Karnataka Rain: ಮತ್ತೆ ವರುಣಾರ್ಭಟ ಶುರು: ರಾಜ್ಯದ ಈ ಜಿಲ್ಲೆಗಳಲ್ಲಿ ಡಿಸೆಂಬರ್‌ 26ರವರೆಗೆ ಮಳೆ

ಬೆಂಗಳೂರು, ಡಿಸೆಂಬರ್‌ 21: ರಾಜ್ಯದಲ್ಲಿ ಚಳಿಯ ಜೊತೆಗೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದು ಮತ್ತು ನಾಳೆ ರಾಜ್ಯಾದ್ಯಂತ ಒಣ ಹವೆ ಇರಲಿದೆ. ಡಿಸೆಂಬರ್‌ 23ರಂದು ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ ಕರ್ನಾಟಕದ ಮೇಲೆ ಒಣ ಹವೆ ಹೆಚ್ಚಾಗಿರಲಿದೆ. ಡಿಸೆಂಬರ್ 24 ರಂದು ಉಡುಪಿ, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉತ್ತರ ಒಳ ಕರ್ನಾಟಕ, ಮತ್ತು ದಕ್ಷಿಣ ಒಳ ಕರ್ನಾಟಕದಾದ್ಯಂತ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗಿರಲಿದೆ.

IMD Predicts Rain In 5 Districts Including Bengaluru From December 26

ಡಿಸೆಂಬರ್ 25 ರಂದು ಮುಂದುವರಿಯುತ್ತದೆ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರಿನ ಪ್ರತ್ಯೇಕ ಪ್ರದೇಶಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್ 26 ರಂದು ಉಡುಪಿ, ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ರಾಮನಗರ, ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆ ನೀಡಿರೋ ಮಾಹಿತಿ ಪ್ರಕಾರ ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್ 23ರಿಂದ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಶಿವಮೊಗ್ಗ, ಚಿತ್ರದುರ್ಗ ದಾವಣಗೆರೆ ಹಾಗೂ ಕೋಲಾರದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ನೀಡಿಲಾಗಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದ್ದು, ಡಿಸೆಂಬರ್‌ 25ರವರೆಗೆ ಅಲ್ಲಲ್ಲಿ ತುಂತುರು ಮಳೆಯಾಗಲಿದೆ. ಅಲ್ಲದೇ ಡಿಸೆಂಬರ್‌ 26 ರಿಂದ 28ರವರೆಗೆ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+