Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ

ಬೆಂಗಳೂರು ಜನವರಿ 31: ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜೊತೆಗೆ ಜನವರಿಯಲ್ಲಿ ಇದ್ದ ಚಳಿಗಿಂತ ಫೆಬ್ರವರಿಯಲ್ಲಿ ಚಳಿ ಹೆಚ್ಚಾಗಲಿದೆ ಎಂದು ಐಎಂಡಿ ಭವಿಷ್ಯ ನುಡಿದಿದೆ. ಹಾಗಾದರೆ ಕರ್ನಾಟಕದ ಯಾವ ಭಾಗಗಳಲ್ಲಿ ಫೆಬ್ರವರಿ 1ರಿಂದ ಮಳೆಯಾಗಲಿದೆ? ಎಲ್ಲೆಲ್ಲಿ ಚಳಿ ಅಧಿಕವಾಗಿರಲಿದೆ ಹಾಗೂ ಯಾವ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ ಎನ್ನುವ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಳವೆಡೆ ಫೆಬ್ರವರಿ 1ರಿಂದ ಹಗುರದಿಂದ ಸಾಧಾರಣ ಮಳೆಯಾಗುವ ಸೂಚನೆ ಇದೆ. ದಕ್ಷಿಣ ಹಾಗೂ ಉತ್ತರ ಭಾರತದ ಹಲವು ಭಾಗಗಳಲ್ಲಿ ಮಳೆ, ಮಂಜು ಹೆಚ್ಚಾಗುವ ಸಾಧ್ಯತೆ ಇದ್ದು ಗುಡುಗು ಮಿಂಚಿನ ಸಹಿತ ಮಳೆಯಾಗಲಿದೆ. ಇನ್ನೂ ಕರ್ನಾಟಕದಲ್ಲಿ ಶನಿವಾರದಿಂದ ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮಳೆ ಜೋರಾಗಿರಲಿದೆ.

IMD predicts heavy rainfall in the karnataka including bengaluru in the next 24 hours

ಭಾರೀ ಮಳೆ ಅಲರ್ಟ್

ಜೊತೆಗೆ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಮಳೆಯಾಗುವ ಲಕ್ಷಣ ದಟ್ಟವಾಗಿದೆ. ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಭಾಗಗಳಲ್ಲಿ ಅಲ್ಲದೆ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆಯಲ್ಲೂ ವರುಣ ಅರ್ಭಟಿಸಲಿದ್ದಾನೆ.

ಫೆಬ್ರವರಿ 1 ಮತ್ತು 2ರಂದು ಮಂಡ್ಯ, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ರಾಯಚೂರು, ರಾಮನಗರ, ದಾವಣಗೆರೆ, ಕೋಲಾರ, ಯಾದಗಿರಿ, ವಿಜಯಪುರ, ಹಾವೇರಿ, ಕಲಬುರಗಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗದಲ್ಲೂ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ.

ಎಲ್ಲೆಲ್ಲಿ ಒಣಹವೆ ಮುಂದುವರೆಯಲಿದೆ?

ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ವಿಜಯನಗರ, ತುಮಕೂರು, ಬಳ್ಳಾರಿ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಶಿವಮೊಗ್ಗ, ಕೊಡಗು, ಹಾಸನ, ಹಾವೇರಿ, ಉಡುಪಿ, ಗದಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

IMD predicts heavy rainfall in the karnataka including bengaluru in the next 24 hours

ಬೆಂಗಳೂರು ನಗರದಲ್ಲಿ ಇಂದು 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇದೆ. ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನೂ ರಾಯಚೂರಿನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೊನ್ನಾವರದಲ್ಲಿ 35.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಭಾರತದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ

ಹವಾಮಾನ ಇಲಾಖೆಯ ಪ್ರಕಾರ, ಜನವರಿ 29 ರಿಂದ ಎರಡು ಪಾಶ್ಚಾತ್ಯ ಅವಾಂತರಗಳು ಸಕ್ರಿಯವಾಗುತ್ತಿದ್ದು, ಇದರಿಂದ ಬಯಲು ಸೀಮೆಯಲ್ಲಿ ಮಳೆ ಮತ್ತು ಪರ್ವತಗಳಲ್ಲಿ ಹಿಮಪಾತವಾಗಲಿದೆ. ಫೆಬ್ರವರಿ 1 ರಂದು ಇದು ಸಕ್ರಿಯವಾಗಿರುತ್ತದೆ. ಇದರಿಂದಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಹಿಮಪಾತದೊಂದಿಗೆ ಮಳೆಯಾಗಲಿದೆ. ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಫೆಬ್ರವರಿ 2 ರವರೆಗೆ ಚಳಿಗಾಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡೀಗಢ, ದೆಹಲಿ, ಒಡಿಶಾ, ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಗಂಗಾ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಬೆಳಿಗ್ಗೆ ಮತ್ತು ಸಂಜೆ ದಟ್ಟವಾದ ಮಂಜು ಜನವರಿ 31 ರವರೆಗೆ ಮೇಲುಗೈ ಸಾಧಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+