Karnataka rain: ಈ ಏಳು ಜಿಲ್ಲೆಗಳಿಗೆ ಭಾರಿ ಮಳೆ, ಹಳದಿ ಎಚ್ಚರಿಕೆ, ಅ.7ರವರೆಗೆ ಮಳೆ ನಿರೀಕ್ಷೆ
ಬೆಂಗಳೂರು, ಅಕ್ಟೋಬರ್ 01: ಕರ್ನಾಟಕ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ನಿತ್ಯವು ಮಳೆ ಆರ್ಭಟಿಸುತ್ತಿದೆ. ಈ ಮಳೆ ಮುಂದಿನ ಅಕ್ಟೋಬರ್ 6ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆ ಆಗಲಿದೆ. ಈ ಪೈಕಿ ಕರಾವಳಿ ಮತ್ತು ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ.
ರಾಜ್ಯದಲ್ಲಿ ಬಹತೇಕ ಎಲ್ಲ ಕಡೆಗಳಲ್ಲಿ ತಂಪು ವಾತವರಣ ಕಂಡು ಬಂದಿದ್ದು, ಆಗಾಗ ವಿವಿಧ ಪ್ರದೇಶಗಳಲ್ಲಿ ಮಳೆ ಬಂದು ಹೋಗುತ್ತಿದೆ. ಮುಂದಿನ ಐದಾರು ದಿನಗಳ ಪೈಕಿ ಮುಂದಿನ 48 ಗಂಟೆ ಒಟ್ಟು 7 ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರವಾಗಿ ಮಳೆ ಆಗಲಿದೆ. ಉಳಿದೆಡೆ ಸಾಮಾನ್ಯವಾಗಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಮವಾರ ಒಂದು ದಿನ ಭಾರಿ ಮಳೆ ಆಗಲಿದ್ದು 'ಹಳದಿ ಎಚ್ಚರಿಕೆ' ನೀಡಲಾಗಿದೆ. ಮರು ದಿನ ಇದೇ ಜಿಲ್ಲೆಗಳಲ್ಲಿ ಸಾಧಾರಣದಿಂದ ವ್ಯಾಪಕ ಮಳೆ ಸಾಧ್ಯತೆಗಳು ಇವೆ ಎಂದು ಹವಾಮಾನ ತಜ್ಞರು ಅಂದಾಜು ಮಾಡಿದ್ದಾರೆ.
ಅಕ್ಟೋಬರ್ 06ರವರೆಗೆ ಸಾಧಾರಣ ಮಳೆ
ನಂತರದ ಮೂರು ದಿನ ಅಂದರೆ ಅಕ್ಟೋಬರ್ 06ರವರೆಗೆ ಹಗುರದಿಂದ ಸಾಧಾರಣವಾಗಿ ಅಲ್ಲಲ್ಲಿ ಮಳೆ ಬೀಳಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಹಾವೇರಿ, ಬಾಗಲಕೋಟೆ, ಕಲಬುರಗಿ, ರಾಯಚೂರು, ತುಮಕೂರು, ಶಿವಮೊಗ್ಗ, ಚಾಮರಾಜನಗರ, ಗದಗ, ಧಾರವಾಡ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಆಗಲಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡದಲ್ಲಿ 15 ಸೆಂಟಿ ಮೀಟರ್ ಮಳೆ ದಾಖಲಾಗಿದೆ. ಉಳಿದಂತೆ ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ತಲಾ 14ಸೆಂಟಿ ಮಿಟರ್, ಕೊಡಗು, ಉಡುಪಿ ಜಿಲ್ಲೆಗಳಲ್ಲಿ ಕ್ರಮವಾಗಿ 11 ಮತ್ತು 7 ಸೆಂಟಿ ಮೀಟರ್ ಮಳೆ ದಾಖಲಾಗಿದೆ.

ಬೆಳಗಾವಿ, ಯಾದಗಿರಿ, ಶಿವಮೊಗ್ಗ, ಬೆಳಗಾವಿ, ಹಾವೇರಿ, ಮೈಸೂರು, ಹಾಸನ, ಚಿಕ್ಕಬಳ್ಳಾಪುರ, ಕಲಬುರಗಿ ಜಿಲ್ಲೆಗಳಲ್ಲಿ ಆಗಾಗ ಜಿಟಿ ಜಿಟಿ ಮಳೆ ಕಂಡು ಬರಲಿದೆ.
ಬೆಂಗಳೂರಿನ ಹವಾಮಾನ ವರದಿ
ಬೆಂಗಳೂರು ನಗರದ ಹವಾಮಾನ ವರದಿ ನೋಡುವುದಾದರೆ, ನಗರದಲ್ಲಿ ಆಗಾಗ ಮಳೆ ಬರುತ್ತಿದೆ. ಇಂದು ಸಹ ತಂಪು ವಾತಾವರಣ ಕಂಡು ಬಂದಿದೆ. ಕೆಲವು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯಲಿದೆ. ಸಂಜೆ ಹೊತ್ತಿಗೆ ಸಾಧಾರಣ ಮಳೆ ಆಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.












Click it and Unblock the Notifications