Karnataka Rain: ಈ ವಾರವು ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು, ಸೆಪ್ಟಂಬರ್ 09: ಕರ್ನಾಟಕ ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಜೋರು ಗಾಳಿ ಸಹಿತ ಧಾರಾಕಾರ ಮಳೆ ಆಗಲಿದೆ. ಈ ಮಳೆ ಅಬ್ಬರುವ ತೀವ್ರತೆ ಮಲೆನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ ಹೆಚ್ಚಾಗಿ ಕಂಡು ಬರಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗಾಳಿಯ ಬೀಸುವಿಕೆ ಪ್ರಮಾಣದಲ್ಲಿ ಏರಿಕೆ ಕಂಡು ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ವ್ಯಾಪ್ತಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಲ್ಲಿಯ ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ. ಇದರೊಂದಿಗೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿಲೋ ಮೀಟರ್ ಬೀಸಲಿದೆ. ಈ ಭಾಗದಲ್ಲಿ ಭಾರೀ ಮಳೆಯ ದರ್ಶನವಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ ರಾಜ್ಯದಲ್ಲಿ ಕೆಲವು ದಿನಗಳಿಂದ ಕೆಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮುಂದುವರಿಯಲಿದೆ. ಈ ವಾರವು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳು ಭಾರೀ ಮಳೆಗೆ ಸಾಕ್ಷಿಯಾಗಲಿವೆ. ಆದರೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಅಷ್ಟಾಗಿ ಇಲ್ಲ ಎಂದು ತಿಳಿದು ಬಂದಿದೆ.
ಒಳನಾಡಿನ ಜಿಲ್ಲೆಗಳ ಮುನ್ಸೂಚನೆ
ಮುಂದಿನ 48 ಗಂಟೆಗಳಲ್ಲಿ ರಾಜ್ಯ ಉತ್ತಡ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೀದರ್, ರಾಯಚೂರು ಭಾಗದಲ್ಲಿ ಸಾಧಾರಣ ಮಳೆ ಆಗಬಹುದು. ಒಂದರೆಡು ಕಡೆಗಳಲ್ಲಿ ಜೋರು ಮಳೆ ನಿರೀಕ್ಷಿಸಬಹುದಾಗಿದೆ.

ಇನ್ನೂ ಬೆಂಗಳೂರು ಸೇರಿದಂತೆ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ತುಮಕೂರು, ಚಿತ್ರದುರ್ಗ, ಬಳ್ಳಾರಿ, ವಿಜಯಪುರ ಕಡೆಗಳಲ್ಲಿ ಚದುರಿದಂತೆ ಮಳೆ ಬರಬಹುದು. ವಾತಾವರಣ ತೇವದಿಂದ ಕೂಡಿರಲಿದ್ದು, ಚಳಿ ಗಾಳಿ ಬೀಸಲಿದೆ ಎಂದು ಐಎಂಡಿ ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಮಬ್ಬು ವಾತಾವರಣ
ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ಮುಂದಿನ ಎರಡು ದಿನ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಕಂಡ ಬರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಇಲ್ಲಿ ನಿರಂತರ ಗಾಳಿಯ ವೇಗ ಪ್ರತಿ ಗಂಟೆಗೆ 30 ರಿಂದ 40 ಕಿಲೋ ಮೀಟರ್ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 21° C ನಷ್ಟು ದಾಖಲಾಗಬಹುದು ಎಂದು ಹವಾಮಾನ ತಜ್ಞರು ಊಹಿಸಿದ್ದಾರೆ.












Click it and Unblock the Notifications