Karnataka Rain Alert : ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿ, ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು, ಡಿಸೆಂಬರ್‌ 16: ಕಳೆದ ಕೆಲವು ದಿನಗಳಿಂದ ತಣ್ಣಗಾಗಿದ್ದ ಮಳೆರಾಮ ಮತ್ತೆ ತನ್ನ ವರ್ಣಾರ್ಭಟವನ್ನ ಮುಂದುವರೆಸಿದ್ದಾನೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಕಾರಣ ರಾಜ್ಯದ ಹಲವೆಡೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಹಲವೆಡೆ ಸಾಧಾರಣ ಮಳೆ ಆಗಲಿದೆ. ಮಧ್ಯಾಹ್ನದ ಮೇಲೆ ಮಳೆ ಮತ್ತಷ್ಟು ಚುರುಕು ಪಡೆಯಲಿದೆ.

Imd Predicts Heavy Rainfall In Bengaluru And Other Districts In Next 48 Hours

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 18ರಿಂದ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಮುಂದಿನ 5 ದಿನಗಳ ಕಾಲ ರಾಜ್ಯದಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಅಲ್ಲದೇ ಡಿಸೆಂಬರ್ 19 ರಿಂದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯು ಪುನಶ್ಚೇತನಗೊಳ್ಳುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದ್ದು, ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ದಟ್ಟ ಮಂಜು ಮುಸುಕಿನ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ -ತುಮಕೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಇರುವ ಸಾಧ್ಯತೆ ಇದೆ.

ಈಗಾಗಲೇ ಫೆಂಗಲ್ ಚಂಡಮಾರುತದ ಪರಿಣಾಮದಿಂದ ರಾಜ್ಯದ ಜನತೆ ತತ್ತರಗೊಂಡಿದ್ದು, ಸದ್ಯ ಚೇತರಿಸಿಕೊಳ್ಳುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಸೈಕ್ಲೋನ್ ಎಫೆಕ್ಟ್ ನಿಂದ ಮಳೆ ಸುರಿಸಲಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೊಮ್ಮೆ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಪ್ರಸ್ತುತ ರಾಜ್ಯದಲ್ಲಿ ಮಂಜಿನೊಂದಿಗೆ ಚಳಿ ಮುಂದುವರೆದಿದೆ. ಇದರ ಜೊತೆಗೆ ಇದೀಗ ಚಂಡಮಾರುತದ ಪರಿಣಾಮವಾಗಿ ನಾಳೆಯಿಂದ ಎರಡು ದಿನಗಳ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+