Karnataka Rains : ಕರ್ನಾಟಕದಲ್ಲಿ ಮುಂದಿನ 24 ಗಂಟೆ ಕೆಲವೆಡೆ ಸಾಧಾರಣ ಮಳೆ, ದಟ್ಟ ಮಂಜಿನ ವಾತಾವರಣ ಸೃಷ್ಟಿ: IMD

ಬೆಂಗಳೂರು, ಡಿಸೆಂಬರ್ 29: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮವಾಗಿ ಕರ್ನಾಟಕ ವಿವಿಧ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಮುಂದಿನ 24ಗಂಟೆ ಸಹ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನದಲ್ಲಿ ಮುಂದುವರಿದ ಬದಲಾವಣೆಗಳ ಪ್ರಭಾವದಿಂದಾಗಿ ಪಕ್ಕದ ರಾಜ್ಯ ತಮಿಳುನಾಡಿನಲ್ಲೂ ಸಾಧಾರಣ ಕೆಲವೊಮ್ಮೆ ಭಾರಿ ಮಳೆ ಆಗಿದೆ. ಅದೇ ರೀತಿ ಗುರುವಾರ (ಡಿ.29)ರಂದು ಕರ್ನಾಟಕದಲ್ಲಿ ಅದರಲ್ಲೂ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯ ವಾತಾವರಣ ಕಂಡು ಬರಲಿದೆ.

ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ.ಅದೇ ರೀತಿ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಮಾಹಿತಿ ನೀಡಿದೆ.

IMD Predicts rain and heavy fog in several districts of karnataka in next 24 hours

ಮೈಸೂರು, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಭಾಗದಲ್ಲಿ ಜೋರು ಮಳೆ ನೀರಿಕ್ಷೆ ಇದ್ದು, ಇಲ್ಲಿ ಮುಂದಿನ 48ಗಂಟೆವರೆಗೆ ಆಗಾಗ ಮಳೆ ಬೀಳಲಿದೆ. ಈ ಮಳೆ ನಿಗದಿತ ಪ್ರದೇಶಗಳಲ್ಲಿ ಮೋಡ ಕವಿದ ಹಾಗೂ ಇಡಿ ದಿನ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕಳೆದ 24ಗಂಟೆಯಲ್ಲಿ ದಕ್ಷಿಣ ಒಳನಾಡು ಹಾಗೂ ಮಲೆನಾಡಿನ ಒಂದೆರಡು ಕಡೆ ಮಳೆ ಆಗಿದೆ ಎಂದು ಇಲಾಖೆ ವರದಿ ತಿಳಿಸಿದೆ.

ಇನ್ನು ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಬೆಳಗಿನ ಜಾವ ಮಂಜು ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 27 ಹಾಗೂ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

IMD Predicts rain and heavy fog in several districts of karnataka in next 24 hours

ರಾಜ್ಯಗಳಲ್ಲಿ ಮಳೆ ಹೇಗಿರಲಿದೆ

ಗುರುವಾರ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶಗಳಲ್ಲಿ ಬಹಳಷ್ಟು ಪ್ರಮಾಣದಲ್ಲಿ ಹಿಮಪಾತ ಇಲ್ಲವೇ ಮಳೆ ಬೀಳುತ್ತದೆ. ಉತ್ತರಾಖಂಡ ಮತ್ತು ಅರುಣಾಚಲ ಪ್ರದೇಶದಲ್ಲಿ ಭಾರಿ ಮಳೆಯ ನಿರೀಕ್ಷೆ ಇದೆ. ಲಕ್ಷದ್ವೀಪದಲ್ಲಿ ಮಿಂಚು ಸಹಿತ ಮಳೆಯಾಗಲಿದೆ. ದೆಹಲಿ, ಪಶ್ಚಿಮ ಉತ್ತರ ಪ್ರದೇಶ, ಉತ್ತರ ರಾಜಸ್ಥಾನ, ಪಂಜಾಬ್, ಹರಿಯಾಣ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಚಂಡೀಗಢ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಮತ್ತು ತ್ರಿಪುರಾದಲ್ಲಿ ಹೇರಳವಾಗಿ ಮಂಜು ಹಾಗೂ ಚಳಿ ವಾತಾವರಣ ನಿರ್ಮಾಣವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+