ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ. 22ರಿಂದ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ನವೆಂಬರ್ 21; ರಾಜ್ಯದಲ್ಲಿ ಚುಮು ಚುಮು ಚಳಿಯ ವಾತಾವರಣವಿದೆ. ಆದರೆ ನವೆಂಬರ್ 22ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು ಕಳೆದ ವಾರ ರಾಜ್ಯದಲ್ಲಿ ಮಳೆಯಾಗಿತ್ತು. ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿದಿತ್ತು. ಬಳಿಕ ಮೋಡ ಕವಿದ ವಾತಾವರಣ, ಚಳಿ ಮುಂದುವರೆದಿತ್ತು.

Bengaluru weather: ಬೆಂಗಳೂರಲ್ಲಿ ನ. 20ರ ವರೆಗೆ ಚಳಿ, ಬಳಿಕ 2 ದಿನ ಮಳೆ ಸಾಧ್ಯತೆ Bengaluru weather: ಬೆಂಗಳೂರಲ್ಲಿ ನ. 20ರ ವರೆಗೆ ಚಳಿ, ಬಳಿಕ 2 ದಿನ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 22ರ ಮಂಗಳವಾರದಿಂದ ಮಳೆಯಾಗಲಿದೆ. ಇದರಿಂದಾಗಿ ಚಳಿ ಒಂದೆರಡು ದಿನ ಕಡಿಮೆಯಾಗುವ ಸಾಧ್ಯತೆ ಇದೆ.

ವಾಯುಭಾರ ಕುಸಿತ, ಕರ್ನಾಟಕದ 4 ಜಿಲ್ಲೆಗೆ ಯೆಲ್ಲೋ ಅಲರ್ಟ್ ವಾಯುಭಾರ ಕುಸಿತ, ಕರ್ನಾಟಕದ 4 ಜಿಲ್ಲೆಗೆ ಯೆಲ್ಲೋ ಅಲರ್ಟ್

IMD Predicts Rain In Bengaluru And Other Districts From November 22

ಯಾವ ಜಿಲ್ಲೆಗಳಲ್ಲಿ ಮಳೆ; ಭಾರತೀಯ ಹವಾಮಾನ ಇಲಾಖೆ ಮಾಹಿತಿ ಅನ್ವಯ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚಳಿ ಸಹ ಮುಂದುವರೆಯಲಿದೆ.

ಚಾಮರಾಜನಗರದಲ್ಲಿ ಜಿಟಿಜಿಟಿ ಮಳೆ: ಜನರ ಪರದಾಟ ಚಾಮರಾಜನಗರದಲ್ಲಿ ಜಿಟಿಜಿಟಿ ಮಳೆ: ಜನರ ಪರದಾಟ

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಮೈಸೂರು, ತುಮಕೂರು, ಹಾವೇರಿಯಲ್ಲಿಯೂ ಮಂಗಳವಾರದಿಂದ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚಳಿ ಇದೆ. ಅಲ್ಲದೇ ಭಾರೀ ಇಬ್ಬನಿಯೂ ಸುರಿಯುತ್ತಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿಯೂ ಮಳೆಯಾಗಲಿದೆ. ಪುದುಚೇರಿ ಮತ್ತು ಚೆನ್ನೈನಲ್ಲಿ ಮಳೆಯ ಮುನ್ಸೂಚನೆ ಕೊಡಲಾಗಿದೆ.

IMD Predicts Rain In Bengaluru And Other Districts From November 22

ದಕ್ಷಿಣ ಅಂಡಮಾನ್ ಸಮುದ್ರ ವ್ಯಾಪ್ತಿಯಲ್ಲಿ ನವೆಂಬರ್ 16ರಂದು ವಾಯುಭಾರ ಕುಸಿತ ಉಂಟಾಗಿತ್ತು. ಅದು ಪಶ್ಚಿಮ ಮತ್ತು ವಾಯುವ್ಯ ಪ್ರದೇಶದತ್ತ ಸಾಗಿದೆ. ನವೆಂಬರ್ 19ರ ಬಳಿಕ ಬಂಗಾಳಕೊಲ್ಲಿಯ ದಕ್ಷಿಣ ಭಾಗಕ್ಕೆ ಪ್ರವೇಶ ಪಡೆದಿದೆ.

ಚೆನ್ನೈನಲ್ಲಿ ಭಾರೀ ಮಳೆ; ತಮಿಳುನಾಡಿನ ಚೆನ್ನೈ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಸೋಮವಾರ ಮತ್ತು ಮಂಗಳವಾರ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ಚೆನ್ನೈನಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ.

ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ಮುಂದಿನ 48 ಗಂಟೆಗಳಲ್ಲಿ ನಿಧಾನವಾಗಿ ಪುದುಚೇರಿ ಮೂಲಕ ದಕ್ಷಿಣ ಆಂಧ್ರ ಪ್ರದೇಶದತ್ತ ಸಾಗಲಿದೆ. ಈ ಚಂಡಮಾರುತದ ಪ್ರಭಾವದ ಕಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ನವೆಂಬರ್ 21ರಂದು ವಿಲ್ಲುಪುರಂ, ಚೆಂಗಲಪಟ್ಟು, ಕಾಚೀವರಂ, ಚೆನ್ನೈ, ತಿರುವಳ್ಳೂರ್, ರಾಣಿಪೇಟ್ ಮತ್ತು ಪುದುಚೇರಿಯಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ನವೆಂಬರ್ 22ರಂದು ಸಹ ತಿರುವಳ್ಳೂರು, ಕಾಚೀವರಂ, ರಾಣಿಪೇಟ್ ಪ್ರದೇಶದಲ್ಲಿ ಮಳೆಯಾಗಲಿದೆ.

ಚೆನ್ನೈ ನಗರದಲ್ಲಿ 40 ರಿಂದ 50 ಮಿ. ಮೀ. ಮಳೆಯಾಗಬಹುದು. ಪ್ರಸ್ತುತ ಸ್ಥಿತಿಯನ್ನು ಗಮನಿಸಿದರೆ ವಾಯುಭಾರ ಕುಸಿತ ದುರ್ಬಲವಾಗಲಿದೆ. ಆದ್ದರಿಂದ ಭಾರೀ ಮಳೆ ಬದಲು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮ್ಯಾಟ್‌ ವೆದರ್ ಸರ್ವೀಸಸ್‌ನ ಮುಖ್ಯ ಹವಾಮಾನ ತಜ್ಞ ಮಹೇಶ್ ಪಲವಾಟ್ ಹೇಳಿದ್ದಾರೆ.

ಮೀನುಗಾರರಿಗೆ ಎಚ್ಚರಿಕೆ; ವಾಯುಭಾರ ಕುಸಿತದ ಪರಿಣಾಮವಾಗಿ ಬಂಗಾಳಕೊಲ್ಲಿಯಲ್ಲಿ ಗಂಟೆಗೆ 45 ರಿಂದ 65 ಕಿ. ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ತಮಿಳುನಾಡು ಮತ್ತು ಪುದುಚೇರಿ ಕರಾವಳಿ ಪ್ರದೇಶದಲ್ಲಿ ನವೆಂಬರ್ 23ರ ತನಕ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.

English summary
The India Meteorological Department (IMD) has predicted rainfall in Bengaluru and other districts of Karnataka from November 22. Due to low pressure in bay of Bengal rain expected.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X