Karnataka weather: ಈ ಭಾಗದ ಜಿಲ್ಲೆಗಳಿಗೆ ಮುಂದಿನ 48 ಗಂಟೆ ವ್ಯಾಪಕ ಮಳೆ, ಎಲ್ಲೆಲ್ಲೆ? ಇಲ್ಲಿಗೆ ಮುನ್ಸೂಚನೆ

ಬೆಂಗಳೂರು, ಡಿಸೆಂಬರ್ 12: ಕರ್ನಾಟಕದಲ್ಲಿ ಕೆಲವೆಡೆ ವ್ಯಾಪಕ ಮಳೆ ಮುಂದುವರಿಯುವ ಸೂಚನೆ ಸಿಕ್ಕಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡು ಪೈಕಿ ಕರಾವಳಿಯಲ್ಲಿ ಇಂದಿನಿಂದ ಎರಡು ದಿನ ಮಳೆ ಆರ್ಭಟ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೆಲವು ದಿನಗಳಿಂದ ಮಳೆ ಬೀಳುವಿಕೆ ಪ್ರಮಾಣದಲ್ಲಿ ಇಳಿಕೆ ಆಗಿದೆ. ಹೀಗಿದ್ದರೂ ಸಹಿತ ಕರಾವಳಿಯ ಜಿಲ್ಲೆಗಳು, ಮಲೆನಾಡಿನ ಒಂದೆರಡು ಜಿಲ್ಲೆಗಳಲ್ಲಿ ಸೋಮವಾರ ಉತ್ತಮ ಮಳೆ ಆಗಿದೆ. ಈ ಮಳೆ ಇನ್ನು ಕೆಲವು ದಿನ ವಿವಿಧ ಜಿಲ್ಲೆಗಳಲ್ಲಿ ಮುಂದುವರಿಯಲಿದೆ ಎಂಬ ಮುನ್ಸೂಚನೆ ಇದೆ.

IMD Predicts Normal Rain in Coastal Districts of State in Two Days, see Full Forecast

ಇಂದು ಮಂಗಳವಾರ ಮತ್ತು ಬುಧವಾರ ಎರಡು ಅಂದರೆ ಇಂದಿನಿಂದ ಎರಡು ದಿನ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಸಂಭವವಿದೆ. ಗುಡುಗು, ಮಿಂಚು ಸಹಿತ ಮೂರು ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆ ಆಗಲಿದೆ. ನಂತರ ಕೆಲವು ದಿನ ಮಳೆ ಈ ಭಾಗದಲ್ಲಿ ಮರೆಯಾಗಿ ಅಧಿಕ ಬಿಸಿಲಿನ ವಾತಾವರಣ ನಿರ್ಮಾಣವಾಗಲಿದೆ.

ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆ ನಿರೀಕ್ಷೆ

ಇತ್ತ ದಕ್ಷಿಣ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಮಳೆ ಸಕ್ರಿಯವಾಗಿ ಮುಂದುವರಿಯಲಿದೆ. ಈ ಭಾಗದ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಆಗಾಗ ಜೋರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿ ಮಾಹಿತಿ ನೀಡಿದೆ. ಇದರ ಹೊರತು ರಾಜ್ಯದಲ್ಲಿ ಗಂಭೀರ ಸ್ವರೂಪದ ಹವಾಮಾನ ಬದಲಾವಣೆಗಳು ಇಲ್ಲ ಎಂದು ತಿಳಿದು ಬಂದಿದೆ.

IMD Predicts Normal Rain in Coastal Districts of State in Two Days, see Full Forecast

ಉತ್ತರ ಒಳನಾಡಿನಲ್ಲಿ ಸದ್ಯ ಮಳೆ ಮುನ್ಸೂಚನೆ ಇಲ್ಲ. ಇಲ್ಲಿ ಅಧಿಕ ತಾಪಮಾನ ಉಂಟಾಗಲಿದ್ದು, ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಕೆಲವು ದಿನಗಳಲ್ಲಿ ಬೆಳಗ್ಗೆ ಮತ್ತು ತಡರಾತ್ರಿ ಚಳಿ ವಾತಾವರಣ ಕಂಡು ಬರಬಹುದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಬಿದ್ದ ಮಳೆ ಮಾಹಿತಿ: ಬೆಂಗಳೂರು ಮಳೆ ವರದಿ

ಇನ್ನೂ ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಚಿಕ್ಕಮಗಳೂರಿನ ಮೂಡುಗೆರೆ, ದಕ್ಷಿಣ ಕನ್ನಡದ ಮಂಗಳೂರು, ಉಡುಪಿಯ ಸಿದ್ದಾಪುರ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಸಾಧಾರಣದಿಂದ ಉತ್ತಮ ಮಳೆ ದಾಖಲಾಗಿದೆ.

ಬೆಂಗಳೂರಿನಲ್ಲಿ ಇಂದಿನಿಂದ ಕೆಲವು ದಿನಗಳ ಕಾಲ ತಂಪು ಗಾಳಿ, ಆಗಾಗ ಮೋಡ ಕವಿದ ವಾತಾವರಣ ಉಂಟಾಗಲಿದೆ. ಉಳಿದಂತೆ ಇಲ್ಲಿ ಒಂದೆರಡು ಕಡೆ ಮಳೆ ಸುರಿಯುವ ಲಕ್ಷಣಗಳು ಇವೆ. ತಾಪಮಾನದಲ್ಲಿ ತುಸು ಇಳಿಕೆ ಕಂಡು ಬರಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+