ಮುಂದಿನ 5 ದಿನ ಕರ್ನಾಟಕದ ಹಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು ಆಗಸ್ಟ್ 21: ಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರಿಸುವ ಎಲ್ಲ ಲಕ್ಷಣಗಳು ಕಂಡು ಬಂದಿದೆ. ಮುಂದಿನ ಐದು ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಂಗಾಳಕೊಲ್ಲಿ ಸಮುದ್ರಮಟ್ಟದಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯಗಳ ಕಾರಣದಿಂದ ರಾಜ್ಯದಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿವೆ. ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಗಸ್ಟ್ 26ರವರೆಗೆ ಸಾಧಾರಣದಿಂದ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಈ ಕಾರಣದಿಂದ ಇಷ್ಟು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಕೊಡಲಾಗಿದೆ.

ಅದೇ ರೀತಿ ದಕ್ಷಿಣ ಒಳನಾಡಿನ ಭಾಗದಲ್ಲಿ ಮುಂದಿನ ಎರಡು ದಿನಗಳ ನಂತರ ಅಂದರೆ ಆಗಸ್ಟ್ 23ರ ನಂತರ ಮಳೆ ಮುಂದುವರಿಯುವ ಲಕ್ಷಣಗಳು ಇವೆ. ಆಗಸ್ಟ್ 24ಹಾಗೂ ಆಗಸ್ಟ್ 25ರಂದು ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆ ಆಗುವ ಸಂಭವವಿದ್ದು, ಇಷ್ಟು ಜಿಲ್ಲೆಗಳಿಗೆ ಎರಡು ದಿನ 'ಯೆಲ್ಲೋ ಅಲರ್ಟ್' ಕೊಡಲಾಗಿದೆ.

IMD Predicts Heavy Rain in Several Districts of Karnataka

ಇನ್ನೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಆಗಾಗ ಹಗುರ ಮಳೆ, ಕೆಲವೊಮ್ಮೆ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಆದರೆ ಈ ಭಾಗದಲ್ಲಿ ಮಳೆ ಅಬ್ಬರ ಅಷ್ಟಾಗಿ ಕಂಡು ಬರುವುದಿಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.

ಕರಾವಳಿಯಲ್ಲಿ ಅಧಿಕ ಮಳೆ ದಾಖಲು

ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಯಲ್ಲಿ ಕರಾವಳಿ ಭಾಗ ಉಡುಪಿ ಜಿಲ್ಲೆಯಲ್ಲಿ ಅಧಿಕ ಮಳೆ ದಾಖಲಾಗಿದೆ. ಈ ಪೈಕಿ ಉಡುಪಿಯಲ್ಲಿ 11ಸೆಂ.ಮೀ, ಕಾರ್ಕಳ ಮತ್ತು ಕೋಟಾದಲ್ಲಿ ತಲಾ 8ಸೆಂ.ಮೀ, ಪಣಂಬೂರು, ಶಿರಾಲಿಯಲ್ಲಿ ತಲಾ 5ಸೆಂ.ಮೀ, ಬೆಳ್ತಂಗಡಿ, ಕುಂದಾಪುರ, ಹೊನ್ನಾವರ, ಶೃಂಗೇರಿಯಲ್ಲಿ ತಲಾ 4ಸೆಂ.ಮೀ. ಮಳೆ ಬಿದ್ದಿದೆ. ಉಳಿದೆಡೆ ತುಂತುತು ಮಳೆ ಬಿದ್ದಿದೆ ಎಂದು ರಾಜ್ಯ ಹವಾಮಾನ ಇಲಾಖೆ ವರದಿ ಮಾಹಿತಿ ನೀಡಿದೆ.

IMD Predicts Heavy Rain in Several Districts of Karnataka

ರಾಜ್ಯದಲ್ಲಿ ಅಲ್ಲಲ್ಲಿ ಮುಂಗಾರು ಮಳೆ ಆರ್ಭಟ ಶುರುವಾಗಿದ್ದರೂ ರಾಯಚೂರಿನಲ್ಲಿ 32.4ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿದೆ. ಅದೇ ರೀತಿ ಮೈಸೂರಿನಲ್ಲಿ 31.8ಡಿಗ್ರಿ ಸೆಲ್ಸಿಯಸ್, ವಿಜಯಪುರದಲ್ಲಿ 31.1ಡಿಗ್ರಿ ಸೆಲ್ಸಿಯಸ್, ಮಂಡ್ಯದಲ್ಲಿ 30ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಮಡಿಕೇರಿಯಲ್ಲಿ ಮಾತ್ರ ಅತ್ಯಂತ ಕನಿಷ್ಠ ತಾಪಮಾನ 17.5ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+