Karnataka Rains : ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಸಾಧಾರಣ ಮಳೆ

ಬೆಂಗಳೂರು, ನವೆಂಬರ್ 30; ಕರ್ನಾಟಕದಲ್ಲಿ ಮತ್ತೆ ಮಳೆಯಾಗಲಿದೆ. ಈಗಾಗಲೇ ಚಳಿ, ಇಬ್ಬನಿಯ ವಾತಾವರಣ ಎಲ್ಲಾ ಜಿಲ್ಲೆಗಳಲ್ಲಿ ಕಂಡುಬರುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬುಧವಾರ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 10 ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ನಿರೀಕ್ಷೆ ಇದೆ.

ಬಂಗಾಳಕೊಲ್ಲಿಯಲ್ಲಿ ಕಳೆದ ವಾರ ಉಂಟಾಗಿರುವ ವಾಯಭಾರ ಕುಸಿತದ ಪರಿಣಾಮ ಬೆಂಗಳೂರು, ಚೆನ್ನೈ, ಪುದುಚೇರಿಯಲ್ಲಿ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಪ್ರದೇಶದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

weather news

ಕರಾವಳಿ, ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ನಗರ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಜೊತೆಗೆ ಮುಂಜಾನೆ ಚಳಿಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಮಳೆ; ಬೆಂಗಳೂರು ನಗರದಲ್ಲಿ ಕಳೆದ ವಾರ ಮೂರು ದಿನಗಳ ಕಾಲ ಮಳೆ ಸುರಿದಿತ್ತು. ಮೋಡ ಕವಿದ ವಾತಾವರಣವಿತ್ತು. ಬುಧವಾರದಿಂದ ಎರಡು ದಿನಗಳ ಕಾಲ ತುಂತುರು ಮಳೆಯಾಗಲಿದೆ. ಬೆಳಗ್ಗೆ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯ ಆಗ್ನೇಯ ಪ್ರದೇಶ, ಅಂಡಮಾನ್ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶ ರಚನೆಯಾಗುವ ಸಾಧ್ಯತೆ ಇದೆ. ಇದು ವಾಯುವ್ಯ ಕರಾವಳಿಯ ಕಡೆಗೆ ಚಲಿಸುವ ನಿರೀಕ್ಷೆ ಇದೆ. ಆದ್ದರಿಂದ ಮುಂದಿನ ನಾಲ್ಕೈದು ದಿನಗಳ ಕಾಲ ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ಭಾರತೀಯ ಹವಾಮಾನ ಇಲಾಖೆ ಟ್ವೀಟ್‌ನಲ್ಲಿ ಅಂಡಮಾನ್ ನಿಕೋಬಾರ್ ದ್ವೀಪ, ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+