ಮುಂದಿನ 2 ದಿನಗಳ ಕಾಲ ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರಿ ಮಳೆ

ಬೆಂಗಳೂರು, ನವೆಂಬರ್ 17: ಮುಂದಿನ ಎರಡು ದಿನಗಳ ಕಾಲ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹಬ್ಬದ ದಿನವೂ ಕೂಡ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಸೋಮವಾರ ಮೋಡಕವಿದ ವಾತಾವರಣವಿದ್ದು, ಸೆಕೆ ಇತ್ತು, ಸಂಜೆ ವೇಳೆ ಮಳೆಯಾಗಿದೆ.

ಇಂದಿನಿಂದ ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

IMD Predicts Heavy Rainfall, Thundershowers In Karnataka For Next 2 Days

ಫೆಸಿಫಿಕ್ ಮಹಾಸಾಗರದಲ್ಲಿ 'ಲಾ ನಿನಾ' ಏರಿಳಿತದಿಂದ ಚಳಿಯೂ ಹೆಚ್ಚುವ ಸಂಭವವಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನಾ ವಿಭಾಗದ ನಿರ್ದೇಶಕ ಚನ್ನಬಸವ ಅವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಬಾಗಲಕೋಟೆ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಮಲೆನಾಡು ಒಳಗೊಂಡ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೋಮವಾರ ಮೈಸೂರು ಹಾಗೂ ಚಾಮರಾಜನಗರದ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಹಗರುದಿಂದ ಮಳೆಯಾಗಲಿದೆ. ಮಂಗಳವಾರ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

      ಈ ಲಸಿಕೆ Americans ರಿಗೆ ಉಪಯೋಗ ಆಗತ್ತಾ? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+