Karnataka Rain: ಸೆ.12ರವರೆಗೆ ಈ ಜಿಲ್ಲೆಗಳಲ್ಲಿ ಮುಂಗಾರು ಚುರುಕು, ಭಾರೀ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು, ಸೆಪ್ಟಂಬರ್ 04: ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆ ಒಂದು ಕಡೆ ಸಕ್ರಿಯವಾದರೆ ಮತ್ತೊಂದು ಕಡೆ ದುರ್ಬಲವಾಗಿರುವುದು ಸಾಮಾನ್ಯ ಎಂಬಂತಾಗಿದೆ. ಈ ಮಧ್ಯೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ತಮ ಮಳೆ ಯಾಗಿದ್ದು, ಈ ಮಳೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟಂಬರ್ 12ರವರೆಗೂ ಮುಂದುವರಿಯಲಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮುಂಗಾರು ಸಕ್ರಿಯವಾಗಿರಲಿದೆ. ಇದರ ಹೊರತಾಗಿ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ನಂತರ ಅಂದರೆ ಗುರುವಾರ ದಿಂದ ಮೂರು ನಿರಂತರವಾಗಿ ಮಳೆ ಆರ್ಭಟಿಸಲಿದೆ. ನಂತರ ಸೆ.12ರವರೆಗೆ ತುಂತುರು ಮಳೆ ಆಗಬಹುದು ಎನ್ನಲಾಗಿದೆ.

imd-predicts-heavy-rain-in-several-parts-of-karnataka

ಈ ಸಂಬಂಧ ಗುರುವಾರ ಸೆಪ್ಟಂಬರ್ 7ರಿಂದ ಮೂರು ದಿನ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟಿಸಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ನಂತರ ಇಲ್ಲಿ ಮಳೆ ಸಾಧಾರಣವಾಗಿ ಬರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಒಳನಾಡಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಮಲೆನಾಡು ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಕಾಣಿಸಿಕೊಳ್ಳಲಿದೆ. ಸೆಪ್ಟಂಬರ್ 5ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಆಗಲಿದೆ. ನಂತರ ಸೆ.7, 8ರಂದು ಕಲಬುರಗಿ, ವಿಜಯಪು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಆಗಲಿದ್ದು, ಈ ಎಲ್ಲ ಜಿಲ್ಲೆಗಳಿಗೆ ಅಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ.

imd-predicts-heavy-rain-in-several-parts-of-karnataka

ಅದೇ ರೀತಿ ದಕ್ಷಿಣ ಒಳನಾಡಿನಲ್ಲಿ ಮುಂದಿನ 3 ದಿನ ಅಂದರೆ ಸೆಪ್ಟಂಬರ್ 7 ರವರೆಗೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ತುಮಕೂರು, ಮೈಸೂರು, ರಾಮನಗರ, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಆಗಾಗ ಸಾಧಾರಣ ಮಳೆ ಬರುವ ನಿರೀಕ್ಷೆ ಇದೆ.

ಸೆ.12ರವರೆಗೆ ಆಗಾಗ ಮಳೆಯ ಸಿಂಚನೆ

ನಂತರದ ನಾಲ್ಕೈದು ದಿನ (ಸೆ.12ರವರೆಗೆ) ಮುಂಗಾರು ಮಳೆ ದಕ್ಷಿಣ ಒಳಾನಡಿನಲ್ಲಿ ಮತ್ತಷ್ಟು ದುರ್ಬಲಗೊಳ್ಳಲಿದೆ. ಆಗ ಕೆಲವು ಕಡೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳು ಇವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದ ಕಲ್ಯಾಣ ಕರ್ನಾಟಕದ ಭಾಗದ ಬೀದರ್‌ನಲ್ಲಿ ಅತ್ಯಧಿಕ 8 ಸೆಂಟಿ ಮೀಟರ್ ಮತ್ತು ಕಲಬುರಗಿಯಲಿ ಚಿಂಚೊಳ್ಳಿಯಲ್ಲಿ 7 ಸೆಂಟಿ ಮೀಟರ್ ಮಳೆ ದಾಖಲಾಗಿದೆ. ಇನ್ನುಳಿದಂತೆ ಬೆಳಗಾವಿಯ ಅಥಣಿ, ಬಾಗಲಕೋಟೆ, ಕೊಪ್ಪಳ, ವಿಜಯಪುರಗಳಲ್ಲಿ ಉತ್ತಮ ಮಳೆ ಆಗಿದೆ. ಹುಬ್ಬಳ್ಳಿ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಕೊರತೆ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+