ಹವಾಮಾನ ಇಲಾಖೆ ವರದಿ: ಹತ್ತು ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಮೇ 27: ರಾಜ್ಯದ 10 ಜಿಲ್ಲೆಗಳಲ್ಲಿ ಬುಧವಾರ ಮಳೆಯಾಗಲಿದ್ದು ಒಂದೆರಡು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಕೋಲಾರ ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆ ಬೀಳಲಿದೆ.[ರಣ ಬಿಸಿಲಿಗೆ ಸುಡುತ್ತಿದೆ ಉತ್ತರ ಕರ್ನಾಟಕ]

ಬೆಂಗಳೂರಿನಲ್ಲಿ ಸಂಜೆ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಬುಧವಾರ ಬೆಳಗ್ಗಡೆಯಿಂದಲೇ ಮೋಡ ಕವಿದ ವಾತಾವರಣ ಇದೆ.
ಬೆಂಗಳೂರಿನಲ್ಲಿ ಗರಿಷ್ಠ 32.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದರೆ ಕನಿಷ್ಠ 22.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ವಾತಾವರಣದ ಬಿಸಿ ಏರುತ್ತಿದ್ದು ಹಲವೆಡೆ ಕುಡಿವ ನೀರಿಗೆ ತೊಂದರೆ ಉಂಟಾಗಿದೆ.[ಈ ಬಾರಿ ಮುಂಗಾರಿಗೂ ಎಲ್ ನಿನೋ ಕಾಟ]
ಮಂಗಳವಾರ ಕಲಬುರಗಿಯಲ್ಲಿ ಅತಿ ಹೆಚ್ಚು ಅಂದರೆ 42.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಬಿಜಾಪುರ, ಕೊಪ್ಪಳ, ಬೀದರ್, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ವಾತಾವರಣ 40 ಡಿಗ್ರಿ ಸೆಲ್ಸಿಯಸ್ ದಾಟಿದೆ.












Click it and Unblock the Notifications