್ರಕಾರ 2.17 ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ. 2 ಜಾನುವಾರು ಹಾನಿ ಹಾಗೂ ಪೌಲ್ಟ್ರಿಫಾರಂ ಹಾನಿಯಾದ ಪ್ರಕರಣಕ್ಕೆ 65 ಸಾವಿರ ಪರಿಹಾರ ನೀಡಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ದಿ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದ್ದಾರೆ.
ಜುಲೈ ತಿಂಗಳಿನಿಂದ ಡಿಸೆಂಬರ್ 15ರ ವರೆಗೆ ಜಿಲ್ಲೆಯಲ್ಲಿ 7 ಪೂರ್ಣ ಪ್ರಮಾಣದ ಮನೆ ಹಾನಿಯಾಗಿದ್ದು ರೂ. 6,65,700 ಪರಿಹಾರ ನೀಡಲಾಗಿದೆ. ಬಿ1, ಬಿ2 ಕೆಟಗೇರಿ ಸೇರಿ ಒಟ್ಟು 681 ಮನೆಗಳಿಗೆ ಹಾನಿಯಾಗಿದ್ದು ರೂ. 5,90,57,100 ಪರಿಹಾರವನ್ನು ನೀಡಲಾಗಿದೆ. ಸಿ ಕೆಟಗೇರಿಯ 1,280 ಮನೆಗಳಿಗೆ ಹಾನಿಯಾಗಿದ್ದು ರೂ. 6,12,00,000 ಪರಿಹಾರವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications