ಜೂನ್ 17ರ ತನಕ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ
ಬೆಂಗಳೂರು, ಜೂನ್ 13; ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದೆ. ಶನಿವಾರ ಉತ್ತಮ ಮಳೆಯಾಗಿದ್ದು, ಜೂನ್ 17ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ.
ಮುಂಬೈನಲ್ಲಿ ಮಳೆ ಅಬ್ಬರ; ರೆಡ್ ಅಲರ್ಟ್ ಘೋಷಣೆ
ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಜೂನ್ 13 ರಿಂದ 17ರ ತನಕ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಮುಂಗಾರು ಚುರುಕು, ಮುಂದಿನ 3 ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಜೂನ್ 17ರ ತನಕ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗಂಟೆಗೆ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಮುದ್ರಕ್ಕೆ ಇಳಿಯಬಾರದು ಎಂದು ಮೀನುಗಾರರಿಗೆ ಸೂಚಿಸಲಾಗಿದೆ.
ದ.ಕ ಜಿಲ್ಲೆಯಲ್ಲಿ ಮುಂಗಾರು ಅಬ್ಬರ-ಭಾರೀ ಗಾಳಿ ಮಳೆಗೆ ಅಪಾರ ಹಾನಿ
ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಶನಿವಾರ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಗೋಕರ್ಣ, ಕುಮಟಾ, ಹೊನ್ನಾವರ, ಭಟ್ಕಳ, ಜೊಯಿಡಾ, ದಾಂಡೇಲಿ, ಸಿದ್ದಾಪುರದಲ್ಲಿ ಉತ್ತಮ ಮಳೆಯಾಗಿದೆ.
ಬೆಂಗಳೂರು ನಗರದಲ್ಲಿಯೂ ಶನಿವಾರ ಆಗಾಗ ಮಳೆ ಸುರಿದಿದೆ. ಭಾನುವಾರ ಮುಂಜಾನೆಯೇ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ನಿರೀಕ್ಷೆ ಇದೆ.
ಕೊಲ್ಲೂರಿನಲ್ಲಿ ಗರಿಷ್ಠ 10 ಸೆಂ. ಮೀ. ಮಳೆಯಾಗಿದೆ. ಭಟ್ಕಳ 7, ಸಿದ್ದಾಪುರ 5, ಮೂಡುಬಿದಿರೆ 4 ಸೆಂ. ಮೀ. ಮಳೆಯಾಗಿದೆ. ಕಾರವಾರ, ಕಾರ್ಕಳ, ಪುತ್ತೂರು ಮತ್ತು ಶೃಂಗೇರಿಯಲ್ಲಿ 3 ಸೆಂ. ಮೀ. ಮಳೆಯಾಗಿದೆ.