Karnataka Rains: ಇಂದಿನಿಂದ 20 ಜಿಲ್ಲೆಗಳಿಗೆ ಮಳೆ ಸಾಧ್ಯತೆ, 5 ದಿನದ ಹವಾಮಾನ ಮುನ್ಸೂಚನೆ

ಬೆಂಗಳೂರು, ಡಿಸೆಂಬರ್ 28: ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಮುಂದುವರಿದಿದೆ. ಚಳಿಗಾಲದಲ್ಲೂ ಹತ್ತಾರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಸುರಿದಿದೆ. ಕೆಲವು ವಾರಗಳಿಂದ ಒಣ ಹವೆ ಕಂಡಿದ್ದ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಶುಕ್ರವಾರ ಸೋನೆ ಮಳೆ ದಾಖಲಾಯಿತು. ಬದಲಾದ ಹವಾಮಾನ ವೈಪರಿತ್ಯಗಳಿಂದಾಗಿ ಮುಂದಿನ 2ರಿಂದ 5 ದಿನ ಸುಮಾರು 20 ಜಿಲ್ಲೆಗಳಲ್ಲಿ ಜೋರು ಮಳೆ ಬರುವ ಮುನ್ಸೂಚನೆ ಇದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ರಾಜ್ಯದಲ್ಲಿ ಇಂದು ಶನಿವಾರವು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳು ಹಾಗೂ ಮಲೆನಾಡಿ ಸೇರಿದಂತೆ ಉತ್ತರ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ನಿರೀಕ್ಷೆ ಇದೆ. ಕರ್ನಾಟಕದ ರಾಜ್ಯದ ಕೆಲವೇ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ಜಿಲ್ಲೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣವೇ ನಿರ್ಮಾಣವಾಗಿದೆ.

IMD Predicted Rainfall in This Karnataka s 20 District Next 48 Hours Due Deep Depression

ಇಂದಿನಿಂದ ಮುಂದಿನ 3 ದಿನ ಮಳೆ ಅಧಿಕ?

ಇಂದಿನಿಂದ ಮುಂದಿನ 3 ದಿನ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬರಲಿದೆ. ಅಂದರೆ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿದರೆ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯ ದರ್ಶನವಾಗುತ್ತಿದೆ. ಈ ಮಳೆ, ಚಳಿ, ಮಬ್ಬು ವಾತಾವರಣ ಮುಂದುವರಿಯಲಿದೆ. ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ಮಳೆ ಬರುವ ಮುನ್ಸೂಚನೆ ಇದೆ.

ಇನ್ನೂ ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾವೇರಿ ,ಗದಗ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಸುಮಾರು 20 ಜಿಲ್ಲೆಗಳಲ್ಲಿ ಮುಂದಿನ 02 ದಿನ ಹಗುರದಿಂದ ಸಾಧಾರಣವಾಗಿ ಮಳೆ ಆಗುವ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಇನ್ನೂವರೆಗೆ ದುರ್ಬಲವಾಗಿಲ್ಲ. ಅಲ್ಲಿಂದ ಬೀಸುವ ಬಿರುಗಾಳಿಯ ಪ್ರಭಾವವು ನೆರೆಯ ತಮಿಳುನಾಡು ಕರಾವಳಿ ಜಿಲ್ಲೆಗಳ ಮೇಲಾಗುತ್ತಿದೆ. ಅಲ್ಲಿ ಭಾರೀ ಮಳೆ ಆಗುತ್ತಿದೆ. ಇದರ ಪ್ರಭಾವವು ಕರ್ನಾಟಕದ ಮೇಲಾಗಿದ್ದು, ರಾಜ್ಯಾದ್ಯಂತ ಮಬ್ಬು, ಚಳಿ ವಾತವರಣ ಕಂಡು ಬರುತ್ತಿದೆ. ಜಿಟಿ ಜಿಟಿ ಮಳೆ ಆಗುತ್ತಿದ್ದು, ಭಾರೀ ಮಳೆಯ ಮುನ್ಸೂಚನೆ ಸದ್ಯಕ್ಕೆ ಇಲ್ಲ ಎನ್ನಲಾಗಿದೆ.

ಮುಂದಿನ 5 ದಿನಗಳ ಮಳೆ: ಈ ಭಾಗಕ್ಕೆ ಒಣ ಹವೆ

ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡು ಹಾಗೂ ಮಲೆನಾಡಿನ ಭಾಗದಲ್ಲಿ ಮುಂದಿನ 5 ದಿನಗಳ ಕಲಾ ಮಳೆ, ಚಳಿ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಅಷ್ಟಾಗಿ ಕಂಡು ಬಾರದು. ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಈ ಭಾಗದಲ್ಲಿ ಮತ್ತೆ ಒಣಹವೆ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+