ನವೆಂಬರ್ 5ರಿಂದ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ
ಬೆಂಗಳೂರು, ನವೆಂಬರ್ 04: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ನವೆಂಬರ್ 5 ರಿಂದ ಭಾರಿ ಮಳೆ ಸುರಿಯಲಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಕರ್ನಾಟಕದಲ್ಲಿ ಹಿಂಗಾರು ಮಳೆ ವೇಗ ಪಡೆದಿದೆ. ಮಂಗಳವಾರ ರಾತ್ರಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದೆ. ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ನಾಳೆಯಿಂದ ನ. 7ರವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರಲಿದೆ. ಉತ್ತರ ಒಳನಾಡಿನಲ್ಲಿ ನ. 7ರವರೆಗೂ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಮೋಡಕವಿದ ವಾತಾವರಣ
ಇಂದು ಕರಾವಳಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ನ. 7ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶ, ಕೇರಳದಲ್ಲಿ ಮಳೆಯಾಗುತ್ತಿದೆ. ನವೆಂಬರ್ 5ರಿಂದ ನ. 7ರವರೆಗೆ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಮತ್ತು ನಾಳೆ ತುಂತುರು ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ನಾಳೆಯಿಂದ ಮೂರು ದಿನ ತುಂತುರು ಮಳೆ ಮುಂದುವರೆಯಲಿದೆ.

ಬೇರೆ ಎಲ್ಲೆಲ್ಲಿ ಮಳೆ
ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಮೇಘಾಲಯ, ಕೇರಳ, ತಮಿಳುನಾಡು ರಾಜ್ಯಗಳಲ್ಲಿಯೂ ಮಳೆಯಾಗುತ್ತಿದೆ. ಇದರ ಪರಿಣಾಮದಿಂದ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ನ. 7ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಹೆಚ್ಚಾಗಲಿದೆ. ನ. 5ರಿಂದ 7ರವರೆಗೆ ಕರಾವಳಿ ಜಿಲ್ಲೆಗಳ ಜೊತೆಗೆ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮಳೆಯಾಗಲಿದೆ. ನ. 5ರ ಬಳಿಕ ರಾಜ್ಯದಲ್ಲಿ 2-3 ದಿನ ಭಾರೀ ಮಳೆಯ ಸಾಧ್ಯತೆಯಿದೆ.
Recommended Video

ಕರ್ನಾಟಕದಲ್ಲಿ ಹಿಂಗಾರು ಆರಂಭ
ಕರ್ನಾಟಕದಲ್ಲಿ ಈಗಾಗಲೇ ಹಿಂಗಾರು ಮಳೆ ಆರಂಭವಾಗಿದ್ದು, ಡಿಸೆಂಬರ್ ತಿಂಗಳ ಅಂತ್ಯದವರೆಗೂ ಆಗಾಗ ಮಳೆಯಾಗುವ ಸಾಧ್ಯತೆಯಿದೆ. ನ. 5ರಿಂದ 2 ದಿನಗಳ ಕಾಲ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ನ. 5ರಿಂದ ಸಾಧಾರಣ ಮಳೆಯಾಗಲಿದೆ.












Click it and Unblock the Notifications